ಮಾಹಿತಿ

CRPF ನಲ್ಲಿ 1458 ಹುದ್ದೆಗಳು ಖಾಲಿ | ಆಸಕ್ತರಿಂದ ಅರ್ಜಿ ಆಹ್ವಾನ

Share

ಕೇಂದ್ರ ಮೀಸಲು ಪೊಲೀಸ್ ಪಡೆಯಲ್ಲಿ ಅಗತ್ಯವಿರುವ ಹೆಡ್ ಕಾನ್ಸ್ಟೇಬಲ್, ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

Advertisement

ಹುದ್ದೆ: ಹೆಡ್ ಕಾನ್ಸ್ಟೇಬಲ್ (ಮಿನಿಸ್ಟರಿಯಲ್), ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್ (ಸ್ಟೆನೋಗ್ರಾಫರ್) ಕರ್ತವ್ಯ ಸ್ಥಳ : ಭಾರತದೆಲ್ಲೆಡೆ ಹುದ್ದೆಗಳ ಸಂಖ್ಯೆ: 1458 ಹುದ್ದೆ ಹುದ್ದೆಗಳ ಸಂಖ್ಯೆ ವೇತನ ಹೆಡ್ ಕಾನ್ಸ್ಟೇಬಲ್ (ಮಿನಿಸ್ಟರಿಯಲ್) 1315 25500-81100 ರೂ ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್ (ಸ್ಟೆನೋಗ್ರಾಫರ್) 143 29200-92300 ರೂ ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10+2/ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.

ವಯೋಮಾನ: ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 25 ವರ್ಷ ಮೀರಿರಬಾರದು. ವಯೋಮಿತಿ ಸಡಿಲಿಕೆ : ಒಬಿಸಿ ಅಭ್ಯರ್ಥಿಗಳಿಗೆ- 03 ವರ್ಷ ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ – 05 ವರ್ಷ ಆಯ್ಕೆ ವಿಧಾನ : ಅಭ್ಯರ್ಥಿಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ, ಸ್ಕಿಲ್ ಟೆಸ್ಟ್, ದೇಹದಾರ್ಢ್ಯತೆ ಪರೀಕ್ಷೆ (PST), ದಾಖಲೆಗಳ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆ ನಡೆಸಿ ಹುದ್ದೆಗಳಿಗೆ ನೇಮಕ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ: ಅಭ್ಯರ್ಥಿಯು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.

ಅರ್ಜಿ ಶುಲ್ಕ: ಜನರಲ್/ EWS/ ಒಬಿಸಿ ಅಭ್ಯರ್ಥಿಗಳು – ರೂ. 100 ಪ.ಜಾತಿ, ಪ.ಪಂಗಡ, ಮಹಿಳೆ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. ಶುಲ್ಕ ಪಾವತಿ ವಿಧಾನ: ಅರ್ಜಿ ಶುಲ್ಕವನ್ನು ಆನ್ಲೈನ್ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬಹುದು.

ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಜನವರಿ 25, 2023 ಕಂಪ್ಯೂಟರ್ ಆಧಾರಿತ ಪರೀಕ್ಷೆಗೆ ಅಡ್ಮಿಟ್ ಕಾರ್ಡ್ ಪ್ರಕಟಿಸುವ ದಿನಾಂಕ: ಫೆಬ್ರವರಿ 15, 2023 ತಾತ್ಕಾಲಿಕ ಕಂಪ್ಯೂಟರ್ ಆಧಾರಿತ ಪರೀಕ್ಷೆ ದಿನಾಂಕ: ಫೆಬ್ರವರಿ 22-28, 2023 ಹೆಚ್ಚಿನ ಮಾಹಿತಿಗೆ ಹಾಗೂ ಅರ್ಜಿ ಸಲ್ಲಿಸಲು www.crpf.nic.in ಭೇಟಿ ನೀಡಬಹುದು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಳತೆ ಬಲ್ಲವ ಅಡುಗೆಯ ನಳಮಹಾರಾಜ…..

ಅಡುಗೆಯ ಮಾಪಕಗಳು ಒಂದೊಂದು ಮನೆಗೆ ಒಂದೊಂದು ರೀತಿ ಇರುತ್ತವೆ. ಅವುಗಳ ಕಡೆಗೆ ನಿಗಾ…

1 hour ago

ಹಿಂದೂ ಧರ್ಮ ಮತ್ತು ರಾಷ್ಟ್ರದ ಏಕತೆ

ದೇವರ ದರ್ಶನಕ್ಕೆ ಗಂಟೆಗಟ್ಟಲೆ ಕಾಯುವ ಭಕ್ತರ ದಂಡನ್ನು ನೋಡಿದಾಗ ಹಿಂದೂ ಧರ್ಮಕ್ಕೆ ಯಾವ…

2 hours ago

ಜಾನುವಾರುಗಳಿಗೆ ವಿಮಾ ಸೌಲಭ್ಯ ಯೋಜನೆ

ಕೇಂದ್ರ ಪುರಸ್ಕೃತ ರಾಷ್ಟ್ರೀಯ ಜಾನುವಾರು ಮಿಷನ್ ಯೋಜನೆಯಡಿ ಜಾನುವಾರುಗಳಿಗೆ ವಿಮಾ ಸೌಲಭ್ಯ ನೀಡುವ…

3 hours ago

ಚತುಗ್ರಹಿ ರಾಜಯೋಗ | ಚತುಗ್ರಹಿ ರಾಜಯೋಗದ ವೈಶಿಷ್ಟ್ಯಗಳು |

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ . 9535156490

3 hours ago

ಯಾವುದೇ ಕಾರಣಕ್ಕೂ ಬಗರ್ ಹುಕುಂ ರೈತರನ್ನು ಒಕ್ಕಲೆಬ್ಬಿಸಬಾರದು | ಅಧಿಕಾರಿಗಳಿಗೆ ಕೇಂದ್ರ ಸಚಿವ ವಿ. ಸೋಮಣ್ಣ ಸೂಚನೆ

ಯಾವುದೇ ಕಾರಣಕ್ಕೂ ಬಗರ್ ಹುಕುಂ ರೈತರನ್ನು ಒಕ್ಕಲೆಬ್ಬಿಸದಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಕೇಂದ್ರ…

12 hours ago