ಗ್ರಾಮ ಒನ್ ಕೇಂದ್ರ | ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

December 14, 2022
8:15 PM

ದ ಕ ಜಿಲ್ಲೆಯಲ್ಲಿ ಒಟ್ಟು 223 ಗ್ರಾಮ ಪಂಚಾಯತ್ ಗಳಿಗೆ 304 ಗ್ರಾಮ ಒನ್ ಕೇಂದ್ರಗಳನ್ನು ತೆರೆಯಬೇಕಾಗಿದ್ದು, ಈ ಪೈಕಿ 230 ಕೇಂದ್ರಗಳನ್ನು ತೆರೆಯಲಾಗಿದೆ. ಬಾಕಿ ಇರುವ 74 ಗ್ರಾಮ ಒನ್ ಕೇಂದ್ರಗಳನ್ನು ತೆರೆಯಲು ಖಾಲಿ ಇರುವ ಗ್ರಾಮ ಪಂಚಾಯತ್‍ಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.‌

Advertisement

ಅರ್ಹತೆಗಳು: ಫ್ರಾಂಚೈಸಿ ಅರ್ಜಿದಾರರು ಡಿಪ್ಲೋಮಾ, ಐ.ಟಿ.ಐ. ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ ಅಥವಾ ತಾಂತ್ರಿಕ ವಿಭಾಗದಲ್ಲಿ ಪರಿಣತಿ ಹೊಂದಿರಬೇಕು ಹಾಗೂ ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ಅರ್ಜಿದಾರರು ಸ್ವಂತ ಅಥವಾ ಬಾಡಿಗೆ ಕಟ್ಟಡ ಹೊಂದಿರಬೇಕು ಅಥವಾ ಟೈಲ್ಸ್ ಗ್ರಾನೈಟ್ ಫ್ಲೋರಿಂಗ್, ಆರ್.ಸಿ.ಸಿ ಛಾವಣಿ ಇತ್ಯಾದಿ ಯಾವುದೇ ನೀರು ಸೋರಿಕೆಯಾಗದ ಕಟ್ಟಡಗಳಲ್ಲಿ ಗ್ರಾಮಒನ್ ಕೇಂದ್ರಗಳನ್ನು ಸ್ಥಾಪಿಸಲು ತಯಾರಾಗಿರಬೇಕು.

ಆಧಾರ್ ಸರ್ಟಿಫಿಕೇಟ್ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದವರು ಹಾಗೂ ಅದೇ ಗ್ರಾಮ ಪಂಚಾಯತ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು. ಅಂತೆಯೇ ಮಹಿಳೆಯರಿಗೆ, ವಿಕಲಚೇತನರಿಗೆ ಹಾಗೂ ತೃತೀಯ ಲಿಂಗಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಆಸಕ್ತರು  ಆನ್‍ಲೈನ್ ನಲ್ಲಿ ಇದೇ ಡಿಸೆಂಬರ್ 24ರೊಳಗೆ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆ:080-69008800 ಅನ್ನು ಸಂಪರ್ಕಿಸುವಂತೆ ಅಪರ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 15-04-2025 | ಕೆಲವು ಕಡೆ ತುಂತುರು ಮಳೆ | ಎ.19 ರಿಂದ ಕೆಲವು ಕಡೆ ಉತ್ತಮ ಮಳೆ ಸಾಧ್ಯತೆ |
April 15, 2025
11:54 AM
by: ಸಾಯಿಶೇಖರ್ ಕರಿಕಳ
ಬುಧನ ಚಲನೆ | 3 ರಾಶಿಗೆ ಸಂಪತ್ತಿನ ಮಳೆ, ಯಶಸ್ಸು
April 15, 2025
7:43 AM
by: ದ ರೂರಲ್ ಮಿರರ್.ಕಾಂ
ಹರಿಯಾಣ | 800 ಮೆ.ವ್ಯಾ.ವಿದ್ಯುತ್ ಉತ್ಪಾದನಾ ಘಟಕಕ್ಕೆ ಪ್ರಧಾನಿ ಮೋದಿ ಚಾಲನೆ
April 14, 2025
7:40 PM
by: The Rural Mirror ಸುದ್ದಿಜಾಲ
ಚಾಮರಾಜನಗರ ಜಿಲ್ಲೆ ಸಿದ್ದಾಪುರ ಜಮೀನು ವಿವಾದ | ರೈತರು ಆತಂಕಪಡುವ ಅಗತ್ಯವಿಲ್ಲ
April 14, 2025
7:28 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group