ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಮಂಗಳೂರು ವಿಭಾಗದಲ್ಲಿ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಎಸ್.ಎಸ್.ಎಲ್.ಸಿ ಅಥವಾ ಐ.ಟಿ.ಐ ವಿದ್ಯಾರ್ಹತೆಯಲ್ಲಿ ಮೆಕ್ಯಾನಿಕ್ ಡಿಸೇಲ್, ಎಲೆಕ್ಟ್ರಿಷಿಯನ್, ಮೆಷಿನಿಸ್ಟ್, ಎಲೆಕ್ಟ್ರೋನಿಕ್ಸ್ ಮೆಕ್ಯಾನಿಕ್, ವೆಲ್ಡರ್, ಮೆಕ್ಯಾನಿಕ್ ಮೋಟರ್ ವೆಹಿಕಲ್, ಪ್ರೋಗ್ರಾಮಿಂಗ್ ಮತ್ತು ಸಿಸ್ಟಮ್ ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್ ವೃತ್ತಿಗಳಲ್ಲಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು. ಸೆಪ್ಟೆಂಬರ್ 5 ರೊಳಗಾಗಿ ನಗರದ ಬಿಜೈನಲ್ಲಿರುವ ವಿಭಾಗೀಯ ಕಛೇರಿಗೆ ಅರ್ಜಿ ಸಲ್ಲಿಸಬೇಕು. ಸೆಪ್ಟೆಂಬರ್ 10 ರಂದು ಬೆಳಿಗ್ಗೆ 10 ಗಂಟೆಗೆ ಮೂಲ ದಾಖಲಾತಿಗಳೊಂದಿಗೆ ಶಿಶಿಕ್ಷು ಆಯ್ಕೆ ಸಮಿತಿಯ ಮುಂದೆ ನೇರ ಸಂದರ್ಶನಕ್ಕೆ ಹಾಜರಾಗಬೇಕು ಎಂದು ಕೆ.ಎಸ್.ಆರ್.ಟಿ.ಸಿ ಮಂಗಳೂರು ಹಿರಿಯ ವಿಭಾಗೀಯ ನಿಯಂತ್ರಂಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…
ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…
ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿ ತೊಂದರೆಯಾಗದಂತೆ ಅಗತ್ಯ ಕ್ರಮ…
ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?. ಈ ಪ್ರಶ್ನೆಗೆ ಹಲವರದು ಹಲವು…