21.09.225ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ:
ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ದಿನದಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಈ ವಾತಾವರಣವು ಸೆಪ್ಟೆಂಬರ್ 25ರ ತನಕ ಮುಂದುವರಿಯಲಿದ್ದು, ನಂತರ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮದಿಂದ ಮುಂಗಾರು ಚುರುಕಾಗಿ ಮಳೆ ಹೆಚ್ಚಾಗುವ ಸಾಧ್ಯತೆಗಳಿವೆ.
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಒಂದೆರಡು ತುಂತುರು ಮಳೆಯ ಮುನ್ಸೂಚೆನೆ ಇದೆ. ಈಗಿನಂತೆ ಬಿಸಿಲು ಹಾಗೂ ಮೋಡದ ವಾತಾವರಣ ಸೆಪ್ಟೆಂಬರ್ 25 ರ ತನಕ ಮುಂದುವರಿಯಲಿದ್ದು, 26 ರಿಂದ ಕರಾವಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮಳೆ ಆರಂಭವಾಗುವ ಲಕ್ಷಣಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ಒಳನಾಡು : ಉತ್ತರ ಒಳನಾಡಿನ ಕಲಬುರ್ಗಿ, ಬೀದರ್ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದೊಂದಿಗೆ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಮೋಡದ ವಾತಾವರಣದೊಂದಿಗೆ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಭಾಗಗಳಲ್ಲಿ ಸೆಪ್ಟೆಂಬರ್ 26 ಹಾಗೂ ಉತ್ತರ ಒಳನಾಡಿನಲ್ಲಿ ಸೆಪ್ಟೆಂಬರ್ 28ರ ತನಕ ಅಲ್ಲಲ್ಲಿ ಮಳೆ ಮುಂದುವರಿಯುವ ಸೂಚನೆಗಳಿವೆ.
ಬಂಗಾಳಕೊಲ್ಲಿಯ ಉತ್ತರ ಮಯನ್ಮಾರ್ ಕರಾವಳಿಯಲ್ಲಿ ಸೆಪ್ಟೆಂಬರ್ 25 ರಂದು ಪ್ರಭಲ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ಶಬರಿಮಲೆಯಲ್ಲಿ ತುಲಾ ಮಾಸದ ಪೂಜೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಆನ್‌ಲೈನ್ ಕೊಠಡಿ ಬುಕ್ಕಿಂಗ್…
ಕೇಂದ್ರ ಸರ್ಕಾರ 2015ರಲ್ಲಿ ದೇಶೀಯ ಹಾಗೂ ಆಮದು ಯೂರಿಯಾಗೆ ಬೇವು ಲೇಪನ ಕಡ್ಡಾಯಗೊಳಿಸುವ…
ಮನೆತನವನ್ನು ಕಟ್ಟುವುದು ಕೇವಲ ಆರ್ಥಿಕ ಸೌಲಭ್ಯಗಳನ್ನು ಒದಗಿಸುವುದಲ್ಲ; ಕುಟುಂಬದ ಸದಸ್ಯರ ನಡುವೆ ಪ್ರೀತಿ,…
ಮ್ಯಾನ್ಮಾರ್‌ನಿಂದ ಮಿಜೋರಾಂ ಮೂಲಕ ಸುಮಾರು ₹1,022 ಕೋಟಿ ಮೌಲ್ಯದ 3,103 ಮೆಟ್ರಿಕ್ ಟನ್…
ಅ.11ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದ್ದರೂ, ಅ.14–16ರಿಂದ ಹಿಂಗಾರು…
ಕೃಷಿ ಸೇರಿದಂತೆ ಕುಟುಂಬದ ಬದುಕಿನಲ್ಲಿ ಕಾಣದ ಶ್ರಮವನ್ನು ಗುರುತಿಸಿ ಮೆಚ್ಚುಗೆ ವ್ಯಕ್ತಪಡಿಸುವುದು ಸಂಬಂಧಗಳನ್ನು…