ಹೊಸರುಚಿ | ಹಲಸಿನ ಕಾಯಿ ಪೂರಿ

April 26, 2025
8:00 AM

ಹಲಸಿನ ಕಾಯಿ ಪೂರಿಗೆ ಬೇಕಾಗುವ ಸಾಮಗ್ರಿಗಳು: ಹಲಸಿನ ಕಾಯಿ 1/2 ಕಪ್, ಗೋಧಿ ಹುಡಿ.1 ಕಪ್, ಜೀರಿಗೆ 1/2 ಸ್ಪೂನ್, ಉಪ್ಪು ರುಚಿಗೆ, ಶುಂಠಿ ನೀರು
ಕರಿಯಲು ಎಣ್ಣೆ.

ಮಾಡುವ ವಿಧಾನ: ಮೊದಲಿಗೆ ಹಲಸಿನ ಕಾಯಿ ಗೆ ಸ್ವಲ್ಪ ನೀರು ,ಶುಂಠಿ ಹಾಕಿ ನುಣ್ಣಗೆ ರುಬ್ಬಿಕೊಳ್ಳಿ. ನಂತರ ಒಂದು ಪಾತ್ರೆಗೆ ರುಬ್ಬಿಕೊಂಡ ಮಿಶ್ರಣವನ್ನು ಹಾಕಿ ಗೋಧಿ ಹುಡಿ, ಜೀರಿಗೆ, ಉಪ್ಪು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿಕೊಳ್ಳಿ. ಚಪಾತಿ ಹಿಟ್ಟಿನ ಹದಕ್ಕೆ ಕಲಸಿ. ನಂತರ ನಿಂಬೆ ಹಣ್ಣಿನ ಗಾತ್ರಕ್ಕೆ ಉಂಡೆಗಳನ್ನು ಮಾಡಿ. ಪ್ಲಾಸ್ಟಿಕ್ ನಲ್ಲಿ ಉಂಡೆ ಇಟ್ಟು ಒತ್ತಿ ಕಾದ ಎಣ್ಣೆ ಯಲ್ಲಿ ಕರಿಯಿರಿ.  ರುಚಿ ಕರವಾದ ಹಲಸಿನ ಕಾಯಿ ಪೂರಿ ರೆಡಿ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

ಇದನ್ನೂ ಓದಿ

ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ
September 10, 2026
10:59 AM
by: ದ ರೂರಲ್ ಮಿರರ್.ಕಾಂ
ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ
September 9, 2026
9:26 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ
September 9, 2026
1:50 PM
by: ಸಾಯಿಶೇಖರ್ ಕರಿಕಳ
ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?
September 9, 2026
6:43 AM
by: ಅರುಣ್‌ ಕುಮಾರ್ ಕಾಂಚೋಡು

You cannot copy content of this page - Copyright -The Rural Mirror