Advertisement
MIRROR FOCUS

ಜಮ್ಮು-ಕಾಶ್ಮೀರದಲ್ಲಿ ಮೇಘಸ್ಫೋಟ | ಆಲಿಕಲ್ಲು, ಗುಡುಗು ಸಹಿತ ಭಾರಿ ಮಳೆ

Share

ಜಮ್ಮು-ಕಾಶ್ಮೀರದಲ್ಲಿ ಸಂಭವಿಸಿದ್ದ ಮೇಘಸ್ಫೋಟ ಮತ್ತು ಭೂಕುಸಿತ ಪೀಡಿತ ರಾಂಬನ್ ಜಿಲ್ಲೆಯಲ್ಲಿ ಪರಿಹಾರ ಹಾಗೂ ರಕ್ಷಣಾ ಕಾರ್ಯಾಚರಣೆ  ಪುನರಾರಂಭಗೊಳ್ಳಲಿವೆ. ದೇಶದ ಉಳಿದ ಭಾಗಗಳಿಗೆ ಕಾಶ್ಮೀರ ಕಣಿವೆಯನ್ನು ಸಂಪರ್ಕಿಸುವ ಪ್ರಮುಖ ರಸ್ತೆಯಾದ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ – 44 ಅನ್ನು ಮತ್ತೆ ತೆರೆಯಲು ಅಧಿಕಾರಿಗಳು ಕ್ರಮ ವಹಿಸುತ್ತಿದ್ದಾರೆ.

ಭಾರೀ ಗುಡುಗು ಸಹಿತ ಮಳೆ, ಆಲಿಕಲ್ಲು ಮತ್ತು ಹಠಾತ್ ಪ್ರವಾಹ ಸೇರಿದಂತೆ ತೀವ್ರ ಹವಾಮಾನ ಪರಿಸ್ಥಿತಿಗಳು ಈ ಪ್ರದೇಶದಾದ್ಯಂತ ವ್ಯಾಪಕ ಹಾನಿಯನ್ನುಂಟು ಮಾಡಿವೆ. ರಾಂಬನ್ ಜಿಲ್ಲೆಯಲ್ಲಿ ಮೇಘಸ್ಫೋಟದಿಂದ ಉಂಟಾದ ಭೂಕುಸಿತದಲ್ಲಿ ಮೂವರು ಮೃತಪಟ್ಟಿದ್ದಾರೆ. ಆಲಿಕಲ್ಲು ಮತ್ತು ಗುಡುಗು ಸಹಿತ ಭಾರಿ ಮಳೆಯು ಹನ್ನೆರಡಕ್ಕೂ ಹೆಚ್ಚು ಸ್ಥಳಗಳಲ್ಲಿ, ಪ್ರಮುಖವಾಗಿ ನಶ್ರಿ ಮತ್ತು ಬನಿಹಾಲ್ ನಡುವೆ ರಾಷ್ಟ್ರೀಯ ಹೆದ್ದಾರಿಯ ಉದ್ದಕ್ಕೂ ಹಲವಾರು ಸ್ಥಳಗಳಲ್ಲಿ ಭೂಕುಸಿತ ಮತ್ತು ಮಣ್ಣು ಕುಸಿತಕ್ಕೆ ಕಾರಣವಾಯಿತು. ಇದರಿಂದ ದೇಶದ ಉಳಿದ ಭಾಗದಿಂದ ಕಾಶ್ಮೀರವನ್ನು ಸಂಪರ್ಕಿಸುವ ರಸ್ತೆ ಕಡಿದುಕೊಂಡಂತಾಗಿದೆ. ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ಪಡೆಗಳ ಜೊತೆಗೆ ಪೊಲೀಸ್ ಮತ್ತು ನಾಗರಿಕರ ಜಂಟಿ ಪ್ರಯತ್ನಗಳ ಮೂಲಕ ರಕ್ಷಣಾ ಕಾರ್ಯ ಮುಂದುವರೆದಿದೆ. ಈ ನಡುವೆ ಮತ್ತೆ ಮಳೆಯಾದ ಕಾರಣ ರಕ್ಷಣಾ ಕಾರ್ಯಗಳಿಗೆ ಅಲ್ಪಮಟ್ಟಿಗೆ ಹಿನ್ನಡೆಯಾಗಿದೆ.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್

ದೇಶದ ಹಲವು ರಾಜ್ಯಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ…

8 hours ago

ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ

ವಿಜಯಪುರ ಜಿಲ್ಲೆಯಲ್ಲಿ ಕೋಟಿ ವೃಕ್ಷ ಅಭಿಯಾನ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಹಸಿರು…

8 hours ago

ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ

ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್‌ಗಳನ್ನು ಅಭಿವೃದ್ಧಿಪಡಿಸಿ,…

22 hours ago

ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ

ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…

23 hours ago

ಗುತ್ತಿಗಾರಿನಲ್ಲಿ ಚಣಿಲ ಹೋಮಿಯೋಪಥಿ ಕ್ಲಿನಿಕ್‌ ಆರಂಭ

ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್‌ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್‌ಎಂಎಸ್‌ಜಿ ಕಾಂಪ್ಲೆಕ್ಸ್‌ನಲ್ಲಿ…

24 hours ago

ಹವಾಮಾನ ವರದಿ | 16-10-2026 | ಕರ್ನಾಟಕದಲ್ಲಿ ಇನ್ನೂ 10 ದಿನ ಮಳೆ? ಅ.19ರ ನಂತರ ಹಿಂಗಾರು ಮಾರುತಗಳ ಆಗಮನದ ನಿರೀಕ್ಷೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…

1 day ago