Advertisement
Share

ಹಲಸಿನ ಬೀಜ ಚನ್ನ ಬೋಂಡಾಗೆ  ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ :

ಹಲಸಿನ ಬೀಜ 15, ಸಿಪ್ಪೆ ತೆಗೆದು ಜಜ್ಜಿ ಇಡಿ,  ಚನ್ನ 1/4 ಕಪ್. 3 ಗಂಟೆ ನೆನೆ ಹಾಕಿ, ಆಲೂಗಡ್ಡೆ 1 ಚಿಕ್ಕದು ಸಿಪ್ಪೆ ತೆಗೆದು ಕಟ್ ಮಾಡಿ. ಇವು 3 ನ್ನು ಕುಕ್ಕರ್ ಗೆ ಹಾಕಿ ನೀರು ಹಾಕಿ ಬೇಯಿಸಿ ಕೊಳ್ಳಿ. ತಣ್ಣಗಾದ ನಂತರ ನೀರು ತೆಗೆದು ಜಾರ್ ಗೆ ಹಾಕಿ ರುಚಿಗೆ ತಕ್ಕಷ್ಟು ಉಪ್ಪು ಹಾಕಿ ನುಣ್ಣಗೆ ರುಬ್ಬಿಕೊಳ್ಳಿ. ಬಾಣಲೆ ಬಿಸಿ ಆದಾಗ ಅದಕ್ಕೆ ಎಣ್ಣೆ 4 ಚಮಚ, ಉದ್ದಿನ ಬೇಳೆ 1/2ಚಮಚ, ಸಾಸಿವೆ 1/4ಚಮಚ, ಜೀರಿಗೆ 1 ಚಮಚ , ಕರಿಬೇವಿನ ಸೊಪ್ಪು ಹಾಕಿ ಒಗ್ಗರಣೆ ಮಾಡಿಕೊಳ್ಳಿ. ನಂತರ ಕಟ್ ಮಾಡಿದ ಈರುಳ್ಳಿ 1, ಚಿಕ್ಕ ದಾಗಿ ಕಟ್ ಮಾಡಿದ ಹಸಿಮೆಣಸು 2 ಹಾಕಿ ಚೆನ್ನಾಗಿ ಫ್ರೈ ಮಾಡಿ ಇದಕ್ಕೆ ಬೇಯಿಸಿ ರುಬ್ಬಿದ ಮಿಶ್ರಣವನ್ನು ಹಾಕಿ , ಕೊತ್ತಂಬರಿ ಪುಡಿ , ಗರಂ ಮಸಾಲ 1 ಚಮಚ ,ಕೊತ್ತಂಬರಿ ಸೊಪ್ಪುಹಾಕಿ ಚೆನ್ನಾಗಿ ಮಿಕ್ಸ್ ಮಾಡಿ.

ನಿಂಬೆ ಗಾತ್ರದ ಉಂಡೆಗಳನ್ನು ಮಾಡಿ ಇಡಿ. ಹಿಟ್ಟು ಕಲೆಸಿ ಕೊಳ್ಳಲು. ಕಡಲೆ ಹಿಟ್ಟು 1 ಕಪ್, ನೀರು , ಉಪ್ಪು ರುಚಿಗೆ ತಕ್ಕಷ್ಟು ಹಾಕಿ ಹಿಟ್ಟು ಕಲೆಸಿ ಕೊಳ್ಳಿ.ಉಂಡೆಗಳನ್ನು ಹಿಟ್ಟಿಗೆ ಅದ್ದಿ , ಕಾದ ಎಣ್ಣೆಯಲ್ಲಿ ಕೆಂಪಗೆ ಕರಿದು ತೆಗೆಯಿರಿ. ಬಿಸಿ ಬಿಸಿಯಾದ ಹಲಸಿನ ಬೀಜ ಚನ್ನ ಬೋಂಡಾ ರೆಡಿ.
ಸಾಸ್ ಜೊತೆ ಸವಿಯಿರಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

Published by
ದಿವ್ಯ ಮಹೇಶ್

Recent Posts

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

17 hours ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

2 days ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

2 days ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

2 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

2 days ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

2 days ago