ಕೇಂದ್ರ ಮಾಜಿ ಸಚಿವ ನಿವೃತ್ತ ಮೇಜರ್ ಜಸ್ವಿಂತ್ ಸಿಂಗ್ ಅವರು ಭಾನುವಾರ ಬೆಳಗ್ಗೆ ದೆಹಲಿಯ ಸೇನಾ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 82 ವರ್ಷ ವಯಸ್ಸಾಗಿತ್ತು. ಕಳೆದ ಆರು ವರ್ಷಗಳಿನಿಂದ ವಯೋಸಹಜ ಕಾಯಿಲೆಗಳಿಂದ ಅವರು ಬಳಲುತ್ತಿದ್ದರು.
ಕಳೆದ ಕೆಲವು ಸಮಯಗಳಿಂದ ದೆಹಲಿಯ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಜಸ್ವಿಂತ್ ಸಿಂಗ್ ಅವರು ಈಚೆಗೆ ಬಹು ಅಂಗಾಂಗ ವೈಫಲ್ಯದ ಕಾಯಿಲೆಯಿಂದ ಬಳಲಿದ್ದರು. ಭಾನುವಾರ ಬೆಳಗ್ಗೆ ಕೊನೆಯುಸಿರೆಳೆದರು.
ಅಟಲ್ ಬಿಹಾರಿ ವಾಜಪೇಯಿ ಅವರ ಸರಕಾರದಲ್ಲಿ ಸಮರ್ಥ ಸಚಿವರಲ್ಲಿ ಒಬ್ಬರಾಗಿದ್ದರು. ಅಟಲ್ ಬಿಹಾರಿ ವಾಜಪೇಯಿ ಅವರ ಸರ್ಕಾರದ ಅವಧಿಯಲ್ಲಿ ಹಣಕಾಸು ಖಾತೆ, ರಕ್ಷಣಾ ಖಾತೆ, ವಿದೇಶಾಂಗ ಖಾತೆಗಳನ್ನು ನಿಭಾಯಿಸಿದ್ದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel