ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಜಲಜೀವನ್ ಯೋಜನೆ, ಯಲಬುರ್ಗಾ ತಾಲೂಕಿನ ತಿಪ್ಪನಹಾಳದಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಂಡಿದ್ದು, ಗ್ರಾಮದ ಜನರ ಸಂತಸಕ್ಕೆ ಕಾರಣವಾಗಿದೆ.
ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಗಾಣದಾಳ ಗ್ರಾಮ ಪಂಚಾಯತ್ ವ್ಯಾಪ್ತಿಯ ತಿಪ್ಪನಹಾಳದಲ್ಲಿ ದಿನದ 24 ಗಂಟೆಯೂ ಶುದ್ಧ ಕುಡಿಯುವ ನೀರು ದೊರೆಯುತ್ತಿದೆ. ವಾರದ 7 ದಿನವೂ ನೀರು ಪೂರೈಕೆ ಆಗುತ್ತಿರುವ ತಾಲೂಕಿನ ಮೊದಲ ಗ್ರಾಮ ಎನ್ನುವ ಹಿರಿಮೆಗೆ ಪಾತ್ರವಾಗಿದೆ. ಕೃಷ್ಣಾ ಮೇಲ್ದಂಡೆ ಯೋಜನೆಯಡಿ ಕೆರೆ ತುಂಬಿಸುವ ಮತ್ತು ಕುಷ್ಟಗಿ, ಯಲಬುರ್ಗಾ ತಾಲೂಕಿನಲ್ಲಿ ಕುಡಿಯುವ ನೀರಿನ ಯೋಜನೆಯನ್ನು ಕೇಂದ್ರ ಸರ್ಕಾರದ ಜಲಜೀವನ್ ಮಿಷನ್ ಮೂಲಕ ಅನುಷ್ಠಾನ ಮಾಡಲಾಗುತ್ತಿದ್ದು, ಕುಡಿಯುವ ನೀರಿಗಾಗಿ ಕಿಲೋ ಮೀಟರ್ ಗಟ್ಟಲೆ ದೂರ ಸಾಗಬೇಕಾಗಿದ್ದ ಜನರಿಗೆ ಮನೆ ಮುಂದೆಯೇ ನಲ್ಲಿಯ ಮೂಲಕ ನೀರು ಲಭ್ಯವಾಗುತ್ತಿದೆ. ಜಲಜೀವನ್ ಮಿಷನ್ ಯೋಜನೆ ಜಾರಿಯಿಂದಾಗಿ ಕೊಪ್ಪಳ ಜಿಲ್ಲೆಯ ತಿಪ್ಪನಹಾಳ ಗ್ರಾಮದ ಜನರಿಗೆ ಶುದ್ಧ ಕುಡಿಯುವ ನೀರು ದೊರಕುತ್ತಿರುವುದು ಗ್ರಾಮದ ಜನರ ಹರ್ಷಕ್ಕೆ ಕಾರಣವಾಗಿದೆ.
ಈ ಮುಂಚೆ ನೀರಿಗಾಗಿ ಬಹಳ ದೂರ ಹೋಗಬೇಕಾಗಿತ್ತು. ಇದೀಗ ನಲ್ಲಿಯ ಮೂಲಕ ಮನೆಯ ಮುಂದೆಯೇ ನೀರು ಪೂರೈಕೆಗೆ ಅವಕಾಶ ಮಾಡಿಕೊಟ್ಟಿರುವುದು ಅನುಕೂಲವಾಗಿದೆ ಎಂದು ಗ್ರಾಮಸ್ಥರಾದ ಶಾಂತಾ ಹೇಳುತ್ತಾರೆ. ಮನೆಯಿಂದ ಶಾಲೆಗೆ ಬಾಟಲಿಯಲ್ಲಿ ನೀರು ತರುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದೀಗ ಜಲಜೀವನ್ ಮಿಷನ್ ಅನುಷ್ಠಾನದಿಂದಾಗಿ ಶುದ್ಧ ಕುಡಿಯುವ ನೀರು ಸಿಗುತ್ತಿದೆ. ಇಲ್ಲಿನ ಬಹುದಿನಗಳ ಸಮಸ್ಯೆ ಬಗೆಹರಿದಿದೆ ಎಂದು ಶಿಕ್ಷಕಿ ನಾಗರತ್ನ ಹೇಳುತ್ತಾರೆ. ದಿನದ 24 ಗಂಟೆ ಹಾಗೂ ವಾರದ 7 ದಿನಗಳು ಜನರಿಗೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ ಎಂದು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಬಸವರಾಜ ಬಂಗಾರಿ ಹೇಳುತ್ತಾರೆ.
ಲಾ ನಿನಾ ಪ್ರಭಾವ ಇರುವುದರಿಂದ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಅದರಲ್ಲೂ ದಕ್ಷಿಣ ಒಳನಾಡು,…
ಅಷ್ಟೊಂದು ಪ್ರಮಾಣದ ಮಳೆಯು ಯಾವ ಮುನ್ಸೂಚನೆಯಲ್ಲೂ ಇರಲಿಲ್ಲ. ನಿರೀಕ್ಷೆಯೂ ಇರಲಿಲ್ಲ. ಬೆಳಿಗ್ಗೆ ಚಳಿ,…
ರಾಜ್ಯದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಕೊಡಗು ಜಿಲ್ಲೆಯ ಕೆಲವೆಡೆ ಲಘು ಭೂಕಂಪನವಾಗಿದ್ದು ರಿಕ್ಟರ್ ಮಾಪಕದಲ್ಲಿ ಇದರ ತೀವ್ರತೆ 1.6…
ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ತಾಲೂಕುಗಳ ಹಲವು ಕಡೆ ಸಂಜೆ ಉತ್ತಮ ಮಳೆಯಾಗಿದೆ.…