Advertisement
ಅನುಕ್ರಮ

ಹೊಸರುಚಿ | ಹಲಸಿನ ಹಣ್ಣಿನಿಂದ ಇಷ್ಟು ರುಚಿ ಸಿಗುತ್ತದಾ…? ಈ ಕಸ್ಟರ್ಡ್ ಮಿಸ್ ಮಾಡ್ಬೇಡಿ…!

Share

ಬೇಸಿಗೆ ಕಾಲದಲ್ಲಿ ದೊರೆಯುವ ಪೌಷ್ಟಿಕಾಂಶಯುತ ಹಲಸಿನ ಹಣ್ಣಿನಿಂದ ಸುಲಭವಾಗಿ ಮಾಡಬಹುದಾದ ರುಚಿಯಾದ ಡೆಸರ್ಟ್ ಎಂದರೆ ಹಲಸಿನ ಹಣ್ಣಿನ ಕಸ್ಟರ್ಡ್. ಮನೆಯಲ್ಲೇ ಕಡಿಮೆ ಸಮಯದಲ್ಲಿ ತಯಾರಿಸಬಹುದಾದ ಈ ಸಿಹಿ ತಿಂಡಿ ಮಕ್ಕಳಿಂದ ದೊಡ್ಡವರವರೆಗೆ ಎಲ್ಲರಿಗೂ ಇಷ್ಟವಾಗುತ್ತದೆ.

ಬೇಕಾಗುವ ಸಾಮಗ್ರಿಗಳು :

  • ಹಲಸಿನ ಹಣ್ಣು – 1 ಕಪ್ (ಚಿಕ್ಕದಾಗಿ ಕಟ್ ಮಾಡಿದ್ದು)

  • ಕಸ್ಟರ್ಡ್ ಪೌಡರ್ – 3 ಚಮಚ

  • ಹಾಲು – 2 ಕಪ್

  • ಸಕ್ಕರೆ – 3 ಚಮಚ

  • ಏಲಕ್ಕಿ ಪುಡಿ – ಸ್ವಲ್ಪ

  • ಗೋಡಂಬಿ – ಸ್ವಲ್ಪ

  • ಬಾದಾಮಿ – ಸ್ವಲ್ಪ

ಮಾಡುವ ವಿಧಾನ:  ಮೊದಲು ಒಂದು ಬೌಲ್‌ಗೆ ಕಸ್ಟರ್ಡ್ ಪೌಡರ್ ಹಾಗೂ ಸ್ವಲ್ಪ ಹಾಲು (ಸುಮಾರು 4 ಚಮಚ) ಹಾಕಿ ಗುಳ್ಳೆಯಾಗದಂತೆ ಚೆನ್ನಾಗಿ ಮಿಕ್ಸ್ ಮಾಡಿ ಇಟ್ಟುಕೊಳ್ಳಿ. ನಂತರ ಒಂದು ಪಾತ್ರೆಗೆ ಉಳಿದ ಹಾಲು ಮತ್ತು ಸಕ್ಕರೆ ಹಾಕಿ ಕುದಿಸಿ.  ಹಾಲು ಕುದಿಯಲು ಆರಂಭವಾದಾಗ ಏಲಕ್ಕಿ ಪುಡಿ ಮತ್ತು ಮಿಕ್ಸ್ ಮಾಡಿದ ಕಸ್ಟರ್ಡ್ ಪೌಡರ್ ಹಾಕಿ ನಿರಂತರವಾಗಿ ಕಲೆ ಹಾಕುತ್ತಾ ಸ್ವಲ್ಪ ಗಟ್ಟಿಯಾಗುವವರೆಗೆ ಬೇಯಿಸಿ.  ಬಳಿಕ ಸ್ಟವ್ ಆಫ್ ಮಾಡಿ ಇದಕ್ಕೆ ಚಿಕ್ಕದಾಗಿ ಕಟ್ ಮಾಡಿದ ಹಲಸಿನ ಹಣ್ಣು, ಗೋಡಂಬಿ ಮತ್ತು ಬಾದಾಮಿ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ. ಸ್ವಲ್ಪ ತಣ್ಣಗಾದ ಬಳಿಕ ಫ್ರಿಜ್‌ನಲ್ಲಿ ಇಟ್ಟು ತಂಪಾಗಿ ಸವಿದರೆ ಇನ್ನೂ ರುಚಿಯಾಗಿರುತ್ತದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Jackfruit custard is a simple and delicious summer dessert that can be prepared easily at home using ripe jackfruit, milk, custard powder, and dry fruits. It is nutritious, refreshing, and loved by all age groups.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ

ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…

19 hours ago

ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ

ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…

19 hours ago

ಡಿಸೆಂಬರ್‌ನಲ್ಲಿ ಮತ್ತಷ್ಟು ತೀವ್ರಗೊಳ್ಳಲಿದೆಯೇ ಎಲ್‌ನಿನೋ..? ಬರ, ಪ್ರವಾಹದ ಅಪಾಯದ ಬಗ್ಗೆ ವಿಶ್ವ ಹವಾಮಾನ ಸಂಸ್ಥೆ ಎಚ್ಚರಿಕೆ

ಎಲ್‌ನಿನೋ ವಿದ್ಯಮಾನವು ಡಿಸೆಂಬರ್‌ನಲ್ಲಿ ಗರಿಷ್ಠ ತೀವ್ರತೆ ತಲುಪುವ ಸಾಧ್ಯತೆಯಿದ್ದು, 2027ರ ಫೆಬ್ರವರಿವರೆಗೆ ಮುಂದುವರಿಯಬಹುದು…

19 hours ago

ಹವಾಮಾನ ವರದಿ | 10-10-2026 | ರಾಜ್ಯದಲ್ಲಿ ಇಂದಿನಿಂದ ಮಳೆ ಇಳಿಕೆ ; ಅ.16ರಿಂದ ಹಿಂಗಾರು ಮಳೆ ಆರಂಭದ ಮುನ್ಸೂಚನೆ

ಅಕ್ಟೋಬರ್ 11ರಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಿ ಬಿಸಿಲಿನ ವಾತಾವರಣ ಮುಂದುವರಿಯುವ…

22 hours ago

ಶಬರಿಮಲೆ ಯಾತ್ರೆ – ಆನ್‌ಲೈನ್ ಕೊಠಡಿ ಬುಕ್ಕಿಂಗ್ ಮಿತಿ 400ಕ್ಕೆ ಹೆಚ್ಚಳ – ಅ. 7ರಿಂದ ನೋಂದಣಿ ಆರಂಭ

ಶಬರಿಮಲೆಯಲ್ಲಿ ತುಲಾ ಮಾಸದ ಪೂಜೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಆನ್‌ಲೈನ್ ಕೊಠಡಿ ಬುಕ್ಕಿಂಗ್…

2 days ago