‘SSLC’ ಪಾಸಾದವರಿಗೆ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಉದ್ಯೋಗವಕಾಶವಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿನ ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (CAR / DAR) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಅಧಿಕೃತ ವೆಬ್‌ಸೈಟ್ ksp.karnataka.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.ಒಟ್ಟು 3484 ಹುದ್ದೆಗಳಿದ್ದು, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 10ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.
ಕನಿಷ್ಠ ವಯೋಮಿತಿ: 18 ವರ್ಷ ಹಾಗೂ ಗರಿಷ್ಠ ವಯೋಮಿತಿ 25 ವರ್ಷ ಮೀರಿರಬಾರದು. ಹಾಗೂ SC, ST, OBC (2A, 2B, 3A, 3B) ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 27 ವರ್ಷ ನಿಗದಿಪಡಿಸಲಾಗಿದೆ. ಕರ್ನಾಟಕ ಬುಡಕಟ್ಟು ಜನಾಂಗದವರಿಗೆ ಗರಿಷ್ಠ ವಯೋಮಿತಿ 30 ವರ್ಷ ನಿಗದಿಪಡಿಸಲಾಗಿದೆ.
ಸಾಮಾನ್ಯ ಅಭ್ಯರ್ಥಿಗಳಿಗೆ- 400 ರೂ. ಹಾಗೂ ಪರಿಶಿಷ್ಟ ಜಾತಿ/ಪಂಗಡ, ಪ್ರವರ್ಗ-1 ಕ್ಕೆ ಸೇರಿದ ಅಭ್ಯರ್ಥಿಗಳಿಗೆ- 200 ರೂ ಅರ್ಜಿ ಶುಲ್ಕವಿದ್ದು, ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ 23500 ರಿಂದ 47650 ರೂ.ವರೆಗೆ ವೇತನ ಸಿಗಲಿದೆ.
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ – ಸೆಪ್ಟೆಂಬರ್ 19, 2022 , ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಅಕ್ಟೋಬರ್ 31, 2022.
ಹೆಚ್ಚಿನ ಮಾಹಿತಿಗಾಗಿ 080-22943346 ಸಂಪರ್ಕಿಸಬಹುದಾಗಿದೆ. https://ksp.karnataka.gov.in/ ಮೂಲಕ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…
ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್‌ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…