ಜೂನ್ 17, 18 | ಪುತ್ತೂರು ಜೈನ ಭವನದಲ್ಲಿ ಹಲಸು ಮತ್ತು ಹಣ್ಣುಗಳ ಮೇಳ

June 9, 2023
10:04 AM
ನವತೇಜ ಟ್ರಸ್ಟ್ ಪುತ್ತೂರು, ಬೆಂಗಳೂರಿನ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ, (ಐ.ಐ.ಹೆಚ್.ಆರ್.) ಮತ್ತು ಜೆ.ಸಿ.ಐ. ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ‘ಹಲಸು ಮತ್ತು ಹಣ್ಣುಗಳ ಮೇಳ’ವು 2023 ಜೂನ್ 17 ಶನಿವಾರ ಮತ್ತು 18 ಭಾನುವಾರದಂದು ಜರುಗಲಿದೆ. ಪುತ್ತೂರಿನ ಬೈಪಾಸ್ ರಸ್ತೆಯಲ್ಲಿರುವ ‘ಜೈನ್ ಭವನ’ದಲ್ಲಿ ದಿನಪೂರ್ತಿ ನಡೆಯುವ ಹಲಸು ಮೇಳದಲ್ಲಿ ಹೊಟ್ಟೆ ತಂಪಾಗಿಸುವ, ಮೆದುಳಿಗೆ ಮೇವನ್ನು ನೀಡುವ ವೈವಿಧ್ಯತೆಗಳಿವೆ ನವತೇಜ ಸಂಸ್ಥೆಯ ಸುಹಾಸ್‌ ಮರಿಕೆ ತಿಳಿಸಿದ್ದಾರೆ.
ಸುಮಾರು ಮೂವತ್ತಕ್ಕೂ ಮಿಕ್ಕಿ ಮಳಿಗೆಗಳಲ್ಲಿ ತಾಜಾ ಹಲಸಿನ ಉತ್ಪನ್ನಗಳ ಮಾರಾಟವಿದೆ. ಯಾವುದೇ ಕೃತಕ ಬಣ್ಣ, ಒಳಸುರಿಗಳನ್ನು ಬಳಸದ ಉತ್ಪನ್ನಗಳು ಮೇಳದ ಹೈಲೈಟ್. ಸ್ಥಳದಲ್ಲೇ ತಯಾರಿಸುವ ಹಲವು ಪಾರಂಪರಿಕ ತಿಂಡಿಗಳು ಗ್ರಾಹಕರಲ್ಲಿ ರುಚಿವರ್ಧನೆಯನ್ನು ಮಾಡಲಿವೆ. ಹಲಸಿನ ತಳಿಗಳನ್ನು ಅಭಿವೃದ್ಧಿಪಡಿಸಿದ ಪ್ರಸಿದ್ಧ ನರ್ಸರಿಗಳಿಂದ ಗಿಡಗಳ ಪ್ರದರ್ಶನ ಮತ್ತು ಮಾರಾಟವಿದೆ.
ಹಲಸಿನ ಉಂಡ್ಲಕಾಳು, ಚಿಪ್ಸ್, ಹಪ್ಪಳ, ದೋಸೆ, ಮಂಚೂರಿ, ಕಬಾಬ್, ಮುಳುಕ್ಕ, ಜ್ಯೂಸ್, ಸೊಳೆ ರೊಟ್ಟಿ, ಕೇಕ್, ಹಲ್ವ, ಅತಿರಸ, ದೋಸೆ, ಸೇಮಿಗೆ, ಬನ್ಸ್, ಪಲಾವ್, ಪಾಯಸ, ಸೋಂಟೆ, ಕೊಟ್ಟಿಗೆ, ಗೆಣಸಲೆ, ಪೋಡಿ, ಮಾಂಬಳ, ಹಣ್ಣಿನ ಐಸ್‍ಕ್ರೀಂ.. ಹೀಗೆ ಹತ್ತಾರು ಬಗೆಯನ್ನು ಸವಿಯಲು ಅವಕಾಶ. ಹಲಸಿನ ಹಣ್ಣಿನ ಮಳಿಗೆಯಿದೆ. ಹಲಸಿನ ಬೀಜದ ಹೋಳಿಗೆ, ಹಣ್ಣಿನ ಹೋಳಿಗೆ ಖಾದ್ಯಗಳಲ್ಲಿ ಹೈಲೈಟ್. ಹಲಸಿನ ಇಷ್ಟೊಂದು ಖಾದ್ಯಗಳು ಒಂದೇ ಸೂರಿನಡಿಯಲ್ಲಿ ಲಭ್ಯವಾಗುತ್ತಿರುವುದು ಹಲಸು ಪ್ರಿಯರಿಗೆ ಖುಷಿ ತರಬಹುದಾದ ವಿಚಾರ.
ಬೆಂಗಳೂರಿನ ಐಐಹೆಚ್‍ಆರ್ ಸಂಸ್ಥೆಯು ಹಲಸಿನ ಉತ್ಕೃಷ್ಟ ತಳಿಗಳನ್ನು ಪ್ರದರ್ಶನ ಮಾಡಲಿದೆ. ಇದರ ವಿಜ್ಞಾನಿಗಳು ಹಲಸು ಕೃಷಿಯ ಮತ್ತು ಮಾರಾಟದ ಕುರಿತಾದ ಕೃಷಿಕ ಕೌಶಲ್ಯ ತರಬೇತಿಯನ್ನು ನೀಡಲಿದ್ದಾರೆ. ಕೃಷಿಕರು ತಮ್ಮಲ್ಲಿದ್ದ ವಿವಿಧ ರುಚಿಯ ಹಲಸಿನ ಹಣ್ಣುಗಳನ್ನು ತಂದು ಪ್ರದರ್ಶನ ಮತ್ತು ಮಾರಾಟಕ್ಕಿಡುವ ವ್ಯವಸ್ಥೆಯಿದೆ. ಹಲಸು ಅಲ್ಲದೆ ವಿವಿಧ ಹಣ್ಣುಗಳು, ಕಾಡುಹಣ್ಣುಗಳನ್ನು ಕೂಡಾ ಮಾರಾಟಕ್ಕಿಡಬಹುದಾಗಿದೆ.
ಈ ಋತುವಿನಲ್ಲಿ ಸಿಗುವ ಹಣ್ಣುಗಳ ಪ್ರದರ್ಶನ ಮತ್ತು ಮಾರಾಟ, ವಿಶೇಷ ಆಹಾರ ಮಳಿಗೆ, ಅಗ್ರಿ ಬ್ಯುಸಿನೆಸ್ ಮಳಿಗೆಗಳು, ಹಲಸು ಕೃಷಿಕರ ಅನುಭವದ ಮಾತುಗಳು, ಹೊಸ ಹೊಸ ತಳಿಗಳ ಪರಿಚಯ.. ಹೀಗೆ ಹಲಸು ಮೇಳದಲ್ಲಿ ವಿವಿಧ ವೈವಿಧ್ಯಗಳು.
ವಿದ್ಯಾರ್ಥಿಗಳಿಗೆ ಹಲಸಿನ ಅರಿವನ್ನು ಮೂಡಿಸುವ ಉದ್ದೇಶದಿಂದ ಚಿತ್ರಬಿಡಿಸುವ, ಕವನ ರಚಿಸುವ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಹಲಸಿನ ಹಣ್ಣಿನ ಸೊಳೆಯನ್ನು ತಿನ್ನುವ ಸ್ಪರ್ಧೆಯಿದೆ. ಹಲಸು ಪ್ರಿಯರಿಗೆ ಈ ಎಲ್ಲಾ ಕಾರ್ಯಕ್ರಮಗಳಿಗೆ ಮುಕ್ತ ಪ್ರವೇಶ.
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಶಾಸಕರು, ವಿವಿಧ ರಂಗದ ಗಣ್ಯರು, ಕೃಷಿಕರು ಆಗಮಿಸಲಿದ್ದಾರೆ. ನವತೇಜ ಟ್ರಸ್ಟಿನೊಂದಿಗೆ ಅಕ್ಷ ಕಾಟೇಜ್ ಇಂಡಸ್ಟ್ರೀಸ್, ನವನೀತ್ ಫಾರ್ಮ್ ನರ್ಸರಿ, ಮರಿಕೆ ಸಾವಯವ ಮಳಿಗೆ ಇವರ ಹೆಗಲೆಣೆ. ಎಲ್ಲರಿಗೂ ಮುಕ್ತ ಪ್ರವೇಶ.

Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗ್ರಾಮೀಣ, ನಗರ ಪ್ರದೇಶದ ಕಟ್ಟೆಗಳ ಅಭಿವೃದ್ಧಿ – ಧಾರ್ಮಿಕ ಪರಂಪರೆ ಸಂರಕ್ಷಣೆ
January 31, 2025
10:23 PM
by: The Rural Mirror ಸುದ್ದಿಜಾಲ
ಮಾನವ-ವನ್ಯಜೀವಿ ಸಂಘರ್ಷ ತಗ್ಗಿಸಲು ಸಕಲ ಕ್ರಮ | ಮುಖ್ಯಮಂತ್ರಿ  ಸಿದ್ದರಾಮಯ್ಯ
January 31, 2025
10:11 PM
by: The Rural Mirror ಸುದ್ದಿಜಾಲ
ಎಲ್ಲಾ ಕೃಷಿ ಉತ್ಪನ್ನಗಳಿಗೆ ಎಂಎಸ್‌ಪಿ ಕಾನೂನು ಜಾರಿಗೆ ರಾಜ್ಯ ರೈತ ಸಂಘಟನೆಗಳ ಮನವಿ
January 31, 2025
10:08 PM
by: The Rural Mirror ಸುದ್ದಿಜಾಲ
ಗ್ರೇಟರ್ ಹೆಸರಗಟ್ಟ ಹುಲ್ಲುಗಾವಲು ಸಂರಕ್ಷಣಾ ಮೀಸಲು ಪ್ರದೇಶ ಶುದ್ಧ ಪರಿಸರಕ್ಕೆ ಸಹಕಾರಿ | ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿಕೆ
January 31, 2025
10:05 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror