ಸಾಮಾನ್ಯವಾಗಿ ಜನರು ಊಟವಾದ ಮೇಲೆ ಬೆಲ್ಲ ತಿನ್ನುತ್ತಾರೆ. ಆದರೆ ಅದೇಕೆ ಎನ್ನುವುದು ಹಲವರಿಗೆ ಗೊತ್ತಿಲ್ಲ. ಚಳಿಗಾಲrದಲ್ಲಿ ಬೆಲ್ಲ ತಿಂದರೆ ವಿಟಮಿನ್ ಗಳು ಮತ್ತು ಲವಣಗಳು ಹೊಟ್ಟೆ ಸೇರುತ್ತವೆ. ಜೊತೆಯಲ್ಲಿಯೇ ನಿರೋಧಕ ಶಕ್ತಿಯನ್ನು ಸೃಷ್ಟಿಸಿ ದೇಹವನ್ನು ಬೆಚ್ಚಗಿಡುತ್ತದೆ. ಶೀತ ಮತ್ತು ಕೆಮ್ಮು ಇದ್ದರೆ ನಿವಾರಿಸುವುದಲ್ಲದೆ, ದೇಹದ ಉಷ್ಣತೆಯನ್ನು ನಿಯಂತ್ರಣದಲ್ಲಿಡುತ್ತದೆ. ಇದೇ ಕಾರಣದಿಂದ ಈ ಸಹಜ ಸಿಹಿ ಭಾರತದಲ್ಲಿ ಅತೀ ಜನಪ್ರಿಯ. ಇಲ್ಲಿ ಬೆಲ್ಲದ 15 ಲಾಭಗಳನ್ನು ನೋಡಿ.
1. ಮಲಬದ್ಧತೆಯಿಂದ ರಕ್ಷಣೆ : ಬೆಲ್ಲ ದೇಹದಲ್ಲಿ ಜೀರ್ಣಕ್ರಿಯೆಗೆ ನೆರವಾಗುವ ಎನ್‌ಜೈಮ್‌ಗಳನ್ನು ಸಕ್ರಿಯಗೊಳಿಸುತ್ತದೆ. ಜಠರದ ಚಲನೆಗೆ ನೆರವಾಗಿ ಮಲಬದ್ಧತೆಯಿಂದ ರಕ್ಷಿಸುತ್ತದೆ.
2. ಮೂತ್ರಪಿಂಡಕ್ಕೆ ನೆರವು : ಬೆಲ್ಲವು ಮೂತ್ರಪಿಂಡದಲ್ಲಿರುವ ವಿಷಕಾರಿ ರಾಸಾಯನಿಕಗಳನ್ನು ಹೊರ ಹಾಕಲು ನೆರವಾಗುತ್ತದೆ. ದೇಹದಿಂದ ಪರಿಣಾಮಕಾರಿಯಾಗಿ ವಿಷನಿವಾರಿಸಬೇಕೆಂದಲ್ಲಿ ಬೆಲ್ಲ ತಿನ್ನಿ.
3. ಜ್ವರದ ಚಿಹ್ನೆಗಳಿಗೆ ಚಿಕಿತ್ಸೆ : ಶೀತ ಮತ್ತು ಕಫ ಇದ್ದಾಗ ಬೆಲ್ಲ ತಿನ್ನಬೇಕು. ಬಿಸಿ ನೀರಿನಲ್ಲಿ ಬೆರೆಸಿ ಕುಡಿಯಿರಿ ಅಥವಾ ಚಹಾಗೆ ಸಕ್ಕರೆ ಬದಲು ಬೆಲ್ಲ ಹಾಕಬಹುದು.
4. ರಕ್ತ ಶುದ್ಧೀಕರಣ : ಬೆಲ್ಲದ ಅತೀ ಪ್ರಸಿದ್ಧ ಲಾಭವೆಂದರೆ ರಕ್ತ ಶುದ್ಧೀಕರಣ. ನಿತ್ಯವೂ ಸೀಮಿತ ಪ್ರಮಾಣದಲ್ಲಿ ಸೇವಿಸುವುದರಿಂದ ರಕ್ತ ಶುದ್ಧವಾಗಿ ದೇಹವನ್ನು ಆರೋಗ್ಯವಾಗಿಡುತ್ತದೆ.
5. ನಿರೋಧಕ ಶಕ್ತಿಗೆ ಒತ್ತು : ಬೆಲ್ಲದಲ್ಲಿ ಹಲವು ಆಂಟಿ ಆಕ್ಸಿಡಂಟ್‌ಗಳು ಮತ್ತು ಲವಣಗಳಾದ ಸತು ಮತ್ತು ಸೆಲೆನಿಯಂ ಇವೆ. ಇವು ಸ್ವತಂತ್ರ ಕಣಗಳಿಗೆ ಹಾನಿಯಾಗದಂತೆ ನೆರವಾಗುತ್ತದೆ. ಸೋಂಕುಗಳ ವಿರುದ್ಧವೂ ನೆರವಾಗುತ್ತದೆ. ರಕ್ತದಲ್ಲಿ ಹಿಮೋಗ್ಲೋಬಿನ್ ಪ್ರಮಾಣ ಏರಿಸಲೂ ಬೆಲ್ಲ ನೆರವಾಗುತ್ತದೆ.
6. ದೇಹ ಸ್ವಚ್ಛಗೊಳಿಸುವುದು : ಬೆಲ್ಲ ಒಂದು ಅತೀ ಸಹಜವಾದ ದೇಹ ಸ್ವಚ್ಛಗೊಳಿಸುವ ಸಾಧನ. ಹೀಗಾಗಿ ಬೆಲ್ಲ ಸೇವಿಸುವುದು ದೇಹದಿಂದ ಅನಗತ್ಯ ಕಣಗಳನ್ನು ನಿವಾರಿಸುತ್ತದೆ. ಶ್ವಾಸಕೋಶ, ಶ್ವಾಸನಾಳ, ಕರುಳು, ಹೊಟ್ಟೆ ಮತ್ತು ಅನ್ನನಾಳವನ್ನು ಸ್ವಚ್ಛಗೊಳಿಸುತ್ತದೆ. ಅತೀ ಮಾಲಿನ್ಯವಿರುವ ಜಾಗದಲ್ಲಿ ಕೆಲಸ ಮಾಡುವವರು ಬೆಲ್ಲ ತಿನ್ನುವುದು ಉತ್ತಮ.
7. ಋತುಸ್ರಾವದ ನೋವು : ಬೆಲ್ಲ ತಿನ್ನುವುದರಿಂದ ಹಲವು ಪೌಷ್ಠಿಕಾಂಶಗಳನ್ನು ದೇಹಕ್ಕೆ ನೀಡುವ ಕಾರಣ ಋತುಸ್ರಾವದ ನೋವಿಗೆ ಇದು ಉಪಶಮನ. ಋತುಸ್ರಾವದ ಸಮಯದಲ್ಲಿ ಮನೋಸ್ಥಿತಿಯಲ್ಲಿ ಬದಲಾವಣೆಯಾಗುತ್ತಿದ್ದಲ್ಲಿ ಬೆಲ್ಲ ತಿನ್ನಿ. ಇದು ಪಿಎಂಎಸ್ ಚಿಹ್ನೆಗಳ ಜೊತೆಗೆ ಹೋರಾಡಿ ಎಂಡೋರ್ಫಿನ್‌ಗಳನ್ನು ಬಿಡುಗಡೆ ಮಾಡುತ್ತದೆ. ಎಂಡೋರ್ಫಿನ್‌ಗಳು ದೇಹಕ್ಕೆ ಆರಾಮ ಕೊಡುತ್ತದೆ.
8. ಅನೀಮಿಯದಿಂದ ರಕ್ಷಣೆ : ಬೆಲ್ಲದಲ್ಲಿ ಕಬ್ಬಿಣ ಮತ್ತು ಫೊಲೇಟ್ ಇರುವ ಕಾರಣ ರಕ್ತದ ಕೋಶಗಳ ಪ್ರಮಾಣವನ್ನು ಸಾಮಾನ್ಯ ಸ್ಥಿತಿಯಲ್ಲಿ ಇಡುತ್ತದೆ. ಗರ್ಭಿಣಿ ಮಹಿಳೆಯರಿಗೆ ಉತ್ತಮ.
9. ಕರುಳಿನ ಆರೋಗ್ಯ : ಬೆಲ್ಲದಲ್ಲಿ ಮೆಗ್ನೇಶಿಯಂ ಹೆಚ್ಚಿರುವ ಕಾರಣ ಕರುಳಿನ ಆರೋಗ್ಯಕ್ಕೆ ಉತ್ತಮ. 10 ಗ್ರಾಂ ಬೆಲ್ಲದಲ್ಲಿ 16 ಮಿಲಿಗ್ರಾಂ ಮೆಗ್ನೇಶಿಯಂ ಇರುತ್ತದೆ.
10. ಹೊಟ್ಟೆಗೆ ತಂಪು : ಬೆಲ್ಲ ಸಾಮಾನ್ಯ ದೇಹದ ಉಷ್ಣತೆ ಕಾಪಿಡಲು ನೆರವಾಗುತ್ತದೆ. ಬೆಲ್ಲದ ತಂಪು ನೀರು ಕುಡಿಯುವುದು ಬೇಸಿಗೆಗೆ ಉತ್ತಮ.
11. ರಕ್ತದೊತ್ತಡ ನಿಯಂತ್ರಣ : ಬೆಲ್ಲದಲ್ಲಿ ಪೊಟಾಶಿಯಂ ಮತ್ತು ಸೋಡಿಯಂ ಇರುವ ಕಾರಣ ದೇಹದಲ್ಲಿ ಆಮ್ಲೀಯ ತತ್ವಗಳನ್ನು ನಿಭಾಯಿಸುತ್ತದೆ. ಹೀಗಾಗಿ ರಕ್ತದೊತ್ತಡ ನಿಯಂತ್ರಣದಲ್ಲಿರುತ್ತದೆ.
12. ಶ್ವಾಸಕೋಶದ ಸಮಸ್ಯೆ : ಬೆಲ್ಲವನ್ನು ನಿತ್ಯವೂ ಸೇವಿಸುವುದರಿಂದ ಆಸ್ತಮಾ, ಬ್ರೋನ್ಷಿಟಿಸ್ ಸಮಸ್ಯೆ ನಿವಾರಣೆಯಾಗಲಿದೆ. ಎಳ್ಳು ಬೆರೆಸಿ ಜೊತೆಗೆ ಸೇವಿಸಿದರೆ ಶ್ವಾಸಕೋಶಕ್ಕೆ ಉತ್ತಮ.
13. ಸಂಧಿ ನೋವು : ನಿಮಗೆ ಸಂಧಿ ನೋವಿದ್ದರೆ ಬೆಲ್ಲ ಉತ್ತಮ ನೋವು ನಿವಾರಕ. ಶುಂಠಿ ಜೊತೆ ಸೇವಿಸಿ ಬೆಲ್ಲ ತಿನ್ನಬಹುದು. ಮೂಳೆಗಳಿಗೂ ಇದು ಉತ್ತಮ.
14. ತೂಕ ನಷ್ಟ : ತೂಕ ಇಳಿಸಲು ಬೆಲ್ಲ ಉತ್ತಮ ಹಾದಿ. ಪೊಟಾಶಿಯಂ ಹೆಚ್ಚಾಗಿರುವ ಕಾರಣ ಎಲೆಕ್ಟ್ರೊಲೈಟ್ ಗಳನ್ನು ಸಮತೋಲನ ಮಾಡಿ ಚಯಾಪಚಯ ಚೆನ್ನಾಗಿರಲು ಬೆಲ್ಲ ನೆರವಾಗುತ್ತದೆ. ಹೀಗಾಗಿ ತೂಕ ಇಳಿಸುವಲ್ಲಿ ಉತ್ತಮ.
15. ಶಕ್ತಿಯ ಮೂಲ : ಸಕ್ಕರೆ ಕಾರ್ಬೋಹೈಡ್ರೇಟ್ ದೇಹಕ್ಕೆ ಕೊಟ್ಟರೆ, ಬೆಲ್ಲ ದೇಹಕ್ಕೆ ಧೀರ್ಘ ಕಾಲದ ಶಕ್ತಿ ಕೊಡುತ್ತದೆ. ರಕ್ತದಲ್ಲಿ ಸಕ್ಕರೆ ಪ್ರಮಾಣ ಏರಿಸುವುದಿಲ್ಲ. ಸುಸ್ತು ಮತ್ತು ನಿಶ್ಶಕ್ತಿ ಇರುವವರಿಗೂ ಉತ್ತಮ.