ಕಳೆದ 4-5 ದಿನಗಳಿಂದ ಕರಾವಳಿ, ಮಲೆನಾಡಿನಲ್ಲಿ ಅಬ್ಬರಿಸಿದ್ದ ಮಳೆ ಕೊಂಚ ತಗ್ಗಿದೆ. ಆದರೆ ಉತ್ತರ ಭಾರತದ ಜಮ್ಮು ಕಾಶ್ಮೀರ, ದೆಹಲಿಯಲ್ಲಿ ವರುಣನ ಅರ್ಭಟ ಹೆಚ್ಚಿದೆ. ಜನಜೀವನ ಅಸ್ತವ್ಯಸ್ಥಗೊಂಡಿದ್ದು ಅದರಿಂದ ಹೊರಬರಲು ಪರದಾಡುತ್ತಿದ್ದಾರೆ. ಈ ನಡುವೆ ಜಮ್ಮು ಕಾಶ್ಮೀರದಲ್ಲಿ ಭೂಕಂಪ ಸಂಭವಿಸಿದ್ದು, ನಾಗರೀಕರು ಮತ್ತಷ್ಟು ಸಂಕಷ್ಟ ಪಡುವಂತಾಗಿದೆ.
Advertisement
ಜಮ್ಮು ಮತ್ತು ಕಾಶ್ಮೀರ ದಲ್ಲಿ ಕಳೆದ ವಾರದಿಂದ ಭಾರಿ ಮಳೆಯಾಗುತ್ತಿದೆ, ಭೂಕುಸಿತ, ಪ್ರವಾಹದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಈ ನಡುವೆ ಭೂಕಂಪ ಸಂಭವಿಸಿದ್ದು, ಜನರು ಭೀತಿಗೊಳಗಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ದೋಡಾದಲ್ಲಿ 4.9 ತೀವ್ರತೆಯ ಭೂಕಂಪ ಸಂಭವಿಸಿದೆ. ಬೆಳಗ್ಗೆ 5.38ಕ್ಕೆ ಭೂಕಂಪ ಸಂಭವಿಸಿದೆ. ಯಾವುದೇ ಹಾನಿಯ ಬಗ್ಗೆ ತಕ್ಷಣದ ವರದಿಗಳಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Advertisement
ಜೂನ್ 13 ರಂದು ಜಿಲ್ಲೆಯಲ್ಲಿ 5.4 ತೀವ್ರತೆಯ ಭೂಕಂಪ ಸಂಭವಿಸಿದ್ದು, ಮನೆಗಳು ಸೇರಿದಂತೆ ಹತ್ತಾರು ಕಟ್ಟಡಗಳು ಬಿರುಕು ಬಿಟ್ಟಿವೆ.
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement