ಹಲಸಿನ ಬೀಜದ ಅಂಬೋಡೆಗೆ ಬೇಕಾಗುವ ಸಾಮಗ್ರಿಗಳು : ಹಲಸಿನ ಬೀಜ 1.1/4 ಕಪ್, ಉದ್ದಿನ ಬೇಳೆ 6 ಚಮಚ (ನೆನೆ ಹಾಕಿ ಇಟ್ಟುಕೊಳ್ಳಿ.), ಶುಂಠಿ 1 ಇಂಚು, ಓಂ ಕಾಳು 1/2 ಚಮಚ, ಕರಿಬೇವಿನ ಸೊಪ್ಪು, ಕಾಯಿತುರಿ 2 ಚಮಚ, ಉಪ್ಪು ರುಚಿಗೆ ತಕ್ಕಷ್ಟು, ಹಸಿಮೆಣಸಿನ ಕಾಯಿ 2, ಕರಿಯಲು ಎಣ್ಣೆ.
ಮಾಡುವ ವಿಧಾನ: ಹಲಸಿನ ಬೀಜ ಜಜ್ಜಿ ಬೇಯಿಸಿ ಕೊಳ್ಳಿ. ಜಾರ್ ಗೆ ಬೇಯಿಸಿದ ಹಲಸಿನ ಬೀಜ ಹಸಿಮೆಣಸಿನ ಕಾಯಿ, ಶುಂಠಿ, ಉಪ್ಪು ರುಚಿಗೆ ತಕ್ಕಷ್ಟು, ತೊಳೆದು ಕೊಂಡ ಉದ್ದಿನ ಬೇಳೆ,ಹಾಕಿ ನುಣ್ಣಗೆ ರುಬ್ಬಿಕೊಳ್ಳಿ. ನಂತರ ಒಂದು ಪಾತ್ರೆಗೆ ಹಾಕಿ ಇದಕ್ಕೆ ಕರಿಬೇವಿನ ಸೊಪ್ಪು, ಓಂ ಕಾಳು, ಕಾಯಿತುರಿ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ. ನಂತರ ಕಾದ ಎಣ್ಣೆಯಲ್ಲಿ ಸ್ವಲ್ಪ ಸ್ವಲ್ಪ ಹಾಕಿ ಕೆಂಪಗೆ ಕರಿದು ತೆಗೆಯಿರಿ. ನಿಮಗೆ ಇಷ್ಟವಾದ ಚಟ್ನಿ, ಸಾಂಬಾರ್ ಜೊತೆ ಅಥವಾ ಹಾಗೆ ಕೂಡಾ ತಿನ್ನಬಹುದು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್‌ಐ ಪ್ರಾತ್ಯಕ್ಷಿಕೆ ಮುಂದುವರಿದಿದೆ. ವೈಜ್ಞಾನಿಕ ಕ್ರಮಗಳು ಮತ್ತು…
ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…
ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…
ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಸಮಾಜದ ನಿಜವಾದ ಸಂಸ್ಕೃತಿಯನ್ನು ತೋರಿಸುತ್ತದೆ. ಸಣ್ಣ ಸಣ್ಣ ಸರಿಯಾದ…
ಗುಜ್ಜೆ ಮತ್ತು ಕಡಲೆ ಬಳಸಿ ತಯಾರಿಸುವ ಸಾಂಪ್ರದಾಯಿಕ ಗಸಿ ರುಚಿಕರ ಆಹಾರ. ಚಪಾತಿ…
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…