ಶ್ರೀ ರಕ್ಷಾ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಅಜ್ಜಾವರ, ಚೈತ್ರ ಯುವತಿ ಮಂಡಲ ಅಜ್ಜಾವರ ಮತ್ತು ಪ್ರತಾಪ ಯುವಕ ಮಂಡಲ ಅಜ್ಜಾವರ ಇವುಗಳ ಜಂಟಿ ಸಹಯೋಗದೊಂದಿಗೆ ಅಜ್ಜಾವರ ಪಂಚಾಯತ್ ಸಭಾಂಗಣದಲ್ಲಿ ಮಲ್ಲಿಗೆ ಕೃಷಿ ತರಬೇತಿ ನಡೆಯಿತು.
ಸುಶ್ಮಿತಾ ಗಣೇಶ್ ಉಜಿರೆ ಇವರು ಮಲ್ಲಿಗೆ ಕೃಷಿ ತರಬೇತಿ ಕಾರ್ಯಾಗಾರವನ್ನು ನಡೆಸಿಕೊಟ್ಟರು.ಈ ತರಬೇತಿಯ ಪ್ರಯೋಜನವನ್ನು ಗ್ರಾಮದ ಐವತ್ತುಕ್ಕೂ ಹೆಚ್ಚು ಜನರು ಪಡಕೊಂಡರು.ವೇದಿಕೆಯಲ್ಲಿ ಶ್ರೀರಕ್ಷ ಸಂಜೀವಿನಿ ಒಕ್ಕೂಟದ ಅಧ್ಯಕ್ಷರಾದ ಮಮತಾ, ಚೈತ್ರ ಯುವತಿ ಮಂಡಲ ಅಜ್ಜಾವರ ಅಧ್ಯಕ್ಷೆ ಶಶ್ಮಿ ಭಟ್, ಪ್ರತಾಪ ಯುವಕ ಮಂಡಲದ ಅಧ್ಯಕ್ಷರಾದ ಗುರುರಾಜ್, NRLM ವಲಯ ಮೇಲ್ವಿಚಾರಕರು ಕೌಶಲ್ಯ, ರೂಪ, ಅಜ್ಜಾವರ ಶಾಲೆಯ ಪ್ರಭಾರ ಶಿಕ್ಷಕಿಯಾದ ಶ್ರೀಮತಿ ವಿದ್ಯಾಶಂಕರಿ, ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ರೇವತಿ ದೊಡ್ಡೇರಿಯವರ ಪ್ರಾರ್ಥನೆಯೊಂದಿಗೆ ನೆರವೇರಿಸಲಾಯಿತು. ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು, ಸದಸ್ಯರು ಮತ್ತು ಚೈತ್ರ ಯುವತಿ ಮಂಡಲ ಮತ್ತು ಪ್ರತಾಪ ಯುವಕ ಮಂಡಲ ಪದಾಧಿಕಾರಿಗಳು ಮತ್ತು ಸದಸ್ಯರು, ಪ್ರೌಢಶಾಲೆ ಅಜ್ಜಾವರ ಇಲ್ಲಿಯ ಇಕೋ ಕ್ಲಬ್ ವಿದ್ಯಾರ್ಥಿಗಳು, ಅಜ್ಜಾವರ ಕೃಷಿ ಸಖಿ ಪೂರ್ಣಿಮಾ, ಸಂಪಾಜೆ ಗ್ರಾಮದ ಕೃಷಿ ಸಖಿ ಮೋಹಿನಿ ವಿಶ್ವನಾಥ್ ( ನಿಶಾ ), ಮಂಡೆಕೋಲು MBK ವನಿತಾ,ಪಶು ಸಖಿ ಪುಷ್ಪಲತಾ, LCRP ವಾಣಿ,ಪ್ರೌಢಶಾಲೆ ಅಜ್ಜಾವರ ಶಿಕ್ಷಕರಾದ ಚಂದ್ರಶೇಖರ್ ಭಟ್, ಹಾಜರಿದ್ದರು.
ರೇವತಿ ದೊಡ್ಡೇರಿಯವರ ಪ್ರಾರ್ಥನೆ ಹಾಡಿದರು.LCRP ಹರಿಣಾಕ್ಷಿ ಇವರು ಧನ್ಯವಾದ ಮಾಡಿದರು.ನಿರೂಪಣೆ ಮತ್ತು ಸ್ವಾಗತವನ್ನು MBK ಜಯಶ್ರೀ ಬೇಲ್ಯ ಯವರು ನೆರವೇರಿಸಿದರು.
ದೇಶದ ಹಲವು ರಾಜ್ಯಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ…
ವಿಜಯಪುರ ಜಿಲ್ಲೆಯಲ್ಲಿ ಕೋಟಿ ವೃಕ್ಷ ಅಭಿಯಾನ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಹಸಿರು…
ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್ಗಳನ್ನು ಅಭಿವೃದ್ಧಿಪಡಿಸಿ,…
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…
ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್ಎಂಎಸ್ಜಿ ಕಾಂಪ್ಲೆಕ್ಸ್ನಲ್ಲಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…