ದ ಕ ಜಿಲ್ಲೆಯಲ್ಲಿ ಒಟ್ಟು 223 ಗ್ರಾಮ ಪಂಚಾಯತ್ ಗಳಿಗೆ 304 ಗ್ರಾಮ ಒನ್ ಕೇಂದ್ರಗಳನ್ನು ತೆರೆಯಬೇಕಾಗಿದ್ದು, ಈ ಪೈಕಿ 230 ಕೇಂದ್ರಗಳನ್ನು ತೆರೆಯಲಾಗಿದೆ. ಬಾಕಿ ಇರುವ 74 ಗ್ರಾಮ ಒನ್ ಕೇಂದ್ರಗಳನ್ನು ತೆರೆಯಲು ಖಾಲಿ ಇರುವ ಗ್ರಾಮ ಪಂಚಾಯತ್‍ಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹತೆಗಳು: ಫ್ರಾಂಚೈಸಿ ಅರ್ಜಿದಾರರು ಡಿಪ್ಲೋಮಾ, ಐ.ಟಿ.ಐ. ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ ಅಥವಾ ತಾಂತ್ರಿಕ ವಿಭಾಗದಲ್ಲಿ ಪರಿಣತಿ ಹೊಂದಿರಬೇಕು ಹಾಗೂ ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ಅರ್ಜಿದಾರರು ಸ್ವಂತ ಅಥವಾ ಬಾಡಿಗೆ ಕಟ್ಟಡ ಹೊಂದಿರಬೇಕು ಅಥವಾ ಟೈಲ್ಸ್ ಗ್ರಾನೈಟ್ ಫ್ಲೋರಿಂಗ್, ಆರ್.ಸಿ.ಸಿ ಛಾವಣಿ ಇತ್ಯಾದಿ ಯಾವುದೇ ನೀರು ಸೋರಿಕೆಯಾಗದ ಕಟ್ಟಡಗಳಲ್ಲಿ ಗ್ರಾಮಒನ್ ಕೇಂದ್ರಗಳನ್ನು ಸ್ಥಾಪಿಸಲು ತಯಾರಾಗಿರಬೇಕು.
ಆಧಾರ್ ಸರ್ಟಿಫಿಕೇಟ್ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದವರು ಹಾಗೂ ಅದೇ ಗ್ರಾಮ ಪಂಚಾಯತ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು. ಅಂತೆಯೇ ಮಹಿಳೆಯರಿಗೆ, ವಿಕಲಚೇತನರಿಗೆ ಹಾಗೂ ತೃತೀಯ ಲಿಂಗಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಆಸಕ್ತರು ಆನ್‍ಲೈನ್ ನಲ್ಲಿ ಇದೇ ಡಿಸೆಂಬರ್ 24ರೊಳಗೆ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆ:080-69008800 ಅನ್ನು ಸಂಪರ್ಕಿಸುವಂತೆ ಅಪರ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…