ಕರ್ನಾಟಕದ ವಿವಿಧ ಜಿಲ್ಲೆಗಳೂ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ಇನ್ನೊಂದು ವಾರ ಮಳೆ ಆಗಲಿದೆ. ಹಾಗೂ ಹವಾಮಾನದಲ್ಲಿ ಭಾರೀ ಬದಲಾವಣೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯೂ ವರದಿ ನೀಡಿದೆ.
ಭಾರತೀಯ ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆ ಪ್ರಕಾರ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪ್ರಸ್ತುತ ಮೋಡಕವಿದ ವಾತಾವರಣವು ಆವರಿಸಿದ್ದು, ಬೆಳಗಿನ ಜಾವ ಮತ್ತು ಸಂಜೆಯ ಸಮಯದಲ್ಲಿ ಚಳಿಯ ಅನುಭವ ಸಾಮಾನ್ಯವಾಗಿದೆ. ಈ ವಾತಾವರಣವು ಮುಂಬರುವ ಮಳೆ ಬರುವ ಸಾಧ್ಯತೆಯಾಗಿದೆ. ನವೆಂಬರ್ 17ರಿಂದ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಪ್ರದೇಶಗಳಲ್ಲಿ ಸಾಧರಣ ಮಳೆಯಾಗುವ ಸಾಧ್ಯತೆ ಇದೆ ಎಂದಿದ್ದಾರೆ.
ನವೆಂಬರ್ ಮಧ್ಯಭಾಗವು ಸಾಮಾನ್ಯವಾಗಿ ಚಳಿಗಾಲದ ಆರಂಭವನ್ನು ಸೂಚಿಸುತ್ತದೆ. ಮಳೆಯ ಮುನ್ಸೂಚನೆಯು ತಾಪಮಾನದಲ್ಲಿ ಮತ್ತಷ್ಟು ಇಳಿಕೆಗೆ ಕಾರಣವಾಗಬಹುದು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement

