ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

February 12, 2026
6:47 AM

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಕಾರ್ಯದರ್ಶಿ ಸಮೀರ್ ಶುಕ್ಲಾ ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಗ್ರಾಮೀಣ ಕುಡಿಯುವ ನೀರಿನ ಯೋಜನೆಯ ಪ್ರಗತಿ ಪರಿಶೀಲನೆ ವೇಳೆ ಅವರು ಈ ನಿರ್ದೇಶನ ನೀಡಿದ್ದಾರೆ.

ಒಟ್ಟು 650 ಕಾಮಗಾರಿಗಳು ಪೂರ್ಣಗೊಂಡಿದ್ದು ಇದಕ್ಕಾಗಿ ಸುಮಾರು ₹482 ಕೋಟಿ ವೆಚ್ಚ ಮಾಡಲಾಗಿದೆ. ಜಿಲ್ಲೆಯಲ್ಲಿ ಒಟ್ಟು ಕಾಮಗಾರಿಗಳಲ್ಲಿ ಶೇಕಡಾ 84% ಮಾತ್ರ ಪೂರ್ಣಗೊಂಡಿದ್ದು ಉಳಿದ ಕಾಮಗಾರಿಗಳನ್ನು ಗಡುವಿನೊಳಗೆ ಪೂರ್ಣಗೊಳಿಸುವಂತೆ ಕಟ್ಟುನಿಟ್ಟಾಗಿ ಸೂಚಿಸಲಾಗಿದೆ.

ಹರ್‌ ಘರ್‌ ಜಲ್ ಯೋಜನೆಯಡಿ ಮನೆಮನೆಗೆ ಕುಡಿಯುವ ನೀರು ಸಂಪರ್ಕ ನೀಡಿದ ಬಳಿಕ, ಆ ಕಾರ್ಯವನ್ನು ಸಂಬಂಧಿತ ಗ್ರಾಮಸಭೆಗಳಲ್ಲಿ ದೃಢೀಕರಿಸಬೇಕು ಎಂದು ಸಮೀರ್ ಶುಕ್ಲಾ ಸೂಚಿಸಿದ್ದಾರೆ. ಯೋಜನೆ ಕಾಗದದಲ್ಲಿ ಮಾತ್ರವಲ್ಲ, ನೆಲಮಟ್ಟದಲ್ಲಿ ಪರಿಣಾಮಕಾರಿಯಾಗಿ ಜಾರಿಯಾಗಬೇಕು ಎಂಬ  ಸಂದೇಶ ನೀಡಿದ್ದಾರೆ.

ಕಾಮಗಾರಿಗಳ ಗುಣಮಟ್ಟ ಕಾಪಾಡುವುದು, ಸಮಯಮಿತಿಯಲ್ಲಿ ಪೂರ್ಣಗೊಳಿಸುವುದು ಮತ್ತು ಗ್ರಾಮೀಣ ಜನರಿಗೆ ನಿರಂತರ ಕುಡಿಯುವ ನೀರು ಪೂರೈಕೆ ಖಚಿತಪಡಿಸುವುದು ಮುಖ್ಯ ಉದ್ದೇಶವಾಗಿದೆ. ಜಲಜೀವನ್ ಮಿಷನ್ ಗ್ರಾಮೀಣ ಆರೋಗ್ಯ, ಸ್ವಚ್ಛತೆ ಮತ್ತು ಜೀವನಮಟ್ಟ ಸುಧಾರಣೆಗೆ ಪ್ರಮುಖ ಪಾತ್ರ ವಹಿಸುತ್ತಿರುವುದರಿಂದ, ಯೋಜನೆ ವಿಳಂಬವಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ತಿಳಿಸಲಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಒಂದೇ ತೋಟದಲ್ಲಿ ಹಲವು ಬೆಳೆ – ವರ್ಷಪೂರ್ತಿ ಆದಾಯ | ಗದಗದ ರೈತ ಸಹೋದರರ ಸಮಗ್ರ ಕೃಷಿ ಮಾದರಿ
March 10, 2026
11:25 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಇಳುವರಿ ಕುರಿತು “ದ ರೂರಲ್ ಮಿರರ್.ಕಾಂ” ಸಮೀಕ್ಷೆ | ಬಹುತೇಕ ತೋಟಗಳಲ್ಲಿಅಡಿಕೆ ಇಳುವರಿ ಕುಸಿತ
March 10, 2026
10:42 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಮಾರುಕಟ್ಟೆಯಲ್ಲಿ ಬೆಲೆ ಇಳಿಕೆ | ಮಾರ್ಚ್‌ ತಿಂಗಳ ಇಳಿಕೆಗೆ ಹಲವು ಕಾರಣ…
March 10, 2026
1:25 PM
by: ದ ರೂರಲ್ ಮಿರರ್.ಕಾಂ
ಪೂರ್ವ ಮುಂಗಾರು ಸಿಡಿಲು, ಗಾಳಿ ಮಳೆಗೆ ಮುನ್ನೆಚ್ಚರಿಕೆ ವಹಿಸಿ : ವಿಜಯನಗರ ಜಿಲ್ಲಾಧಿಕಾರಿ ಸೂಚನೆ
March 10, 2026
6:48 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror