ಕೃಷಿ ಇಲಾಖೆಯ ಆತ್ಮ ಯೋಜನೆಯಡಿ ಮಂಗಳೂರು ತಾಲೂಕಿನಲ್ಲಿ ತಾಲೂಕು ತಾಂತ್ರಿಕ ವ್ಯವಸ್ಥಾಪಕರ ಹುದ್ದೆ ಹಾಗೂ ಸುಳ್ಯ ತಾಲೂಕಿನ ಪಂಜ ಹೋಬಳಿಯಲ್ಲಿ ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ತಾತ್ಕಾಲಿಕ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆ ಗುತ್ತಿಗೆ ಆಧಾರಿತವಾಗಿದ್ದು ಹಾಗೂ ತಾತ್ಕಾಲಿಕವಾಗಿರುತ್ತದೆ. ಸ್ಥಳೀಯ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಅಭ್ಯರ್ಥಿಗಳು ಜಂಟಿ ಕೃಷಿ ನಿರ್ದೇಶಕರ ಕಚೇರಿ, ನೆಹರು ಮೈದಾನ ಎದುರು ಮಂಗಳೂರು ಇಲ್ಲಿಗೆ ತಮ್ಮ ವಿವರಗಳನ್ನು ನವೆಂಬರ್ 29ರೊಳಗೆ ಸಲ್ಲಿಸಬಹುದಾಗಿದೆ.
ವಿದ್ಯಾರ್ಹತೆ: ತಾಲೂಕು ತಾಂತ್ರಿಕ ವ್ಯವಸ್ಥಾಪಕರು, ಎಂ.ಎಸ್ಸಿ ಕೃಷಿ ಅಥವಾ ಇತರೆ ಕೃಷಿ ಸ್ನಾತಕೋತರ ಪದವಿ ಅಥವಾ ಪದವಿಯನ್ನು ಸರ್ಕಾರಿ ಅನುದಾನಿತ ವಿಶ್ವವಿದ್ಯಾನಿಲಯದ ಅಡಿಯಲ್ಲಿ ತೆಗೆದುಕೊಳ್ಳಬೇಕು ಹಾಗೂ ಕೃಷಿ ವಿಸ್ತರಣೆಯಲ್ಲಿ 2 ವರ್ಷಗಳ ಅನುಭವ ಕಡ್ಡಾಯವಾಗಿರುತ್ತದೆ.
ಸಹಾಯಕ ತಾಂತ್ರಿಕ ವ್ಯವಸ್ಥಾಪಕರು-ಬಿ.ಎಸ್ಸಿ ಕೃಷಿ ಅಥವಾ ಕೃಷಿ ಎಂ.ಎಸ್ಸಿ ಕೃಷಿ ಅಥವಾ ಇತರೆ ಕೃಷಿ ಸ್ನಾತಕೋತರ ಪದವಿ ಅಥವಾ ಪದವಿಯನ್ನು ಸರ್ಕಾರಿ ನೋಂದಾಯಿತ ವಿಶ್ವವಿದ್ಯಾನಿಲಯದ ಅಡಿಯಲ್ಲಿ ತೆಗೆದುಕೊಳ್ಳಬೇಕು ಹಾಗೂ ಕೃಷಿ ವಿಸ್ತರಣೆಯಲ್ಲಿ 1 ವರ್ಷದ ಅನುಭವ ಕಡ್ಡಾಯವಾಗಿರುತ್ತದೆ.
ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 0824-2423604 ಸಂಪರ್ಕಿಸುವಂತೆ ಯೋಜನೆ ನಿರ್ದೇಶಕರು ಆತ್ಮ ಯೋಜನೆ ಹಾಗೂ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…
ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ…
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…