ಬೆಂಗಳೂರಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಮಂಗಳೂರಿನ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಗೂ ಕಲ್ಲಡ್ಕದ ಶ್ರೀರಾಮ ವಿದ್ಯಾ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಕೇಂದ್ರ ಸರ್ಕಾರದ ರಾಷ್ಟ್ರೀಯ ವೃತ್ತಿ ಸೇವಾ ಯೋಜನೆಯ(ಎನ್.ಸಿ.ಎಸ್.ಪಿ) ಮಾದರಿ ವೃತ್ತಿ ಕೇಂದ್ರ(ಎಂಸಿಸಿ) ಅಡಿಯಲ್ಲಿ ಡಿಸೆಂಬರ್ 17ರ ಶನಿವಾರ ಬೆಳಿಗ್ಗೆ 10ರಿಂದ ಕಲ್ಲಡ್ಕದ ಶ್ರೀರಾಮ ವಿದ್ಯಾ ಕೇಂದ್ರದಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.
ಈ ಮೇಳದಲ್ಲಿ 50ಕ್ಕೂ ಹೆಚ್ಚಿನ ಖಾಸಗಿ ಕಂಪನಿಗಳು ಭಾಗವಹಿಸಿ ತಮ್ಮಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸಂದರ್ಶನದ ಮೂಲಕ ನೇಮಕಾತಿ ಮಾಡಲಿದ್ದಾರೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಡಿಪ್ಲೊಮಾ, ತಾಂತ್ರಿಕ ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ ಉದ್ಯೋಗಾಕಾಂಕ್ಷಿಗಳು https://docs.google.com/forms/d/1twnSn0CJXL8wQKO7ro1evwA_gF9faq-vQYLLhi9OBRs/viewform?edit_requested=true ಲಿಂಕ್ ಮೂಲಕ ತಮ್ಮ ಹೆಸರು ನೋಂದಾಯಿಸಿ ಈ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು.
ಆನ್‍ಲೈನ್ ಮೂಲಕ ನೋಂದಾಯಿಸದಿರುವ ಅಭ್ಯರ್ಥಿಗಳು ಉದ್ಯೋಗ ಮೇಳ ನಡೆಯುವ ಸ್ಥಳದಲ್ಲಿ ಹೆಸರು ನೋಂದಾಯಿಸಬಹುದು. ನೋಂದಣಿ ಮತ್ತು ಸಂದರ್ಶನ ಉಚಿತವಾಗಿದೆ ಅಭ್ಯರ್ಥಿಗಳು ಕನಿಷ್ಠ 10 ಸ್ವಯಂ ವಿವರದ ಪ್ರತಿಗಳೊಂದಿಗೆ ಉದ್ಯೋಗ ಮೇಳಕ್ಕೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರವನ್ನು ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.