ವಿಶ್ವವಿಖ್ಯಾತ ಜೋಗ ಜಲಪಾತದಲ್ಲಿ ಪ್ರವಾಸಿಗರನ್ನು ಮತ್ತಷ್ಟು ಆಕರ್ಷಿಸುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಆದ್ಯತೆ ನೀಡಿದೆ. ಪ್ರವಾಸೋದ್ಯಮ ಇಲಾಖೆ, ಶಿವಮೊಗ್ಗ ಜಿಲ್ಲಾಡಳಿತ, ಜೋಗ ಅಭಿವೃದ್ಧಿ ಪ್ರಾಧಿಕಾರ ಜೊತೆಯಾಗಿ ಸುಮಾರು 180 ಕೋಟಿ ರೂಪಾಯಿಗೂ ಅಧಿಕ ವೆಚ್ಚದಲ್ಲಿ ವಿವಿಧ ಕಾಮಗಾರಿಗಳನ್ನು ಕೈಗೆತ್ತಿಕೊಂಡಿದ್ದು, ಅಂತಿಮ ಹಂತದಲ್ಲಿದೆ. ಕಾಮಗಾರಿ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಪ್ರವಾಸಿಗರಿಗೆ ವಿಧಿಸಿದ್ದ ನಿರ್ಬಂಧ ಮುಕ್ತಾಯವಾಗಿದ್ದು, ಮತ್ತೆ ಪ್ರವಾಸಿಗರ ಭೇಟಿಗೆ ಅವಕಾಶ ಮಾಡಿಕೊಡಲಾಗಿದೆ.…..ಮುಂದೆ ಓದಿ….
180 ಕೋಟಿ ರೂಪಾಯಿಗೂ ಅಧಿಕ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಂಡಿದ್ದು, ಶೇಕಡ 60ಕ್ಕೂ ಅಧಿಕ ಭಾಗದ ಕಾಮಗಾರಿ ಪೂರ್ಣಗೊಂಡಿದೆ. ಮಳೆಗಾಲ ಆರಂಭವಾಗುವುದಕ್ಕೂ ಮುನ್ನ ಕಾಮಗಾರಿಯನ್ನು ಪೂರ್ಣಗೊಳಿಸಿದರೆ ಪ್ರವಾಸಿಗರಿಗೆ ಮತ್ತುಷ್ಟು ಅನುಕೂಲವಾಗಲಿದೆ ಎನ್ನುತ್ತಾರೆ ಸ್ಥಳೀಯರಾದ ಸಂತೋಷ್ ಕುಮಾರ್.
ಜೋಗ ಜಲಪಾತವನ್ನು ಸರ್ವ ಋತುವಿನಲ್ಲೂ ಪ್ರಮುಖ ಪ್ರವಾಸಿ ತಾಣವನ್ನಾಗಿ ಮಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಂಡಿದೆ. ಇದರಿಂದ ಮುಂದಿನ ದಿನಗಳಲ್ಲಿ ಪ್ರವಾಸಿಗರ ಸಂಖ್ಯೆಯೂ ಹೆಚ್ಚಾಗಲಿದೆ ಎನ್ನುತ್ತಾರೆ ಸ್ಥಳೀಯರಾದ ರಾಧಾಕೃಷ್ಣ.