ಮಂಗಳೂರುಕರಾವಳಿ ಉತ್ಸವದ ಅಂಗವಾಗಿ ಆಯೋಜಿಸಲಾಗಿರುವ ಆಹಾರ ಮೇಳವು ಜನವರಿ 30 ರಿಂದ ಫೆಬ್ರವರಿ 1 ರವರೆಗೆ ಮಂಗಳೂರು ನಗರದ ಕದ್ರಿ ಪಾರ್ಕ್‍ನಲ್ಲಿ ನಡೆಯಲಿದೆ.
ಈ ಆಹಾರ ಮೇಳದಲ್ಲಿ ಕರಾವಳಿ ಪ್ರದೇಶದ ವೈವಿಧ್ಯಮಯ ಹಾಗೂ ಸಮೃದ್ಧ ಪಾಕ ಪರಂಪರೆಯನ್ನು ಪ್ರೋತ್ಸಾಹಿಸುವ ಉದ್ದೇಶ ಹೊಂದಿದ್ದು, ಸ್ಥಳೀಯ ಹಾಗೂ ಸಾಂಪ್ರದಾಯಿಕ ಆಹಾರ ಪದಾರ್ಥಗಳ ಪ್ರದರ್ಶನ ಮತ್ತು ಮಾರಾಟಕ್ಕೆ ವೇದಿಕೆ ಕಲ್ಪಿಸಲಿದೆ. ಆಹಾರ ಪ್ರಿಯ ನಾಗರಿಕರಿಗೆ ವಿಶೇಷ ಅನುಭವವನ್ನು ನೀಡುವ ಉದ್ದೇಶದಿಂದ ಆಯೋಜಿಸಲಾಗಿರುವ ಈ ಉತ್ಸವದಲ್ಲಿ ಎಲ್ಲ ವರ್ಗದ ಜನರಿಗೆ ರುಚಿಕರ ಹಾಗೂ ವೈವಿಧ್ಯಮಯ ತಿನಿಸುಗಳು ಲಭ್ಯವಿರಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬಹುದು.
ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 9449035570, 9243388835 ಸಂಪರ್ಕಿಸಬಹುದು ಎಂದು ಸ್ಟ್ರೀಟ್ ಫುಡ್ ಫೆಸ್ಟಿವಲ್ ಸಮಿತಿ ಅಧ್ಯಕ್ಷರು ಹಾಗೂ ಮಂಗಳೂರು ಉಪವಿಭಾಗದ ಸಹಾಯಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುಳ್ಯ ತಾಲೂಕಿನ ಹಲವು ಕಡೆ ನಿನ್ನೆ ಸುಮಾರು 100 ಮಿ.ಮೀ.ನಷ್ಟು ಮಳೆಯಾಗಿದ್ದು, ಕರಾವಳಿ–ಮಲೆನಾಡಿನ…
ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧವಾಗಿದ್ದು, ಪ್ರಸಕ್ತ ಹಂಗಾಮಿನಲ್ಲಿ ಕಬ್ಬಿನ ಪಾವತಿಯ…
ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನಲ್ಲಿ ‘ಸೈಕಲ್ ಫಾರ್ ಕಾಫಿ’ ಜಾಥಾ ಆಯೋಜಿಸಲಾಗಿದ್ದು,…
ಏಷ್ಯನ್ ಗೇಮ್ಸ್ ಪುರುಷರ ಕ್ರಿಕೆಟ್ ಫೈನಲ್‌ನಲ್ಲಿ ಅ.3ರಂದು ಭಾರತ ಮತ್ತು ಪಾಕಿಸ್ತಾನ ಚಿನ್ನದ…
ಮಳೆಯ ಕೊರತೆಯಿಂದ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸುವ ಸಾಧ್ಯತೆ ಹಿನ್ನೆಲೆಯಲ್ಲಿ…
ಅಸ್ಸಾಂ ಮತ್ತು ಪಶ್ಚಿಮ ಬಂಗಾಳದ 16 ಸ್ಥಳಗಳಲ್ಲಿ ವಿದೇಶಿ ಅಡಿಕೆ ಅಕ್ರಮ ಸಾಗಾಟಕ್ಕೆ…