SDA ಹುದ್ದೆಗಳಿಗೆ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ |

September 27, 2022
8:48 PM

ಬೆಂಗಳೂರು ಜಲಸಂಪನ್ಮೂಲ ಇಲಾಖೆಯಲ್ಲಿನ ಗ್ರೂಪ್‌ -ಸಿ ವೃಂದದ ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ನೇಮಕ ಪ್ರಕ್ರಿಯೆಯನ್ನು ( SDA Recruitment 2022) ಆರಂಭಿಸಲಾಗಿದೆ.

ಒಟ್ಟು 155 ಪರಿಶಿಷ್ಟ ಜಾತಿಯ ಬ್ಯಾಕ್‌ಲಾಗ್‌ ಹುದ್ದೆಗಳಿಗೆ ನೇಮಕ ನಡೆಯಲಿದ್ದು, ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಕಳೆದ ಜುಲೈನಲ್ಲಿಯೇ ಈ ನೇಮಕಕ್ಕೆ ಅಧಿಸೂಚನೆ ಹೊರಡಿಸಲಾಗಿತ್ತು. ಜುಲೈ 11 ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭಸಲಾಗುವುದು ಎಂದು ಪ್ರಕಟಿಸಲಾಗಿತ್ತು. ಆದರೆ ಕೊನೆಯ ಕ್ಷಣದಲ್ಲಿ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ತಾಂತ್ರಿಕ ಕಾರಣಗಳಿಂದ ಅನಿರ್ಧಿಷ್ಟ ಅವಧಿಯವರೆಗೆ ಮುಂದೂಡಲಾಗಿದೆ ಎಂದು ಪ್ರಕಟಿಸಲಾಗಿತ್ತು. ಇದೀಗ ಇದೇ ಅಧಿಸೂಚನೆ ಸಂಬಂಧಿಸಿದಂತೆ ನೇಮಕ ಪ್ರಕ್ರಿಯೆಯನ್ನು ಆರಂಭಿಸಲಾಗಿದೆ.

ಈ ವಾರದಿಂದ ಅರ್ಜಿ ಸಲ್ಲಿಸಲು ಆರಂಭವಾಗಿದ್ದು, ಅರ್ಜಿ ಸಲ್ಲಿಸಲು 25-10-2022 ಕೊನೆ ದಿನವಾಗಿರುತ್ತದೆ. ಅಂದು ಸಂಜೆ 5.30ರ ಒಳಗೆ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಒಟ್ಟು ಹುದ್ದೆಗಳಲ್ಲಿ 47 ಹುದ್ದೆಗಳನ್ನು ಮಹಿಳೆಯರಿಗೆ ಮೀಸಲಿಡಲಾಗಿದೆ. ಅರ್ಜಿ ಸಲ್ಲಿಸಲು ಲಿಂಕ್‌ ಇಲ್ಲಿದೆ : http://www.karnemaka.kar.nic.in/WRDO_recruit/

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಅಡಿಕೆ ಎಲೆಚುಕ್ಕೆ ರೋಗ | ತಕ್ಷಣದ ಪರಿಹಾರಕ್ಕಿಂತ ವೈಜ್ಞಾನಿಕ ನಿರ್ವಹಣೆ ಮುಖ್ಯ | 3 ವರ್ಷದ ಅಧ್ಯಯನದ ಬಳಿಕವೇ ಅಂತಿಮ ಪರಿಹಾರ
April 7, 2026
11:25 AM
by: ಮಹೇಶ್ ಪುಚ್ಚಪ್ಪಾಡಿ
ಸರ್ಕಾರದ ಸೌಲಭ್ಯಕ್ಕೆ ‘ಫ್ರೂಟ್ಸ್ ಐಡಿ’ ಕಡ್ಡಾಯ | ರೈತರಿಗೆ ಸೂಚನೆ
April 7, 2026
7:41 AM
by: ಮಿರರ್‌ ಡೆಸ್ಕ್
ಗದಗ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ತಾಪಮಾನ | ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ ಜಿಲ್ಲಾಧಿಕಾರಿ
April 7, 2026
7:34 AM
by: ಮಿರರ್‌ ಡೆಸ್ಕ್
ಅಡಿಕೆ ಎಲೆ ಚುಕ್ಕಿ ರೋಗ ನಿರ್ವಹಣೆ | ಗುತ್ತಿಗಾರಿನ ಪ್ರಾತ್ಯಕ್ಷಿಕೆ ತೋಟಕ್ಕೆ ಸಿಪಿಸಿಆರ್‌ಐ ನಿರ್ದೇಶಕರ ಭೇಟಿ | ವೈಜ್ಞಾನಿಕ ಕ್ರಮಗಳು ರೈತರಿಗೆ ಆಶಾಕಿರಣ
April 6, 2026
7:32 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror