ಬೈಂದೂರು ಉತ್ಸವ ಸಮಿತಿ ಹಾಗೂ ಸಮಷ್ಠಿ ಪ್ರತಿಷ್ಠಾನ, ರೈತೋತ್ಥಾನ ಬಳಗ, ರೋಟರಿ ಹಾಗೂ ಲಯನ್ಸ್ ಕ್ಲಬ್ ಸಂಯುಕ್ತ ಆಶ್ರಯದಲ್ಲಿ ಮೂರು ದಿನಗಳ ಹಲಸು ಮತ್ತು ಕೃಷಿ ಮೇಳವನ್ನು ಬೈಂದೂರಿನಲ್ಲಿ ಹಮ್ಮಿಕೊಳ್ಳಲಾಗಿತ್ತು. ಬೈಂದೂರಿನಲ್ಲಿ ಇದೇ ಮೊದಲ ಬಾರಿಗೆ ಹಮ್ಮಿಕೊಳ್ಳಲಾಗಿರುವ ಮೂರು ದಿನಗಳ ಹಲಸು ಮೇಳಕ್ಕೆ ಉದ್ಯಮಿ ಗೋಕುಲ್ ಶೆಟ್ಟಿ ಚಾಲನೆ ನೀಡಿದರು. 3 ದಿನಗಳ ಹಲಸು ಮೇಳದಲ್ಲಿ ಹಲಸಿನಿಂದ ತಯಾರಿಸಿದ ಖಾದ್ಯಗಳು ಗಮನಸೆಳೆಯಿತು.
ಹಲಸು ಮೇಳದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಹಲಸು ಬೆಳೆಗಾರರು, ಹಲಸಿನ ಮೌಲ್ಯವರ್ಧನೆ ಮಾಡುವ ವಿವಿಧ ಖಾದ್ಯಗಳ ಮಳಿಗೆಗಳು, ಹಲಸಿನ ಹೋಳಿಗೆ, ಹಪ್ಪಳ, ಸಂಡಿಗೆ, ಮುಳುಕ, ಕಬಾಬ್, ಮಂಚೂರಿ, ಹಲಸಿನ ಕಡಬು, ಐಸ್ ಕ್ರೀಮ್ ಮುಂತಾದ ಹಲವು ಬಗೆಯ ಹಲಸಿನ ಉತ್ಪನ್ನಗಳು ಹಾಗೂ ವಿವಿಧ ತಳಿಯ ಹಣ್ಣಿನ ಗಿಡ ಮತ್ತು ಹೂವಿನ ಗಿಡಗಳ ಮಳಿಗೆಗಳನ್ನು ತೆರೆಯಲಾಗಿದೆ. ಕೈಮಗ್ಗದ ಸೀರೆಗಳು, ಕರಕುಶಲ ವಸ್ತುಗಳು, ಗ್ರಾಮೀಣ ಭಾಗದ ತಿಂಡಿ-ತಿನಿಸುಗಳ ಮಳಿಗೆಗಳು ಜನರ ಮನ ಸೆಳೆದವು.
ಮೇಳಗಳು ಗ್ರಾಹಕರು ಹಾಗೂ ಕೃಷಿಕರಿಗೆ ಸಹಕಾರಿಯಾಗಿದೆ. ಕೆಲಸದ ಒತ್ತಡಗಳ ನಡುವೆ ಕೃಷಿ ಬಗ್ಗೆ ಮಾಹಿತಿ ಹಾಗೂ ಆಸಕ್ತಿ ಹೊಂದಲು ನೆರವಾಗುತ್ತದೆ ಎನ್ನುತ್ತಾರೆ ಕೃಷಿಕ ಗೋಪಾಲ ನಾಯ್ಕ್.
ಚಂದ್ರ ಹಲಸು ಸೇರಿ ಇತರೆ ತಳಿಯ ಹಲಸುಗಳಿಗೆ ಮೇಳದಲ್ಲಿ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ ಎನ್ನುತ್ತಾರೆ ತುಮಕೂರಿನ ಹಲಸು ಬೆಳೆಗಾರ ನರಸಿಂಹ ಮೂರ್ತಿ. ಕಳೆದ 9 ವರ್ಷಗಳಿಂದ ರಾಜ್ಯದ ವಿವಿದೆಡೆ ಹಲಸು ಮೇಳಗಳಲ್ಲಿ ಭಾಗವಹಿಸುತ್ತಿದ್ದೇನೆ, ಇಂತಹ ಮೇಳಗಳಿಂದ ಯಾವುದೇ ಮಧ್ಯವರ್ತಿಗಳಿಲ್ಲದೆ ಹಲಸುಗಳಿಗೆ ಉತ್ತಮ ದರ ದೊರೆಯುತ್ತಿದೆ ಎನ್ನುತ್ತಾರೆ.
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…