ಶಾಶ್ವತ ನೀರಾವರಿ ಯೋಜನೆಗಾಗಿ ಒತ್ತಾಯಿಸಿ ಜನವರಿ 17 ರಂದು ಕೋಲಾರದಲ್ಲಿ ಜಲಾಗ್ರಹ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಶಾಶ್ವತ ನೀರಾವರಿ ಹೋರಾಟ ವೇದಿಕೆ ಅಧ್ಯಕ್ಷ ಆರ್.ಆಂಜನೇಯ ರೆಡ್ಡಿ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೀರಿಗಾಗಿ ಒತ್ತಾಯಿಸಿ ನಡೆಯುತ್ತಿರುವ ಸಮಾವೇಶದಲ್ಲಿ ಜಿಲ್ಲೆಯ ಪ್ರತಿ ಮನೆಯಿಂದ ಒಬ್ಬರು ಪಾಲ್ಗೊಂಡು ಹಕ್ಕು ಪಡೆದುಕೊಳ್ಳಲು ಮುಂದಾಗಬೇಕು ಎಂದು ಕೋರಿದರು. ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳು 30 ವರ್ಷಗಳಿಂದ ನೀರಿನ ಸಾಮಾಜಿಕ ನ್ಯಾಯ ಪಡೆಯುವಲ್ಲಿ ವಿಫಲವಾಗಿವೆ. ನೀರಿನ ಹೆಸರಲ್ಲಿ ಸುಮಾರು ೩೦ ಸಾವಿರ ಕೋಟಿ ವೆಚ್ಚ ಮಾಡಿವೆ. ಆದರೆ ಯಾವುದೇ ಒಂದು ಯೋಜನೆ ಯಶಸ್ವಿಯಾಗಿ ಕಾರ್ಯಗತಗೊಂಡಿಲ್ಲ ಎಂದು ಆರೋಪಿಸಿದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement

