Advertisement
MIRROR FOCUS

“ಜನ ಜಾಗರಣ” ಅಭಿಯಾನ | ಗಣರಾಜ್ಯದಂದು ದೇಶದ 500 ಜಿಲ್ಲೆಗಳಲ್ಲಿ ರೈತರಿಂದ ಟ್ರ್ಯಾಕ್ಟರ್ ಪರೇಡ್ | ಕೇಂದ್ರ ಸರ್ಕಾರದ ವಿರುದ್ಧ ಸಾಮೂಹಿಕ ಅಭಿಯಾನದ ಉದ್ದೇಶ |

Share

ರೈತರ ಸಮಸ್ಯೆಗೆ ಕಿವಿಯಾಗುವ ಸರ್ಕಾರಗಳು ಕಡಿಮೆ. ಹಾಗೆ ರೈತರಿಗೆ ಒಂದಲ್ಲ ಒಂದು ಸಮಸ್ಯೆಗಳು ಬಂದೇ ಬರುತ್ತವೆ. ರೈತ ವಿರೋಧಿ ನೀತಿಗಳ ವಿರುದ್ಧ ಪ್ರತಿಭಟನೆಗಳನ್ನು ರೈತ ಸಂಘಟನೆಗಳು ಮಾಡುತ್ತಲೇ ಇರುತ್ತವೆ. ಇದೀಗ ಸಂಯುಕ್ತ ಕಿಸಾನ್ ಮೋರ್ಚಾ (SKM) ದೇಶದಾದ್ಯಂತ ಸುಮಾರು 500 ಜಿಲ್ಲೆಗಳಲ್ಲಿ ಗಣರಾಜ್ಯೋತ್ಸವ(Republicday) ದಿನದಂದು ಟ್ರ್ಯಾಕ್ಟರ್ ಪರೇಡ್(Tractor parade) ನಡೆಸಲಿದೆ ಎಂದು ಸಂಘಟನೆಯು ಪ್ರಕಟಣೆಯಲ್ಲಿ ತಿಳಿಸಿದೆ. ರಾಷ್ಟ್ರ ರಾಜಧಾನಿಯಲ್ಲಿ(Capital) ಔಪಚಾರಿಕ ಗಣರಾಜ್ಯೋತ್ಸವ ಪರೇಡ್‌ನ ಮುಕ್ತಾಯದ ನಂತರ ಟ್ರ್ಯಾಕ್ಟರ್ ಪರೇಡ್ ನಡೆಯಲಿದೆ ಎಂದು ಅದು ಹೇಳಿದೆ.

Advertisement
Advertisement

“ಎಸ್‌ಕೆಎಂ ಜನವರಿ 26,2024ರಂದು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಜಿಲ್ಲಾ ಮಟ್ಟದಲ್ಲಿ ಟ್ರಾಕ್ಟರ್ ಪರೇಡ್ ನಡೆಸಲಿದೆ. ಕನಿಷ್ಠ 500 ಜಿಲ್ಲೆಗಳಲ್ಲಿ ಪರೇಡ್ ನಡೆಯುವ ನಿರೀಕ್ಷೆಯಿದೆ. ರೈತರು ಹೆಚ್ಚಿನ ಸಂಖ್ಯೆಯಲ್ಲಿ ಮೆರವಣಿಗೆಯಲ್ಲಿ ಪಾಲ್ಗೊಳ್ಳುವಂತೆ ಎಸ್‌ಕೆಎಂ ಮನವಿ ಮಾಡುತ್ತದೆ. ದೆಹಲಿಯಲ್ಲಿ ಗಣರಾಜ್ಯೋತ್ಸವದ ಔಪಚಾರಿಕ ಮೆರವಣಿಗೆಯ ಸಮಾರೋಪದ ಬಳಿಕ ಟ್ರ್ಯಾಕ್ಟರ್ ಪರೇಡ್ ನಡೆಯಲಿದೆ” ಎಂದು ಸಂಘಟನೆ ಪ್ರಕಟಣೆಯಲ್ಲಿ ತಿಳಿಸಿದೆ.

Advertisement

ಪರೇಡ್‌ನಲ್ಲಿ ಭಾಗವಹಿಸುವ ರೈತರು ಸಂಘ, ಸಂಸ್ಥೆಗಳ ಧ್ವಜದೊಂದಿಗೆ ರಾಷ್ಟ್ರಧ್ವಜವನ್ನು ಹಾರಿಸಲಿದ್ದಾರೆ. ಭಾರತದ ಸಂವಿಧಾನದಲ್ಲಿರುವ ಪ್ರಜಾಪ್ರಭುತ್ವ, ಒಕ್ಕೂಟ, ಜಾತ್ಯತೀತತೆ ಮತ್ತು ಸಮಾಜವಾದದ ತತ್ವಗಳನ್ನು ರಕ್ಷಿಸಲು ರೈತರು ಪ್ರತಿಜ್ಞೆ ಮಾಡಲಿದ್ದಾರೆ. ಟ್ರ್ಯಾಕ್ಟರ್‌ಗಳ ಜೊತೆಗೆ, ಇತರ ವಾಹನಗಳು ಮತ್ತು ಮೋಟಾರು ಸೈಕಲ್‌ಗಳು ಕೂಡ ಪರೇಡ್‌ನಲ್ಲಿ ಸೇರಿಕೊಳ್ಳಲಿವೆ” ಎಂದು ಎಸ್‌ಕೆಎಂ ಹೇಳಿದೆ.

20 ರಾಜ್ಯಗಳಲ್ಲಿನ ಎಸ್‌ಕೆಎಂ ರಾಜ್ಯ ಘಟಕಗಳು ಮುಂದಿನ ವರ್ಷ ಜನವರಿ 10 ರಿಂದ20 ರವರೆಗೆ ಭಾರತದಾದ್ಯಂತ ಮನೆ-ಮನೆ ಭೇಟಿ ಮತ್ತು ಕರಪತ್ರಗಳ ವಿತರಣೆಯ ಮೂಲಕ “ಜನ ಜಾಗರಣ” ಅಭಿಯಾನವನ್ನು ನಡೆಸಲಿವೆ. ಕೇಂದ್ರ ಸರ್ಕಾರದ “ಕಾರ್ಪೊರೇಟ್ ಪರ ಆರ್ಥಿಕ ನೀತಿಗಳನ್ನು ಬಹಿರಂಗಪಡಿಸುವುದು” ಸಾಮೂಹಿಕ ಅಭಿಯಾನದ ಉದ್ದೇಶವಾಗಿದೆ ಎಂದು ಅದು ಮಾಹಿತಿ ನೀಡಿದೆ.

Advertisement

“ಕೋಮುವಾದ, ಜಾತಿವಾದಿ ಧ್ರುವೀಕರಣದ ಮೂಲಕ ಜನರನ್ನು ಶೋಷಿಸುವ ಮತ್ತು ವಿಭಜಿಸುವ ಕಾರ್ಪೊರೇಟ್-ಕೋಮುವಾದಿ ನಂಟು” ತೊಡೆದುಹಾಕಲು ಅಭಿಯಾನ ಮತ್ತು ಮೆರವಣಿಗೆಯನ್ನು ಯಶಸ್ವಿಗೊಳಿಸುವಂತೆ ಎಸ್‌ಕೆಎಂ ಭಾರತದಾದ್ಯಂತ ರೈತರಿಗೆ ಕರೆ ನೀಡಿದೆ. ಕೇಂದ್ರ ಸರ್ಕಾರ ನಮ್ಮ ಎಲ್ಲ ಬೇಡಿಕೆಗಳನ್ನು ಈಡೇರಿಸುವವರೆಗೆ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಜನವರಿ 26, 2021ರಂದು, ಕೇಂದ್ರದ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸಿ ರೈತ ಸಂಘಗಳು ಆಯೋಜಿಸಿದ್ದ ಟ್ರ್ಯಾಕ್ಟರ್ ರ್‍ಯಾಲಿ ವೇಳೆ ಪ್ರತಿಭಟನಾನಿರತ ಸಾವಿರಾರು ರೈತರು ಮತ್ತು ಪೊಲೀಸ ನಡುವೆ ಘರ್ಷಣೆ ನಡೆದಿತ್ತು. ಕೆಲವು ಪ್ರತಿಭಟನಾಕಾರರು ಕೆಂಪು ಕೋಟೆ ಮೇಲೆ ಧಾರ್ಮಿಕ ಧ್ವಜಗಳನ್ನು ಹಾರಿಸಿದ್ದರು ಎಂದು ಆರೋಪಿಸಲಾಗಿದೆ.

Advertisement

– ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಳೆ ಇಲ್ಲ, ನೀರಿಲ್ಲ, ಬರಗಾಲ ಎಂದು ಬೊಬ್ಬೆ ಹೊಡೆಯದಿರಿ : ಮಳೆ ನೀರನ್ನು ಹಿಡಿದಿಡುವ ಕಾರ್ಯ ಅಗತ್ಯ :

ಬರಗಾಲ(Drought) ಬಂದಾಗ ಬಾಯಿ ಬಡಿಕೊಳ್ಳುವವರೇ ಹೆಚ್ಚು. ನೀರಿಲ್ಲ, ಸೆಕೆ, ಮಳೆ ಇಲ್ಲ, ಬೆಳೆಗಳಿಗೆ…

3 hours ago

ಮಾನವರಾದ ನಮಗೆ ಪರಿಸರ ಎಷ್ಟು ಮುಖ್ಯ..? ಪರಿಸರಿದಿಂದ ನಮಗಾಗುವ ಪ್ರಯೋಜನವೇನು..?

ಪರಿಸರ(Environment) ಸ್ವಾಸ್ಥ್ಯದಿಂದರೇ ಮಾತ್ರ ಅದರ ಭಾಗವಾದ ಮಾನವರಾದ(Human) ನಾವು ಸ್ವಾಸ್ಥ್ಯದಿಂದಿರಬಹುದು. ನಮ್ಮ ಆರೋಗ್ಯಕ್ಕೆ(Health)…

4 hours ago

ಸಮುದ್ರದ ಉಪ್ಪು, ಅಯೋಡಿಕರಿಸಿದ ಟೇಬಲ್ ಉಪ್ಪು, ಸೈಂಧವ ಉಪ್ಪು, ಕಪ್ಪು ಉಪ್ಪು : ಯಾವ ಉಪ್ಪು ಆರೋಗ್ಯಕ್ಕೆ ಒಳ್ಳೆಯದು?

ಭಾರತೀಯ(Indian) ಆಹಾರ ಪದ್ಧತಿಯಲ್ಲಿ(Food Style).... ಸಮುದ್ರದ ಉಪ್ಪು(Sea salt), ಅಯೋಡಿಕರಿಸಿದ ಟೇಬಲ್ ಉಪ್ಪು(Iodized…

4 hours ago

ಕೆಲ ಜಿಲ್ಲೆಯ ರೈತರಿಗೆ ಬರ ಪರಿಹಾರ ಹಣ ಬಿಡುಗಡೆ : ಬಳ್ಳಾರಿಯ 36,944 ರೈತರ ಖಾತೆಗೆ 41.40 ಕೋಟಿ ರೂ. ಜಮೆ

ಪ್ರಕೃತಿ ವಿಕೋಪಕ್ಕೆ(Natural disaster) ರೈತ(Farmer) ಬೆಳೆದ ಬೆಳೆಗಳು(Crop) ನಾಶವಾಗುವುದು ಸಾಮಾನ್ಯ. ಮಳೆ(Rain) ಜಾಸ್ತಿಯಾಗಿ…

4 hours ago

ವರುಣ ಕೃಪೆ ತೋರದಿದ್ರೆ ಭಾರಿ ಸಂಕಷ್ಟ : ಡೆಡ್ ಸ್ಟೋರೇಜ್ ತಲುಪಿದ ತುಂಗಭದ್ರಾ ಜಲಾಶಯ!

ಬರಗಾಲದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ಕೆಲವೆಡೆ ವರುಣರಾಯ(Rain) ಕೃಪೆ ತೋರಿ ತಕ್ಕಮಟ್ಟಿಗೆ ತಂಪೆರೆದಿದ್ದಾನೆ.…

7 hours ago

Karnataka Weather | 19-05-2024 | ಇಂದೂ ಮಳೆ ಇದೆ ಅಲ್ಲಲ್ಲಿ | ಮೇ.22 ನಂತರ ಚಂಡಮಾರುತ ಸಾಧ್ಯತೆ |

ಮೇ 22ರ ನಂತರ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಚಂಡಮಾರುತವಾಗಿ ಪರಿವರ್ತನೆಗೊಳ್ಳವ…

9 hours ago