ಮಂಗಳೂರಿನಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ 2025ನೇ ಸಾಲಿನ ಇಂಡಿಯನ್ ಅಕಾಡೆಮಿ ಆಫ್ ಓರಲ್ ಮೆಡಿಸಿನ್ ಅಂಡ್ ರೇಡಿಯಾಲಜಿಯ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಡಾ.ಜಯಪ್ರಸಾದ ಆನೆಕಾರ ಅವರು ಗರಿಷ್ಠ ಮತಗಳೊಂದಿಗೆ ಆಯ್ಕೆಯಾಗಿದ್ದಾರೆ.
ಅವರು ಇತ್ತೀಚಿಗೆ ಮಂಗಳೂರಿನ ಯೇನಪೋಯ ದಂತ ವೈದ್ಯಕೀಯ ಕಾಲೇಜಿನಲ್ಲಿ ನಡೆದ ಇಂಡಿಯನ್ ಅಕಾಡೆಮಿ ಆಫ್ ಓರಲ್ ಮೆಡಿಸಿನ್ ಅಂಡ್ ರೇಡಿಯಾಲಜಿಯ ರಾಷ್ಟ್ರೀಯ ಸಮ್ಮೇಳನದ ಸಂಘಟನಾ ಸಮಿತಿಯ ಭಾಗವಾಗಿದ್ದರು. ಡಾ.ಜಯಪ್ರಸಾದ ಆನೆಕಾರ ಅವರು ಸುಳ್ಯದ ಕೆವಿಜಿ ದಂತ ಮಹಾವಿದ್ಯಾಲಯದಲ್ಲಿ ಮುಖ-ದವಡೆಯ ವೈದ್ಯಕೀಯ ವಿಭಾಗದ ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರು ಮತ್ತು ಸುಳ್ಯದ ಆನೆಕಾರ ಡೆಂಟಲ್ ಕ್ಲಿನಿಕ್ ನ ವೈದ್ಯರಾಗಿದ್ದಾರೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel