ಕೃಷಿ ಇಲಾಖೆಯ ಆತ್ಮ ಯೋಜನೆಯಡಿ ಮಂಗಳೂರು ತಾಲೂಕಿನಲ್ಲಿ ತಾಲೂಕು ತಾಂತ್ರಿಕ ವ್ಯವಸ್ಥಾಪಕರ ಹುದ್ದೆ ಹಾಗೂ ಸುಳ್ಯ ತಾಲೂಕಿನ ಪಂಜ ಹೋಬಳಿನಲ್ಲಿ ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ಹುದ್ದೆ ಖಾಲಿಯಿದ್ದು ಈ ಹುದ್ದೆಗೆ ತಾತ್ಕಾಲಿಕ ನೇಮಕಾತಿಗಾಗಿ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ.
ಹುದ್ದೆ ಗುತ್ತಿಗೆ ಆಧಾರಿತವಾಗಿದ್ದು ಹಾಗೂ ತಾತ್ಕಾಲಿಕವಾಗಿರುತ್ತದೆ. ಸ್ಥಳೀಯ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಅಭ್ಯರ್ಥಿಗಳು ಜಂಟಿ ಕೃಷಿ ನಿರ್ದೇಶಕರ ಕಚೇರಿ, ಮಂಗಳೂರು ಇಲ್ಲಿ ತಮ್ಮ ಬಯೋಡಾಟವನ್ನು 2024 ರ ಜನವರಿ 6 ರೊಳಗೆ ಸಲ್ಲಿಸಬೇಕು.
ವಿದ್ಯಾರ್ಹತೆ:
1. ತಾಲೂಕು ತಾಂತ್ರಿಕ ವ್ಯವಸ್ಥಾಪಕರು- ಎಂ.ಎಸ್ಸಿ ಕೃಷಿ/ಇತರೆ ಕೃಷಿ ಸ್ನಾತಕೋತ್ತರ ಪದವಿ/ಪದವಿಯನ್ನು ಸರ್ಕಾರಿ ನೋಂದಾಯಿತ ವಿಶ್ವವಿದ್ಯಾಲಯದ ಅಡಿಯಲ್ಲಿ ತೆಗೆದುಕೊಳ್ಳಬೇಕು ಹಾಗೂ ಕೃಷಿ ವಿಸ್ತರಣೆಯಲ್ಲಿ ಎರಡು ವರ್ಷಗಳ ಅನುಭವ ಕಡ್ಡಾಯವಾಗಿರುತ್ತದೆ.
2. ಸಹಾಯಕ ತಾಂತ್ರಿಕ ವ್ಯವಸ್ಥಾಪಕರು- ಬಿ.ಎಸ್ಸಿ ಕೃಷಿ/ಎಂ.ಎಸ್ಸಿ ಕೃಷಿ/ಇತರೆ ಕೃಷಿ ಸ್ನಾತಕೋತ್ತರ ಪದವಿ/ಪದವಿಯನ್ನು ಸರ್ಕಾರಿ ನೋಂದಾಯಿತ ವಿಶ್ವವಿದ್ಯಾಲಯದ ಅಡಿಯಲ್ಲಿ ತೆಗೆದುಕೊಳ್ಳಬೇಕು ಹಾಗೂ ಕೃಷಿ ವಿಸ್ತರಣೆಯಲ್ಲಿ ಒಂದು ವರ್ಷದ ಅನುಭವ ಕಡ್ಡಾಯವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರ ಕಛೇರಿಯ ಈ ದೂರವಾಣಿ ಸಂಖ್ಯೆ: 0824-2423604ಗೆ ಸಂಪರ್ಕಿಸುವಂತೆ ಯೋಜನಾ ನಿರ್ದೇಶಕರು ಆತ್ಮ ಯೋಜನೆ ಹಾಗೂ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.