Advertisement
ಅನುಕ್ರಮ

ಹೊಸರುಚಿ | ಹಲಸಿನ ಬೀಜ ಮತ್ತು ಕಾಳು ಪಲ್ಯ

Share

ಹಲಸಿನ ಬೀಜ ಮತ್ತು ಕಾಳು ಪಲ್ಯ ಬೇಕಾಗುವ ಸಾಮಗ್ರಿಗಳು : ಹಲಸಿನ ಬೀಜ 3/4 ಕಪ್. ಜಜ್ಜಿ ಕ್ಲೀನ್ ಇಟ್ಟುಕೊಳ್ಳಿ . ಕಾಬೂಲ್ ಕಡಲೆ 3 ಚಮಚ,
ಕಪ್ಪು ಕಡಲೆ 3 ಚಮಚ, ಹುರುಳಿ ಕಾಳು 3 ಚಮಚ, ನೆಲಗಡಲೆ 2 ಚಮಚ ಕಾಳುಗಳನ್ನು ನೆನೆ ಹಾಕಿ – ನಂತರ ತೊಳೆದು ಇಟ್ಟುಕೊಳ್ಳಿ, ಕುಕ್ಕರ್ ಗೆ ನೀರು, ಉಪ್ಪು ಹಾಕಿ ಬೇಯಿಸಿ ಸೋಸಿ ಕೊಳ್ಳಿ.

ಫ್ರೈ ಮಾಡಿಕೊಳ್ಳಲು : ಕೊತ್ತಂಬರಿ ಬೀಜ 1 ಚಮಚ, ಉದ್ದಿನ ಬೇಳೆ ಸ್ವಲ್ಪ, ಕೆಂಪು ಮೆಣಸು 2, ಬೆಳ್ಳುಳ್ಳಿ 4 ಎಸಳು, ಈರುಳ್ಳಿ 1 ಚಿಕ್ಕದು, ಜೀರಿಗೆ ಕಾಯಿತುರಿ ಹಾಕಿ ಫ್ರೈ ಮಾಡಿ. ನಂತರ ಜಾರ್ ಗೆ ಹಾಕಿ ತರಿ ತರಿಯಾಗಿ ರುಬ್ಬಿಕೊಳ್ಳಿ.

ಮಾಡುವ ವಿಧಾನ: ಬಾಣಲೆಗೆ ಎಣ್ಣೆ, ಸಾಸಿವೆ ಉದ್ದಿನ ಬೇಳೆ, ಕೆಂಪು ಮೆಣಸು, ಕರಿಬೇವಿನ ಸೊಪ್ಪು, ಹಾಕಿ ಒಗ್ಗರಣೆ ಚಟಪಟಾಯಿಸಿ ಇದಕ್ಕೆ ಬೇಯಿಸಿದ ಕಾಳು ಬೇಳೆ ಹಾಕಿ, ನಂತರ ಅರಿಸಿನ ಪುಡಿ, ಚಿಕ್ಕ ತುಂಡು ಬೆಲ್ಲ, ನಂತರ ರುಬ್ಬಿದ ಮಿಶ್ರಣವನ್ನು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ ಸ್ಟವ್ ಆಫ್ ಮಾಡಿ.
ತುಪ್ಪ ಅನ್ನ ದ ಜೊತೆಗೆ ಸೂಪರ್.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

Published by
ದಿವ್ಯ ಮಹೇಶ್

Recent Posts

ಪಶ್ಚಿಮ ಘಟ್ಟದ ಪರಿಸರ ಸೂಕ್ಷ್ಮ ಪ್ರದೇಶ ವ್ಯಾಪ್ತಿಯ ಭಯದಲ್ಲಿ ಕೇರಳದ ರಬ್ಬರ್ ರೈತರು – ತೋಟಗಾರಿಕೆಗೆ ಮುಂದೆ ಏನು?

ಪಶ್ಚಿಮ ಘಟ್ಟದ ESA ಪ್ರಸ್ತಾವನೆ ಮತ್ತೆ ಕೇರಳದ ರಬ್ಬರ್ ಹಾಗೂ ಇತರ ತೋಟಗಾರಿಕಾ…

10 hours ago

ಫ್ಲೈಓವರ್ ಬಳಿಕ ಕಲ್ಲಡ್ಕದಲ್ಲಿ ಏನು ಬದಲಾವಣೆಯಾಗಿದೆ..?

ಕಲ್ಲಡ್ಕದ 2.1 ಕಿ.ಮೀ. ಉದ್ದದ ಫ್ಲೈಓವರ್ ಸಂಚಾರಕ್ಕೆ ಮುಕ್ತವಾದ ಬಳಿಕ ಪೇಟೆಯೊಳಗಿನ ವಾಹನ…

18 hours ago

ಹಲಸಿನಂತೆಯೇ ಕಾಣುವ ಈ ಹಣ್ಣು ನಿಮಗೆ ಗೊತ್ತೇ?

ಹಲಸಿನ ಹಣ್ಣಿನಂತೆ ಕಾಣುವ ಚೆಂಪೆಡಕ್ ಹಣ್ಣು ರುಚಿ ಮತ್ತು ಸುವಾಸನೆಯ ಜತೆಗೆ ವಿಟಮಿನ್‌…

19 hours ago

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಮಹಿಳೆಯರ ಓಟಕ್ಕೆ ಚಿನ್ನದ ಹೊಳಪು – 4×400 ಮೀ. ರಿಲೇಯಲ್ಲಿ ಭರ್ಜರಿ ಗೆಲುವು

ಏಷ್ಯನ್ ಗೇಮ್ಸ್‌ನಲ್ಲಿ ಮಹಿಳೆಯರ 4×400 ಮೀಟರ್ ರಿಲೇಯಲ್ಲಿ ಭಾರತ 3:29.69 ಸಮಯದೊಂದಿಗೆ ಚಿನ್ನ…

19 hours ago

ಕಾಳುಮೆಣಸು ಮಾರುಕಟ್ಟೆಯಲ್ಲಿ ಏನಾಗುತ್ತಿದೆ?

ಆಗಮನ ಕಡಿಮೆಯಾಗಿದ್ದರೂ ದೇಶದ ಕಾಳುಮೆಣಸು ಬೆಲೆಯಲ್ಲಿ ಇಳಿಕೆ ಕಂಡುಬಂದಿದ್ದು, ದಾಸ್ತಾನು ಮತ್ತು ಬೇಡಿಕೆ…

1 day ago

ಹವಾಮಾನ ವರದಿ | 29-09-2026 | ಅ.6 ರವರೆಗೆ ಹಲವು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ

ಅರಬ್ಬಿ ಸಮುದ್ರದ ಗಾಳಿಯು ಶ್ರೀಲಂಕಾ ಹಾಗೂ ತಮಿಳುನಾಡು ಕರಾವಳಿ ಮೂಲಕ ರಾಜ್ಯಕ್ಕೆ ಪ್ರವೇಶಿಸುತ್ತಿರುವ…

1 day ago