ಮೇಘಾಲಯದಲ್ಲಿ “ಜಾಕ್‌ ಫ್ರುಟ್‌ ಮಿಶನ್”‌ ಮೂಲಕ ಹಲಸು ಬೆಳೆಗೆ ಪ್ರೋತ್ಸಾಹ | ಮೇಘಾಲಯದ ಭೇಟಿ ನೀಡಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಹಲಸಿನ ಹಣ್ಣು ಗಿಫ್ಟ್‌ |

July 15, 2025
8:01 AM

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೇಘಾಲಯಕ್ಕೆ ಭೇಟಿ ನೀಡಿದ ಸಂದರ್ಭ ಹಲಸಿನ ಹಣ್ಣನ್ನು ಉಡುಗೊರೆಯಾಗಿ ನೀಡಲಾಯಿತು. ಬಿಜೆಪಿ ಹಿರಿಯ ನಾಯಕ ಎ ಎಲ್‌ ಹೆಕ್‌ ಅವರು ಸಚಿವರಿಗೆ ಉಡುಗೊರೆ ನೀಡಿ ಮೇಘಾಲಯ ಸರ್ಕಾರವು ‘ಮಿಷನ್ ಜಾಕ್‌ ಫ್ರುಟ್’ ಅಡಿಯಲ್ಲಿ ಹಲಸಿನ ಕೃಷಿ ಮತ್ತು ಸಂಸ್ಕರಣೆಯನ್ನು ಉತ್ತೇಜಿಸುವ ವಿವರಗಳನ್ನು ತಿಳಿಸಿದರು.

ಮೇಘಾಲಯಕ್ಕೆ ಭೇಟಿ ನೀಡಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಖಾಸಗಿ ರೆಸಾರ್ಟ್‌ನಲ್ಲಿ ಮೇಘಾಲಯದ ರೈತರು  ಬೆಳೆಸಲಾದ ಹಲಸಿನ ಹಣ್ಣನ್ನು ಕೃಷಿಕರ ಪರವಾಗಿ ಆತಿಥ್ಯದ ಸಂಕೇತವಾಗಿ ಮತ್ತು ರಾಜ್ಯದ ಶ್ರೀಮಂತ ಕೃಷಿ ಉತ್ಪನ್ನಗಳ ಸಂಕೇತವಾಗಿ ಎ.ಎಲ್. ಹೆಕ್ ಅವರು ಉಡುಗೊರೆಯಾಗಿ ನೀಡಿದರು.  ಇದೇ ಸಂದರ್ಭ, ಹಲಸಿನ ಕೃಷಿ ಮತ್ತು ಸಂಸ್ಕರಣೆಯನ್ನು ಉತ್ತೇಜಿಸುವ ಮೇಘಾಲಯ ಸರ್ಕಾರ ಯೋಜನೆಯನ್ನು ತಿಳಿಸಿದರು.  ಹಲಸು ಹಣ್ಣಿನ ವಾಣಿಜ್ಯ ಸಾಮರ್ಥ್ಯವನ್ನು ಬಳಸಿಕೊಳ್ಳುವ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಜೀವನೋಪಾಯವನ್ನು ಸುಧಾರಿಸುವ ಗುರಿಯನ್ನು ʼಮಿಷನ್ ಜಾಕ್‌ ಫ್ರುಟ್’  ಹೊಂದಿದೆ ಎಂದು ಹೆಕ್‌ ಅವರು ಹೇಳಿದರು. ಹಣಕಾಸು ಸಚಿವರು ಈ  ಕಾರ್ಯಕ್ಕಾಗಿ ತಮ್ಮ ಕೃತಜ್ಞತೆಯನ್ನು ವ್ಯಕ್ತಪಡಿಸಿದರು ಮತ್ತು ಉತ್ಪನ್ನಗಳ ಗುಣಮಟ್ಟವನ್ನು ಶ್ಲಾಘಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 02-10-2026 | ಸುಳ್ಯದಲ್ಲಿ 100 ಮಿ.ಮೀ.ವರೆಗೆ ಮಳೆ – ಕರಾವಳಿ–ಮಲೆನಾಡಿನಲ್ಲಿ ಮುಂದಿನ 10 ದಿನವೂ ಮಳೆಯ ಸಾಧ್ಯತೆ
October 2, 2026
12:46 PM
by: ಸಾಯಿಶೇಖರ್ ಕರಿಕಳ
ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧ: ಎಥೆನಾಲ್ ಖರೀದಿ 1,200 ಕೋಟಿ ಲೀಟರ್‌ಗೆ ಏರಿಕೆ
October 2, 2026
7:41 AM
by: ದ ರೂರಲ್ ಮಿರರ್.ಕಾಂ
ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ – ಕಾಫಿ ಬಗ್ಗೆ ಜಾಗೃತಿಗೆ ಚಿಕ್ಕಮಗಳೂರಿನಲ್ಲಿ ಸೈಕಲ್ ಜಾಥಾ
October 2, 2026
7:28 AM
by: ದ ರೂರಲ್ ಮಿರರ್.ಕಾಂ
ಏಷ್ಯನ್ ಗೇಮ್ಸ್‌ ಕ್ರಿಕೆಟ್‌ : ಚಿನ್ನದ ಪದಕಕ್ಕಾಗಿ ಭಾರತ–ಪಾಕಿಸ್ತಾನ ಫೈನಲ್‌
October 2, 2026
7:03 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror