ಕರ್ನಾಟಕ ಹಾಲು ಉತ್ಪಾದಕರ ಒಕ್ಕೂಟ ಖಾಲಿ ಇರುವ ವಿವಿಧ 487 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಡೆಪ್ಯೂಟಿ ಡೈರೆಕ್ಟರ್, ಜೂನಿಯರ್ ಟೆಕ್ನಿಷಿಯನ್ ಸೇರಿ ವಿವಿಧ ಹುದ್ದೆಗಳು ಖಾಲಿ ಇದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನವೆಂಬರ್ 19, 2022 ಕೊನೆಯ ದಿನವಾಗಿದೆ.
ಶೈಕ್ಷಣಿಕ ವಿದ್ಯಾರ್ಹತೆ: KMF ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು CA ಅಥವಾ ICWA, M.V.Sc, ಸ್ನಾತಕೋತ್ತರ ಪದವಿ, MBA, MBBS, B.Sc, M.Tech ಅನ್ನು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪೂರ್ಣಗೊಳಿಸಿರಬೇಕು.
ವಯೋಮಿತಿ: ಕರ್ನಾಟಕ ಹಾಲು ಒಕ್ಕೂಟದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು 19-Nov-2022 ರಂತೆ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು. SC/ST/Cat-I ಅಭ್ಯರ್ಥಿಗಳಿಗೆ 5 ವರ್ಷ. ಮತ್ತು Cat-2A/2B/3A & 3B ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಅರ್ಜಿಶುಲ್ಕ: SC/ST/Cat-I/PWD ಅಭ್ಯರ್ಥಿಗಳು: ರೂ.500/- ಎಲ್ಲಾ ಇತರ ಅಭ್ಯರ್ಥಿಗಳು: ರೂ.1000/. https://recruitapp.in/kmf2022/instruction
ಆಯ್ಕೆ ಪ್ರಕ್ರಿಯೆ: ಕರ್ನಾಟಕ ಹಾಲು ಒಕ್ಕೂಟದ ನೇಮಕಾತಿ ಅಧಿಸೂಚನೆಯ ಪ್ರಕಾರ ಲಿಖಿತ ಪರಿಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ನಡೆಯುತ್ತದೆ.