ರಾಜ್ಯದ ಯುವಕರ ಭವಿಷ್ಯದ ದೃಷ್ಟಿಯಿಂದ ನಿರುದ್ಯೋಗ ಸಮಸ್ಯೆ ನಿವಾರಿಸಲು ಸರ್ಕಾರ ಉದ್ಯೋಗ ಮೇಳ ಆಯೋಜಿಸಿದೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯ ಅಭಿವೃದ್ಧಿ ಇಲಾಖೆ ಸಚಿವ ಡಾ ಶರಣಪ್ರಕಾಶ್ ಆರ್ ಪಾಟೀಲ್ ತಿಳಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅ.17 ರಂದು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಬೃಹತ್ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಮೈಸೂರು ವಿಭಾಗೀಯ ಉದ್ಯೋಗ ಮೇಳಕ್ಕೆ 24 ಸಾವಿರ ಉದ್ಯೋಗಾಂಕ್ಷಿಗಳು ಹೆಸರು ನೋಂದಾಯಿಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ. ಈ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದರು. ಅಂದು ಬೆಳಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೂ ನಡೆಯಲಿರುವ ಉದ್ಯೋಗ ಮೇಳದಲ್ಲಿ ನೂರಾರು ಕಂಪನಿಗಳು ಪಾಲ್ಗೊಳ್ಳಲಿದ್ದು, ಯುವ ಜನತೆ ಇದರ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement

