ಇಂದು ಜಯದೇವ ಆಸ್ಪತ್ರೆ ಡಾ.ಮಂಜುನಾಥ್ ನಿವೃತ್ತಿ | ವೃತ್ತಿ ಜೀವನದಲ್ಲಿ ಸಾರ್ಥಕ ಸೇವೆ ಸಲ್ಲಿಸಿದ ಹೆಮ್ಮೆಯ ಡಾ. ಮಂಜುನಾಥ್‍ |

January 31, 2024
11:48 AM

ವೈದ್ಯೋ ನಾರಾಯಣ ಹರಿ ಅಂಂತಾರೆ. ಆ ಮಾತಿಗೆ ಸ್ಪಷ್ಟ ನಿದರ್ಶನ ಜಯದೇವ ಆಸ್ಪತ್ರೆ(Jayadeva Hospital) ನಿರ್ದೇಶಕರಾಗಿದ್ದ  ಡಾ. ಮಂಜುನಾಥ್‍ (Dr Manjunath). ತಮ್ಮ ವೈದ್ಯಕೀಯ ವೃತ್ತಿ ಜೀವನದಲ್ಲಿ ಸಾರ್ಥಕ ಸೇವೆ ಮಾಡಿ ಎಲ್ಲರ ಹೃದಯ ಗೆದ್ದವರು. ಮತ್ತೆ ಅವರನ್ನೇ ಜಯದೇವ ಆಸ್ಪತ್ರೆ ನಿರ್ದೇಶಕರನ್ನಾಗಿ ಮುಂದುವರಿಸುವ ನಿರ್ಧಾರವನ್ನು ಸರ್ಕಾರ(Govt) ಕೈ ಬಿಟ್ಟಿದೆ. ಜನವರಿ 31ಕ್ಕೆ ಜಯದೇವ ಆಸ್ಪತ್ರೆ ನಿರ್ದೇಶಕರಾಗಿ (Jayadeva Hospital Director) ಡಾ. ಮಂಜುನಾಥ್ ಅವಧಿ ಮುಕ್ತಾಯವಾಗಲಿದೆ.

ಕಳೆದ ಬಾರಿ ಅವಧಿ ಮುಕ್ತಾಯ ಬಳಿಕ ಜನರ ಒತ್ತಾಯ ಕೇಳಿ ಬಂದ ಹಿನ್ನೆಲೆ 6 ತಿಂಗಳ ಕಾಲ ಹುದ್ದೆಯಲ್ಲಿ ಸರ್ಕಾರ ಮುಂದುವರಿಸಿತ್ತು. ಎನ್‍ಎಂಸಿ ಆಕ್ಟ್ ಪ್ರಕಾರ 70 ವರ್ಷದವರೆಗೂ ಸೇವೆ ಸಲ್ಲಿಸಬಹುದಾಗಿದೆ. ಡಾ. ಮಂಜುನಾಥ್ ಅವರಿಗೆ 67 ವರ್ಷವಾಗಿದ್ದು, ಇನ್ನು 3 ವರ್ಷಗಳ ಕಾಲ ಸೇವೆ ಸಲ್ಲಿಸಬಹುದಾಗಿದೆ. ಆದರೆ ಸರ್ಕಾರ ಮುಂದುವರಿಸುವ ನಿರ್ಧಾರ ಕೈಗೊಳ್ಳದ ಹಿನ್ನೆಲೆಯಲ್ಲಿ ಜನವರಿ 31ಕ್ಕೆ ಡಾ. ಮಂಜುನಾಥ್ ನಿವೃತ್ತಿ ಘೋಷಣೆ ಮಾಡಲಿದ್ದಾರೆ.

ಇನ್ನೂ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದ ಡಾ.ಸಿ.ಎನ್‌ ಮಂಜುನಾಥ್‌, ಜಯದೇವ ಹೃದ್ರೋಗ ಆಸ್ಪತ್ರೆ ಜನರ ಆಸ್ಪತ್ರೆಯಾಗಿದೆ. ನಾವು ಪಂಚತಾರಾ ಖಾಸಗಿ ಆಸ್ಪತ್ರೆಯಂತೆ ಮಾಡುವ ಗುರಿ ಇತ್ತು. ಅದು 100 ಕ್ಕೆ100 ಆಗಿದೆ. ಇಲ್ಲಿ ಪ್ರತಿಯೋಬ್ಬರಿಗೂ ಸೇವಾ ಮನೋಭಾವ ಬೆಳಸಲಾಗಿದೆ. ಸರ್ಕಾರದ ಸಹಕಾರ, ದಾನಿಗಳ ಸಹಕಾರದಿಂದ ಇವತ್ತು ಈ ಮಟ್ಟಕ್ಕೆ ಆಸ್ಪತ್ರೆ ಬೆಳೆದಿದೆ. ನಾನು ಇಲ್ಲಿಗೆ ಬಂದಾಗ 300 ಹಾಸಿಗೆ ಇತ್ತು, ಈಗ 2,000 ಸಾವಿರ ಹಾಸಿಗೆಗಳಿವೆ. 3,500 ಸಿಬ್ಬಂದಿ ಕೆಲಸ ಮಾಡ್ತಿದ್ದಾರೆ. 16 ವರ್ಷಗಳಲ್ಲಿ 75 ಲಕ್ಷ ಜನರಿಗೆ ಚಿಕಿತ್ಸೆ ನೀಡಿದ್ದೇನೆ. 8 ಲಕ್ಷ ಜನರಿಗೆ ಶಸ್ತ್ರಚಿಕಿತ್ಸೆ ಮಾಡಿದ್ದೇನೆ. ಇಷ್ಟು ವರ್ಷಗಳ ಸೇವೆ ಸಂತೋಷ ತಂದಿದೆ ತಮ್ಮ ನೆನಪುಗಳನ್ನ ಹಂಚಿಕೊಂಡಿದ್ದಾರೆ.

ಜಯದೇವ ಸಾಧನೆಯ ಕೇವಲ ಒಬ್ಬನಿಂದಲ್ಲ, ಅದು ಎಲ್ಲರಿಗೂ ಸಲ್ಲಬೇಕು. 1989ರಲ್ಲಿ ಜಯದೇವ ಆಸ್ಪತ್ರೆ ಸೇರಿದಾಗ ನನಗೊಂದು ಕನಸಿತ್ತು. ಆಗ ಆಸ್ಪತ್ರೆಯಲ್ಲಿ ಉತ್ತಮ ಸೌಲಭ್ಯ ಇರಲಿಲ್ಲ. 2005ರಲ್ಲಿ ಆಸ್ಪತ್ರೆ ತ್ಯಜಿಸುವ ಮನಸ್ಸು ಮಾಡಿದ್ದೆ. ಆಗ ಮಾಜಿ ಪ್ರಧಾನಿ ದೇವೇಗೌಡರು ನನ್ನನ್ನ ಇಲ್ಲಿಯೇ ಕೆಲಸ ಮಾಡುವಂತೆ ಸೂಚಿಸಿದ್ದರು. ದೊಡ್ಡವರ ಮಾತು ಕೇಳಿದ್ರೆ ಒಳ್ಳೆದಾಗುತ್ತೆ ಅನ್ನೊದಕ್ಕೆ ದೇವೇಗೌಡರ ಮಾತು ಸಾಕ್ಷಿ. ಆವತ್ತು ಅವರ ಮಾತು ಕೇಳದೇ ಇದ್ದಿದ್ದರೆ, ನಾನು ವಿದೇಶದಲ್ಲಿರುತ್ತಿದ್ದೆ. ದುಡ್ಡು ಮಾಡ್ತಿದ್ದೆ, ಆದ್ರೆ ಇಷ್ಟು ಪ್ರೀತಿ ಸಿಗುತ್ತಿರಲಿಲ್ಲ. ಸಂಪತ್ತಿಗೆ ಬೆಲೆ ಕಟ್ಟಬಹುದು. ಆದ್ರೆ ಸರಳತೆ ಸಾಧನೆಗೆ ಬೆಲೆ ಕಟ್ಟಲು ಸಾಧ್ಯವಿಲ್ಲ. ನಮ್ಮ ನೋವು ನಮಗೆ ಗೊತ್ತಾದ್ರೆ ಜೀವಂತವಾಗಿದ್ದೀವಿ ಎಂದರ್ಥ, ಬೇರೆಯವದ ನೋವು ಗೊತ್ತಾದ್ರೆ ನಾವು ಮನುಷ್ಯರಾಗಿದ್ದೀವೆ ಎಂದರ್ಥ ಎಂದು ಭಾವುಕರಾದರು

ಜಯದೇವ ಆಸ್ಪತ್ರೆ ನಿರ್ದೇಶಕರ ಹುದ್ದೆಗೆ ಪೈಪೋಟಿ ಆರಂಭವಾಗಿದ್ದು, 15ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿವೆ. ಈ ನಡುವೆ ಮೈಸೂರು ಮೂಲದ ಸಿಎಂ ಆಪ್ತರಿಗೆ ನಿರ್ದೇಶಕರ ಹುದ್ದೆ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ ಅನ್ನೋ ಚರ್ಚೆ ಜೋರಾಗಿದೆ. ಚುನಾವಣೆಗೆ ಸ್ಪರ್ಧಿಸ್ತಾರೆ ಎಂಬ ಚರ್ಚೆ ಜೋರಿರುವ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಡಾ.ಮಂಜುನಾಥ್ ಅವರು, ಆ ರೀತಿ ಏನಿಲ್ಲ ಚುನಾವಣೆಗೆ ನಿಲ್ಲೊಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

– ಅಂತರ್ಜಾಲ ಮಾಹಿತಿ

With an association of more than 25 years with Jayadeva Institute of Cardiovascular Sciences and Research coming to an end on January 31, its director, Dr CN Manjunath, said as the head of the institute for the last 16 years, the hospital witnessed 500 per cent development.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | ಕರಾವಳಿ, ಮಲೆನಾಡು ಭಾಗಗಳಲ್ಲಿ ಬೇಸಿಗೆ ಮಳೆಯು ಮುಂದುವರಿಯುವ ಲಕ್ಷಣ |
March 16, 2025
11:20 AM
by: ಸಾಯಿಶೇಖರ್ ಕರಿಕಳ
ದಾವಣಗೆರೆ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ | ಬಾಡಿಗೆ ಆಧಾರದಲ್ಲಿ ಖಾಸಗಿ ಕೊಳವೆಬಾವಿ
March 16, 2025
7:53 AM
by: The Rural Mirror ಸುದ್ದಿಜಾಲ
ಯಾದಗಿರಿ ಜಿಲ್ಲೆಗೆ ತಾಪಮಾನ ಎಚ್ಚರಿಕೆ | ಮುಂದಿನ ಮೂರು ತಿಂಗಳಿನಲ್ಲಿ ಗರಿಷ್ಠ 45 ಡಿಗ್ರಿ ತಾಪಮಾನ ದಾಖಲಾಗುವ ಸಾಧ್ಯತೆ
March 16, 2025
7:36 AM
by: The Rural Mirror ಸುದ್ದಿಜಾಲ
ಏಪ್ರಿಲ್ 30 ರವರೆಗೆ ಜೋಗ ಜಲಪಾತಕ್ಕೆ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧ
March 16, 2025
7:29 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror