ಹೊಸರುಚಿ | ಹಲಸಿನ ಹಣ್ಣಿನ ಹಲ್ವ

August 9, 2025
7:37 AM

ಹಲಸಿನ ಹಣ್ಣಿನ ಹಲ್ವಕ್ಕೆ ಬೇಕಾಗುವ ಸಾಮಗ್ರಿಗಳು :  ಹಲಸಿನ ಹಣ್ಣು 1 ಕಪ್. ಜಾರ್ ಗೆ ಹಾಕಿ ನುಣ್ಣಗೆ ರುಬ್ಬಿಕೊಳ್ಳಿ,  ಕಾಯಿತುರಿ 1/2 ಕಪ್, ಸಕ್ಕರೆ 3/4 ಕಪ್,  ಏಲಕ್ಕಿ ಪುಡಿ ಸ್ವಲ್ಪ, ಗೋಡಂಬಿ ಬಾದಾಮಿ 2 ಚಮಚ ಚಿಕ್ಕ ದಾಗಿ ಕಟ್ ಮಾಡಿ, ತುಪ್ಪ 3 ಚಮಚ.

ಮಾಡುವ ವಿಧಾನ :  ಒಂದು ಬಾಣಲೆಗೆ ಕಾಯಿತುರಿ ಹಾಕಿ ಸ್ವಲ್ಪ ಫ್ರೈ ಮಾಡಿ.  ಒಂದು ತಟ್ಟೆಗೆ ಹಾಕಿ. ನಂತರ ಅದೇ ಬಾಣಲೆಗೆ ಸಕ್ಕರೆ, ಏಲಕ್ಕಿ ಪುಡಿ, 1/4 ಲೋಟ ನೀರು ಹಾಕಿ ಮಿಕ್ಸ್ ಮಾಡಿ. ಸಕ್ಕರೆ ಕರಗಿದ ನಂತರ ರುಬ್ಬಿದ ಹಲಸಿನ ಹಣ್ಣನ್ನು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ.   ಸ್ವಲ್ಪ ಬಣ್ಣ ಬದಲಾದಾಗ ಫ್ರೈ ಮಾಡಿದ ಕಾಯಿತುರಿ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ ಇದಕ್ಕೆ ತುಪ್ಪ , ಕಟ್ ಮಾಡಿದ ಗೋಡಂಬಿ ಬಾದಾಮಿ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ ಪಾಕ ತಳ ಬಿಡುತ್ತಾ ಬಂದಾಗ ಸ್ಟವ್ ಆಫ್ ಮಾಡಿ. ತುಪ್ಪ ಸವರಿದ ತಟ್ಟೆಗೆ ಅಥವಾ ಒಂದು ಕಪ್ ಗೆ ಹಾಕಿ ಬಿಸಿ ಆರಿದ ನಂತರ ಕಟ್ ಮಾಡಿ ಸವಿಯಿರಿ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

ಇದನ್ನೂ ಓದಿ

ಹವಾಮಾನ ವರದಿ | 02-10-2026 | ಸುಳ್ಯದಲ್ಲಿ 100 ಮಿ.ಮೀ.ವರೆಗೆ ಮಳೆ – ಕರಾವಳಿ–ಮಲೆನಾಡಿನಲ್ಲಿ ಮುಂದಿನ 10 ದಿನವೂ ಮಳೆಯ ಸಾಧ್ಯತೆ
October 2, 2026
12:46 PM
by: ಸಾಯಿಶೇಖರ್ ಕರಿಕಳ
ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧ: ಎಥೆನಾಲ್ ಖರೀದಿ 1,200 ಕೋಟಿ ಲೀಟರ್‌ಗೆ ಏರಿಕೆ
October 2, 2026
7:41 AM
by: ದ ರೂರಲ್ ಮಿರರ್.ಕಾಂ
ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ – ಕಾಫಿ ಬಗ್ಗೆ ಜಾಗೃತಿಗೆ ಚಿಕ್ಕಮಗಳೂರಿನಲ್ಲಿ ಸೈಕಲ್ ಜಾಥಾ
October 2, 2026
7:28 AM
by: ದ ರೂರಲ್ ಮಿರರ್.ಕಾಂ
ಏಷ್ಯನ್ ಗೇಮ್ಸ್‌ ಕ್ರಿಕೆಟ್‌ : ಚಿನ್ನದ ಪದಕಕ್ಕಾಗಿ ಭಾರತ–ಪಾಕಿಸ್ತಾನ ಫೈನಲ್‌
October 2, 2026
7:03 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror