ಹೊಸರುಚಿ | ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ಚಟ್ಟಂಬಡೆ

May 7, 2025
7:00 AM
ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ಚಟ್ಟಂಬಡೆ..

ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ಚಟ್ಟಂಬಡೆಗೆ ಬೇಕಾಗುವ ಸಾಮಗ್ರಿಗಳು :  ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ 3/4 ಕಪ್. ನೀರಿನಲ್ಲಿ ನೆನೆ ಹಾಕಿ ಇಟ್ಟುಕೊಳ್ಳಿ, ಕಡಲೆ ಬೇಳೆ 1/4 ಕಪ್ (ನೆನೆ ಹಾಕಿ), ಉದ್ದಿನ ಬೇಳೆ 2 ಚಮಚ, ಕಡಲೆ ಬೇಳೆ ಜೊತೆ ನೆನೆ ಹಾಕಿ, ಶುಂಠಿ, ಕರಿಬೇವಿನ ಸೊಪ್ಪು, ಓಂ ಕಾಳು (ಅಜ್ವಾನ್), ಹಸಿಮೆಣಸಿನ ಕಾಯಿ 2, ಇದಕ್ಕೆ ಉಪ್ಪು ಹಾಕಿಲ್ಲ.

ಮಾಡುವ ವಿಧಾನ: ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ತೊಳೆದು ನೀರನ್ನು ಸೋಸಿ ಕೊಳ್ಳಿ. ನಂತರ ಜಾರ್ ಗೆ ಹಾಕಿ .ಇದಕ್ಕೆ ನೆನೆ ಹಾಕಿದ ಕಡಲೆ ಬೇಳೆ, ಉದ್ದಿನ ಬೇಳೆ, ಓಂ ಕಾಳು, ಶುಂಠಿ, ಕರಿಬೇವಿನ ಸೊಪ್ಪು, ಹಸಿಮೆಣಸಿನ ಕಾಯಿ ಹಾಕಿ ತರಿ ತರಿಯಾಗಿ ರುಬ್ಬಿಕೊಳ್ಳಿ. ನಂತರ ಇದನ್ನು ಮಿಕ್ಸ್ ಮಾಡಿ . ನಂತರ ಕೈಯಲ್ಲಿ ತಟ್ಟಿ ಕಾದ ಎಣ್ಣೆಯಲ್ಲಿ ಕೆಂಪಗೆ ಕರಿದು ತೆಗೆಯಿರಿ. ಬಿಸಿ ಬಿಸಿಯಾದ ಚಟ್ಟಂಬಡೆ ರೆಡಿ ಬಿಸಿ ಬಿಸಿಯಾದ ಕಾಫಿ ಜೊತೆ ಗರಿಗರಿಯಾದ ಚಟ್ಟಂಬಡೆ ಸೂಪರ್.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

ಇದನ್ನೂ ಓದಿ

ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ
October 10, 2026
2:55 PM
by: ದ ರೂರಲ್ ಮಿರರ್.ಕಾಂ
ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ
October 10, 2026
2:51 PM
by: ದ ರೂರಲ್ ಮಿರರ್.ಕಾಂ
ಡಿಸೆಂಬರ್‌ನಲ್ಲಿ ಮತ್ತಷ್ಟು ತೀವ್ರಗೊಳ್ಳಲಿದೆಯೇ ಎಲ್‌ನಿನೋ..? ಬರ, ಪ್ರವಾಹದ ಅಪಾಯದ ಬಗ್ಗೆ ವಿಶ್ವ ಹವಾಮಾನ ಸಂಸ್ಥೆ ಎಚ್ಚರಿಕೆ
October 10, 2026
2:44 PM
by: ದ ರೂರಲ್ ಮಿರರ್.ಕಾಂ
ಉಪ್ಪಿನಂಗಡಿಯ ಮೌಲ್ಯಾಧಾರಿತ ಶಿಕ್ಷಣ ಕ್ರಾಂತಿಯ ಹರಿಕಾರ ಯು.ಜಿ. ರಾಧ ಭಟ್ – ಗ್ರಾಮೀಣ ನೆಲದಲ್ಲಿ ಅರಳಿದ ಶ್ರೀರಾಮ ಶಾಲೆಯ ಯಶೋಗಾಥೆ
October 10, 2026
2:06 PM
by: ಅರುಣ್‌ ಕುಮಾರ್ ಕಾಂಚೋಡು

You cannot copy content of this page - Copyright -The Rural Mirror