ಜಲಜೀವನ್ ಮಿಷನ್ ಯೋಜನೆ | ದಿನದ 24 ಗಂಟೆಯೂ ಶುದ್ಧ ಕುಡಿಯುವ ನೀರು ಪೂರೈಕೆ

February 11, 2025
6:47 AM
ಜಲಜೀವನ್  ಯೋಜನೆ, ಯಲಬುರ್ಗಾ ತಾಲೂಕಿನ ತಿಪ್ಪನಹಾಳದಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಂಡಿದ್ದು, ಗ್ರಾಮದ ಜನರ ಸಂತಸಕ್ಕೆ ಕಾರಣವಾಗಿದೆ. 

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಜಲಜೀವನ್  ಯೋಜನೆ, ಯಲಬುರ್ಗಾ ತಾಲೂಕಿನ ತಿಪ್ಪನಹಾಳದಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಂಡಿದ್ದು, ಗ್ರಾಮದ ಜನರ ಸಂತಸಕ್ಕೆ ಕಾರಣವಾಗಿದೆ.

Advertisement

ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಗಾಣದಾಳ ಗ್ರಾಮ ಪಂಚಾಯತ್ ವ್ಯಾಪ್ತಿಯ ತಿಪ್ಪನಹಾಳದಲ್ಲಿ ದಿನದ 24 ಗಂಟೆಯೂ ಶುದ್ಧ ಕುಡಿಯುವ ನೀರು ದೊರೆಯುತ್ತಿದೆ. ವಾರದ 7 ದಿನವೂ ನೀರು ಪೂರೈಕೆ ಆಗುತ್ತಿರುವ ತಾಲೂಕಿನ ಮೊದಲ ಗ್ರಾಮ ಎನ್ನುವ ಹಿರಿಮೆಗೆ ಪಾತ್ರವಾಗಿದೆ. ಕೃಷ್ಣಾ ಮೇಲ್ದಂಡೆ ಯೋಜನೆಯಡಿ ಕೆರೆ ತುಂಬಿಸುವ ಮತ್ತು  ಕುಷ್ಟಗಿ,  ಯಲಬುರ್ಗಾ ತಾಲೂಕಿನಲ್ಲಿ ಕುಡಿಯುವ ನೀರಿನ ಯೋಜನೆಯನ್ನು ಕೇಂದ್ರ ಸರ್ಕಾರದ ಜಲಜೀವನ್ ಮಿಷನ್ ಮೂಲಕ ಅನುಷ್ಠಾನ ಮಾಡಲಾಗುತ್ತಿದ್ದು, ಕುಡಿಯುವ ನೀರಿಗಾಗಿ ಕಿಲೋ ಮೀಟರ್ ಗಟ್ಟಲೆ  ದೂರ ಸಾಗಬೇಕಾಗಿದ್ದ ಜನರಿಗೆ ಮನೆ ಮುಂದೆಯೇ ನಲ್ಲಿಯ ಮೂಲಕ ನೀರು ಲಭ್ಯವಾಗುತ್ತಿದೆ. ‌ಜಲಜೀವನ್ ಮಿಷನ್ ಯೋಜನೆ ಜಾರಿಯಿಂದಾಗಿ ಕೊಪ್ಪಳ ಜಿಲ್ಲೆಯ ತಿಪ್ಪನಹಾಳ ಗ್ರಾಮದ ಜನರಿಗೆ ಶುದ್ಧ ಕುಡಿಯುವ ನೀರು ದೊರಕುತ್ತಿರುವುದು ಗ್ರಾಮದ ಜನರ ಹರ್ಷಕ್ಕೆ ಕಾರಣವಾಗಿದೆ.

ಈ ಮುಂಚೆ ನೀರಿಗಾಗಿ ಬಹಳ ದೂರ ಹೋಗಬೇಕಾಗಿತ್ತು. ಇದೀಗ ನಲ್ಲಿಯ ಮೂಲಕ ಮನೆಯ ಮುಂದೆಯೇ ನೀರು ಪೂರೈಕೆಗೆ ಅವಕಾಶ ಮಾಡಿಕೊಟ್ಟಿರುವುದು ಅನುಕೂಲವಾಗಿದೆ ಎಂದು ಗ್ರಾಮಸ್ಥರಾದ ಶಾಂತಾ ಹೇಳುತ್ತಾರೆ. ಮನೆಯಿಂದ ಶಾಲೆಗೆ ಬಾಟಲಿಯಲ್ಲಿ ನೀರು ತರುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದೀಗ ಜಲಜೀವನ್ ಮಿಷನ್ ಅನುಷ್ಠಾನದಿಂದಾಗಿ ಶುದ್ಧ ಕುಡಿಯುವ ನೀರು ಸಿಗುತ್ತಿದೆ. ಇಲ್ಲಿನ ಬಹುದಿನಗಳ ಸಮಸ್ಯೆ ಬಗೆಹರಿದಿದೆ ಎಂದು  ಶಿಕ್ಷಕಿ ನಾಗರತ್ನ ಹೇಳುತ್ತಾರೆ. ದಿನದ 24 ಗಂಟೆ ಹಾಗೂ ವಾರದ 7 ದಿನಗಳು ಜನರಿಗೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ ಎಂದು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಬಸವರಾಜ ಬಂಗಾರಿ ಹೇಳುತ್ತಾರೆ.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ವಚ್ಛತಾ ಅಭಿಯಾನ | 3570 ಟನ್ ಕಟ್ಟಡ ತ್ಯಾಜ್ಯ ತೆರವು
April 24, 2025
6:45 AM
by: The Rural Mirror ಸುದ್ದಿಜಾಲ
ಇಂದು ಶೂನ್ಯ  ನೆರಳಿನ ದಿನ | ಪಿಲಿಕುಳದಲ್ಲಿ  ಪ್ರಾತ್ಯಕ್ಷಿಕೆ
April 24, 2025
6:29 AM
by: The Rural Mirror ಸುದ್ದಿಜಾಲ
82 ವರ್ಷಗಳ ಬಳಿಕ ಅಕ್ಷಯ ತೃತೀಯ ದಿನವೇ 3 ಅಪರೂಪದ ಯೋಗಗಳ ನಿರ್ಮಾಣ
April 24, 2025
6:10 AM
by: ದ ರೂರಲ್ ಮಿರರ್.ಕಾಂ
ಪ್ರಕೃತಿ ಸೌಂದರ್ಯ ಮತ್ತು ಧಾರ್ಮಿಕತೆ ಮೇಳೈಸಿದ ಸ್ಥಳ ನಾಕೂರುಗಯ | ಭಕ್ತಿ ಪ್ರಕೃತಿಗಳ ಸಂಗಮ
April 24, 2025
6:05 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror