ಬೆಂಗಳೂರು ಜಲಸಂಪನ್ಮೂಲ ಇಲಾಖೆಯಲ್ಲಿನ ಗ್ರೂಪ್ -ಸಿ ವೃಂದದ ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ನೇಮಕ ಪ್ರಕ್ರಿಯೆಯನ್ನು ( SDA Recruitment 2022) ಆರಂಭಿಸಲಾಗಿದೆ.
ಒಟ್ಟು 155 ಪರಿಶಿಷ್ಟ ಜಾತಿಯ ಬ್ಯಾಕ್‌ಲಾಗ್ ಹುದ್ದೆಗಳಿಗೆ ನೇಮಕ ನಡೆಯಲಿದ್ದು, ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಕಳೆದ ಜುಲೈನಲ್ಲಿಯೇ ಈ ನೇಮಕಕ್ಕೆ ಅಧಿಸೂಚನೆ ಹೊರಡಿಸಲಾಗಿತ್ತು. ಜುಲೈ 11 ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭಸಲಾಗುವುದು ಎಂದು ಪ್ರಕಟಿಸಲಾಗಿತ್ತು. ಆದರೆ ಕೊನೆಯ ಕ್ಷಣದಲ್ಲಿ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ತಾಂತ್ರಿಕ ಕಾರಣಗಳಿಂದ ಅನಿರ್ಧಿಷ್ಟ ಅವಧಿಯವರೆಗೆ ಮುಂದೂಡಲಾಗಿದೆ ಎಂದು ಪ್ರಕಟಿಸಲಾಗಿತ್ತು. ಇದೀಗ ಇದೇ ಅಧಿಸೂಚನೆ ಸಂಬಂಧಿಸಿದಂತೆ ನೇಮಕ ಪ್ರಕ್ರಿಯೆಯನ್ನು ಆರಂಭಿಸಲಾಗಿದೆ.
ಈ ವಾರದಿಂದ ಅರ್ಜಿ ಸಲ್ಲಿಸಲು ಆರಂಭವಾಗಿದ್ದು, ಅರ್ಜಿ ಸಲ್ಲಿಸಲು 25-10-2022 ಕೊನೆ ದಿನವಾಗಿರುತ್ತದೆ. ಅಂದು ಸಂಜೆ 5.30ರ ಒಳಗೆ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಒಟ್ಟು ಹುದ್ದೆಗಳಲ್ಲಿ 47 ಹುದ್ದೆಗಳನ್ನು ಮಹಿಳೆಯರಿಗೆ ಮೀಸಲಿಡಲಾಗಿದೆ. ಅರ್ಜಿ ಸಲ್ಲಿಸಲು ಲಿಂಕ್ ಇಲ್ಲಿದೆ : http://www.karnemaka.kar.nic.in/WRDO_recruit/
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…