SSLC ಪಾಸಾದವರಿಗೆ ಪೊಲೀಸ್ ಇಲಾಖೆಯಲ್ಲಿ ಉದ್ಯೋಗ | ಆಸಕ್ತರು ಅರ್ಜಿ ಸಲ್ಲಿಸಿ

September 19, 2022
7:41 PM

‘SSLC’ ಪಾಸಾದವರಿಗೆ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಉದ್ಯೋಗವಕಾಶವಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿನ ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (CAR / DAR) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಹ ಅಭ್ಯರ್ಥಿಗಳು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಅಧಿಕೃತ ವೆಬ್‌ಸೈಟ್ ksp.karnataka.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.ಒಟ್ಟು 3484 ಹುದ್ದೆಗಳಿದ್ದು, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 10ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.

ಕನಿಷ್ಠ ವಯೋಮಿತಿ: 18 ವರ್ಷ ಹಾಗೂ ಗರಿಷ್ಠ ವಯೋಮಿತಿ 25 ವರ್ಷ ಮೀರಿರಬಾರದು. ಹಾಗೂ SC, ST, OBC (2A, 2B, 3A, 3B) ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 27 ವರ್ಷ ನಿಗದಿಪಡಿಸಲಾಗಿದೆ. ಕರ್ನಾಟಕ ಬುಡಕಟ್ಟು ಜನಾಂಗದವರಿಗೆ ಗರಿಷ್ಠ ವಯೋಮಿತಿ 30 ವರ್ಷ ನಿಗದಿಪಡಿಸಲಾಗಿದೆ.

ಸಾಮಾನ್ಯ ಅಭ್ಯರ್ಥಿಗಳಿಗೆ- 400 ರೂ. ಹಾಗೂ ಪರಿಶಿಷ್ಟ ಜಾತಿ/ಪಂಗಡ, ಪ್ರವರ್ಗ-1 ಕ್ಕೆ ಸೇರಿದ ಅಭ್ಯರ್ಥಿಗಳಿಗೆ- 200 ರೂ ಅರ್ಜಿ ಶುಲ್ಕವಿದ್ದು, ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ 23500 ರಿಂದ 47650 ರೂ.ವರೆಗೆ ವೇತನ ಸಿಗಲಿದೆ.

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ – ಸೆಪ್ಟೆಂಬರ್ 19, 2022 , ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಅಕ್ಟೋಬರ್ 31, 2022.

ಹೆಚ್ಚಿನ ಮಾಹಿತಿಗಾಗಿ 080-22943346 ಸಂಪರ್ಕಿಸಬಹುದಾಗಿದೆ. https://ksp.karnataka.gov.in/ ಮೂಲಕ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ
April 2, 2026
6:56 AM
by: ಅರುಣ್‌ ಕುಮಾರ್ ಕಾಂಚೋಡು
ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ
April 2, 2026
6:37 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!
April 1, 2026
2:30 PM
by: ಸಾಯಿಶೇಖರ್ ಕರಿಕಳ
ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror