ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿಯಿರುವ 16 ಜಿಲ್ಲಾ ನ್ಯಾಯಾಧೀಶರ ಹುದ್ದೆಗಳ ಭರ್ತಿಗೆ ರಾಜ್ಯ ಹೈಕೋರ್ಟ್ ಅಧಿಸೂಚನೆ ಹೊರಡಿಸಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 19 ಹಾಗೂ ಪರೀಕ್ಷಾ ಶುಲ್ಕ ಪಾವತಿಗೆ ಅಕ್ಟೋಬರ್ 21 ಕೊನೆಯ ದಿನಾಂಕವಾಗಿದೆ.
ಅರ್ಜಿ ಸಲ್ಲಿಸಲು ಬಯಸುವವರು ಕಾನೂನು ಪ್ರಕಾರ ಸ್ಥಾಪನೆಯಾಗಿರುವ ಯಾವುದೇ ಕಾಲೇಜಿನಿಂದ ಕಾನೂನು ಪದವಿ ಪಡೆದಿರಬೇಕು. ಹೈಕೋರ್ಟ್ ಸೇರಿದಂತೆ ಯಾವುದೇ ನ್ಯಾಯಾಲಯದಲ್ಲಿ ಕನಿಷ್ಠ 7 ವರ್ಷ ವಕೀಲಿ ವೃತ್ತಿ ಮಾಡಿರಬೇಕು. ವಯೋಮಿತಿಯು ಸಾಮಾನ್ಯ ವರ್ಗಕ್ಕೆ 45, ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ 48 ವರ್ಷ ಮೀರಿರಬಾರದು ಎಂದು ತಿಳಿಸಲಾಗಿದೆ.
ಇನ್ನೂ ಪೂರ್ವಭಾವಿ ಪರೀಕ್ಷೆಗೆ ಸಾಮಾನ್ಯ ವರ್ಗಕ್ಕೆ 500 ರೂ., ಪರಿಶಿಷ್ಟ ಜಾತಿ ಮತ್ತು ಪಂಗಡ ವರ್ಗಕ್ಕೆ 250 ರೂ., ಮುಖ್ಯಪರೀಕ್ಷೆಗೆ ಸಾಮಾನ್ಯ ವರ್ಗಕ್ಕೆ 1,000 ರೂ. ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ 750 ರೂ. ಇರಲಿದೆ. ಆದರೆ, ಪೂರ್ವಭಾವಿ ಪರೀಕ್ಷೆ ಫಲಿತಾಂಶ ಪ್ರಕಟವಾದ 15 ದಿನದಲ್ಲಿ ಮುಖ್ಯಪರೀಕ್ಷೆಗೆ ಶುಲ್ಕ ಪಾವತಿ ಮಾಡಬೇಕು. ವಿಳಂಬವಾದಲ್ಲಿ ಪರಿಗಣಿಸುವುದಿಲ್ಲ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.