Advertisement
ಸುದ್ದಿಗಳು

4,33,333 ರೂಪಾಯಿಗೆ ಹರಾಜಾದ ಒಂದು ಹಲಸಿನ ಹಣ್ಣು…! | ಅಚ್ಚರಿಯೇ ಸರಿ

Share

ಹಲಸಿನ ಸೀಸನ್ ಶುರುವಾಗೇ ಬಿಟ್ಟಿದೆ. ಪಲ್ಯ, ಹುಳಿ, ಹಪ್ಪಳ ಹೀಗೆ ನಾನಾ ಪದಾರ್ಥಗಳನ್ನು ಮಾಡೋದೊಂದೇ ಅಲ್ಲದೇ, ಸಿಹಿ ಸಿಹಿ ಹಲಸಿನ ಸೊಳೆಗಳನ್ನ ತಿನ್ನೋದೇ ಒಂದು ಖುಷಿ. ಇದೀಗ ಇಲ್ಲೊಂದು  ಹಲಸಿನ ಹಣ್ಣು ಬರೋಬ್ಬರಿ 4.33 ಲಕ್ಷ ರೂಪಾಯಿಗೆ ಹರಾಜಾಗಿ ಸಖತ್ ಸುದ್ದಿ ಮಾಡುತ್ತಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮೂಲರಪಟ್ಣದ ನವೀಕೃತ ಮಸೀದಿಯ ಉದ್ಘಾಟನೆ ವೇಳೆ ಈ ಅಪರೂಪದ ಘಟನೆ ನಡೆದಿದೆ.

4,33,333 ರೂಪಾಯಿಗೆ ಹರಾಜು ಗೆದ್ದರು ನೋಡಿ..! : ಮಸೀದಿಗೆ ಅರ್ಪಣೆಯಾಗಿದ್ದ ಹಲಸಿನ ಹಣ್ಣನ್ನು ಹರಾಜಿಗೆ ಇಡಲಾಗಿತ್ತು. ಈ ಹರಾಜಿನಲ್ಲಿ ಸ್ಥಳೀಯ ಪ್ರಮುಖರಾದ ಅಝೀಜ್ ಹಾಗೂ ಲತೀಫ್ ಎಂಬುವವರ ಮಧ್ಯೆ ತೀವ್ರ ಪೈಪೋಟಿ ನಡೆದಿತ್ತು. ಕೊನೆಗೆ ಲತೀಫ್ ಹಲಸಿನ ಹಣ್ಣನ್ನು ಬರೋಬ್ಬರಿ 4,33,333 ರೂಪಾಯಿಗಳಿಗೆ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಈ ಹರಾಜಿನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋ ನೋಡಿದ ಜನರು ಅಚ್ಚರಿ ವ್ಯಕ್ತಪಡಿಸುತ್ತಿದ್ದಾರೆ.

ಇದೊಂದೇ ಅಲ್ಲದೆ, ಹಲವು ವಸ್ತುಗಳನ್ನು ಹರಾಜು ಮಾಡಲಾಗಿದ್ದು, ಒಳ್ಳೆಯ ಮೊತ್ತ ಲಭಿಸಿದೆ. ಈ ಮೊತ್ತವನ್ನು ಆಡಳಿತ ಸಮಿತಿಗೆ ಹಸ್ತಾಂತರಿಸಲಾಗಿದೆ ಎಂದು ತಿಳಿದುಬಂದಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 02-10-2026 | ಸುಳ್ಯದಲ್ಲಿ 100 ಮಿ.ಮೀ.ವರೆಗೆ ಮಳೆ – ಕರಾವಳಿ–ಮಲೆನಾಡಿನಲ್ಲಿ ಮುಂದಿನ 10 ದಿನವೂ ಮಳೆಯ ಸಾಧ್ಯತೆ

ಸುಳ್ಯ ತಾಲೂಕಿನ ಹಲವು ಕಡೆ ನಿನ್ನೆ ಸುಮಾರು 100 ಮಿ.ಮೀ.ನಷ್ಟು ಮಳೆಯಾಗಿದ್ದು, ಕರಾವಳಿ–ಮಲೆನಾಡಿನ…

16 hours ago

ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧ: ಎಥೆನಾಲ್ ಖರೀದಿ 1,200 ಕೋಟಿ ಲೀಟರ್‌ಗೆ ಏರಿಕೆ

ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧವಾಗಿದ್ದು, ಪ್ರಸಕ್ತ ಹಂಗಾಮಿನಲ್ಲಿ ಕಬ್ಬಿನ ಪಾವತಿಯ…

21 hours ago

ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ – ಕಾಫಿ ಬಗ್ಗೆ ಜಾಗೃತಿಗೆ ಚಿಕ್ಕಮಗಳೂರಿನಲ್ಲಿ ಸೈಕಲ್ ಜಾಥಾ

ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನಲ್ಲಿ ‘ಸೈಕಲ್ ಫಾರ್ ಕಾಫಿ’ ಜಾಥಾ ಆಯೋಜಿಸಲಾಗಿದ್ದು,…

22 hours ago

ಏಷ್ಯನ್ ಗೇಮ್ಸ್‌ ಕ್ರಿಕೆಟ್‌ : ಚಿನ್ನದ ಪದಕಕ್ಕಾಗಿ ಭಾರತ–ಪಾಕಿಸ್ತಾನ ಫೈನಲ್‌

ಏಷ್ಯನ್‌ ಗೇಮ್ಸ್‌ ಪುರುಷರ ಕ್ರಿಕೆಟ್‌ ಫೈನಲ್‌ನಲ್ಲಿ ಅ.3ರಂದು ಭಾರತ ಮತ್ತು ಪಾಕಿಸ್ತಾನ ಚಿನ್ನದ…

22 hours ago

ಮಳೆ ಕೊರತೆ ಮುಂದುವರಿದರೆ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಹೇಗಿರಲಿದೆ?

ಮಳೆಯ ಕೊರತೆಯಿಂದ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸುವ ಸಾಧ್ಯತೆ ಹಿನ್ನೆಲೆಯಲ್ಲಿ…

22 hours ago

ಅಡಿಕೆ ಅಕ್ರಮ ಆಮದು ಜಾಲದ ಮೇಲೆ ಇಡಿ ದಾಳಿ – 16 ಕಡೆ ಶೋಧ, ನೂರಾರು ಕೋಟಿ ಹಣದ ವಹಿವಾಟಿನ ತನಿಖೆ

ಅಸ್ಸಾಂ ಮತ್ತು ಪಶ್ಚಿಮ ಬಂಗಾಳದ 16 ಸ್ಥಳಗಳಲ್ಲಿ ವಿದೇಶಿ ಅಡಿಕೆ ಅಕ್ರಮ ಸಾಗಾಟಕ್ಕೆ…

1 day ago