ಪುತ್ತೂರು ಜನಸೇವಾ ವಿದ್ಯಾಕೇಂದ್ರದ ಸುವರ್ಣ ಮಹೋತ್ಸವ ವರ್ಷಾಚರಣೆ ಪ್ರಯುಕ್ತ ಸಂಸ್ಥೆಯ ಹಿರಿಯ ವಿದ್ಯಾರ್ಥಿಗಳ ಬಳಗದಿಂದ ವಲಯ ಮಟ್ಟದ ಸಭೆ ಪುತ್ತೂರಿನಲ್ಲಿ ಸೆ.24 ನಡೆಯಲಿದೆ.ಕರಾವಳಿ ವಲಯ ಮಟ್ಟದ ಸಭೆಯಲ್ಲಿ ಮಂಗಳೂರು, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳ ಹಳೆ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.
ಪುತ್ತೂರಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಕಚೇರಿಯ ಸಭಾಂಗಣದಲ್ಲಿ ಬೆಳಗ್ಗೆ 10:00 ಗಂಟೆಗೆ ಸಭೆ ಉದ್ಘಾಟನೆಯಾಗಲಿದೆ. ಸಭೆ ಮುಗಿದ ಬಳಿಕ ಮಧ್ಯಾಹ್ನ 1 ಗಂಟೆಗೆ ಭೋಜನಕೂಟ ಏರ್ಪಡಿಸಲಾಗಿದೆ.
ಜನಸೇವಾ ಟ್ರಸ್ಟ್‌ನ ಗೌರವಾನ್ವಿತ ಕಾರ್ಯದರ್ಶಿಗಳಾದ ನಿರ್ಮಲ್ ಕುಮಾರ್ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವೇದ ವಿಜ್ಞಾನ ಗುರುಕುಲಂನ ಮುಖ್ಯಸ್ಥರಾದ ಪ್ರೊ. ರಾಮಚಂದ್ರ ಜಿ. ಭಟ್ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದ ವಿವರಗಳಿಗಾಗಿ ಕಾರ್ಯಕರ್ತರಾದ ಡಿ.ಕೆ. ಅಜಿತ್ ಕುಮಾರ್ (90083 95200), ಯೋಗೀಶ್ (7483303805 )ಇವರನ್ನು ಸಂಪರ್ಕಿಸಲು ಕೋರಲಾಗಿದೆ. ಹಿರಿಯ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕೋರಲಾಗಿದೆ.
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…
ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…