ಹೊಸರುಚಿ | ಹಲಸಿನ ಬೀಜದ ಅಂಬೋಡೆ

September 27, 2025
12:22 PM

ಹಲಸಿನ ಬೀಜದ ಅಂಬೋಡೆಗೆ ಬೇಕಾಗುವ ಸಾಮಗ್ರಿಗಳು :  ಹಲಸಿನ ಬೀಜ 1.1/4 ಕಪ್,  ಉದ್ದಿನ ಬೇಳೆ 6 ಚಮಚ (ನೆನೆ ಹಾಕಿ ಇಟ್ಟುಕೊಳ್ಳಿ.), ಶುಂಠಿ 1 ಇಂಚು, ಓಂ ಕಾಳು 1/2 ಚಮಚ, ಕರಿಬೇವಿನ ಸೊಪ್ಪು, ಕಾಯಿತುರಿ 2 ಚಮಚ, ಉಪ್ಪು ರುಚಿಗೆ ತಕ್ಕಷ್ಟು, ಹಸಿಮೆಣಸಿನ ಕಾಯಿ 2, ಕರಿಯಲು ಎಣ್ಣೆ.

ಮಾಡುವ ವಿಧಾನ:   ಹಲಸಿನ ಬೀಜ ಜಜ್ಜಿ ಬೇಯಿಸಿ ಕೊಳ್ಳಿ.  ಜಾರ್ ಗೆ ಬೇಯಿಸಿದ ಹಲಸಿನ ಬೀಜ ಹಸಿಮೆಣಸಿನ ಕಾಯಿ, ಶುಂಠಿ, ಉಪ್ಪು ರುಚಿಗೆ ತಕ್ಕಷ್ಟು, ತೊಳೆದು ಕೊಂಡ ಉದ್ದಿನ ಬೇಳೆ,ಹಾಕಿ ನುಣ್ಣಗೆ ರುಬ್ಬಿಕೊಳ್ಳಿ. ನಂತರ ಒಂದು ಪಾತ್ರೆಗೆ ಹಾಕಿ ಇದಕ್ಕೆ ಕರಿಬೇವಿನ ಸೊಪ್ಪು, ಓಂ ಕಾಳು, ಕಾಯಿತುರಿ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ. ನಂತರ ಕಾದ ಎಣ್ಣೆಯಲ್ಲಿ ಸ್ವಲ್ಪ ಸ್ವಲ್ಪ ಹಾಕಿ ಕೆಂಪಗೆ ಕರಿದು ತೆಗೆಯಿರಿ. ನಿಮಗೆ ಇಷ್ಟವಾದ ಚಟ್ನಿ, ಸಾಂಬಾರ್ ಜೊತೆ ಅಥವಾ ಹಾಗೆ ಕೂಡಾ ತಿನ್ನಬಹುದು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

ಇದನ್ನೂ ಓದಿ

ದೇಶಾದ್ಯಂತ 9.25 ಕೋಟಿ ರೈತ ಐಡಿ ನಿರ್ಮಾಣ | ರಸಗೊಬ್ಬರ ಬ್ಲಾಕ್‌ ಮಾರ್ಕೆಟ್‌ ವಿರುದ್ಧ ಕಟ್ಟುನಿಟ್ಟಾಗಿ ಕ್ರಮಕ್ಕೆ ಕೇಂದ್ರ ಕೃಷಿ ಸಚಿವರ ಸೂಚನೆ
April 4, 2026
7:34 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ
April 3, 2026
9:24 PM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ
April 3, 2026
3:55 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror