ಡಿ.17 ರಂದು ಕಲ್ಲಡ್ಕದಲ್ಲಿ ಬೃಹತ್ ಉದ್ಯೋಗ ಮೇಳ

December 13, 2022
10:50 PM

ಬೆಂಗಳೂರಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಮಂಗಳೂರಿನ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಗೂ ಕಲ್ಲಡ್ಕದ ಶ್ರೀರಾಮ ವಿದ್ಯಾ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಕೇಂದ್ರ ಸರ್ಕಾರದ ರಾಷ್ಟ್ರೀಯ ವೃತ್ತಿ ಸೇವಾ ಯೋಜನೆಯ(ಎನ್.ಸಿ.ಎಸ್.ಪಿ) ಮಾದರಿ ವೃತ್ತಿ ಕೇಂದ್ರ(ಎಂಸಿಸಿ) ಅಡಿಯಲ್ಲಿ  ಡಿಸೆಂಬರ್ 17ರ ಶನಿವಾರ ಬೆಳಿಗ್ಗೆ 10ರಿಂದ ಕಲ್ಲಡ್ಕದ ಶ್ರೀರಾಮ ವಿದ್ಯಾ ಕೇಂದ್ರದಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಈ ಮೇಳದಲ್ಲಿ 50ಕ್ಕೂ ಹೆಚ್ಚಿನ ಖಾಸಗಿ ಕಂಪನಿಗಳು ಭಾಗವಹಿಸಿ ತಮ್ಮಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸಂದರ್ಶನದ ಮೂಲಕ ನೇಮಕಾತಿ ಮಾಡಲಿದ್ದಾರೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಡಿಪ್ಲೊಮಾ, ತಾಂತ್ರಿಕ ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ ಉದ್ಯೋಗಾಕಾಂಕ್ಷಿಗಳು https://docs.google.com/forms/d/1twnSn0CJXL8wQKO7ro1evwA_gF9faq-vQYLLhi9OBRs/viewform?edit_requested=true  ಲಿಂಕ್ ಮೂಲಕ ತಮ್ಮ ಹೆಸರು ನೋಂದಾಯಿಸಿ ಈ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು.

ಆನ್‍ಲೈನ್ ಮೂಲಕ ನೋಂದಾಯಿಸದಿರುವ ಅಭ್ಯರ್ಥಿಗಳು ಉದ್ಯೋಗ ಮೇಳ ನಡೆಯುವ ಸ್ಥಳದಲ್ಲಿ ಹೆಸರು ನೋಂದಾಯಿಸಬಹುದು. ನೋಂದಣಿ ಮತ್ತು ಸಂದರ್ಶನ ಉಚಿತವಾಗಿದೆ ಅಭ್ಯರ್ಥಿಗಳು ಕನಿಷ್ಠ 10 ಸ್ವಯಂ ವಿವರದ ಪ್ರತಿಗಳೊಂದಿಗೆ ಉದ್ಯೋಗ ಮೇಳಕ್ಕೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರವನ್ನು ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ
August 22, 2026
2:07 PM
by: ಸಾಯಿಶೇಖರ್ ಕರಿಕಳ
ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ
August 22, 2026
6:47 AM
by: ದ ರೂರಲ್ ಮಿರರ್.ಕಾಂ
ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ
August 21, 2026
7:49 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ
August 21, 2026
4:04 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror