ರಾಸಾಯನಿಕಗಳ ಬಳಕೆಯಿಂದ ಮಣ್ಣಿನ ಫಲವತ್ತತೆ ಕುಗ್ಗುತ್ತಿದ್ದು, ಆರೋಗ್ಯದ ಮೇಲೂ ಪರಿಣಾಮ ಬೀರುತ್ತಿದೆ. ನೈಸರ್ಗಿಕ ಮತ್ತು ಸಾವಯವ ಕೃಷಿಗೆ ಹೆಚ್ಚಿನ ಒತ್ತು ನೀಡಬೇಕಿದೆ. ಈ ನಿಟ್ಟಿನಲ್ಲಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಜೋಯಿಡಾ ತಾಲೂಕು ಅರಣ್ಯ ಪ್ರದೇಶಗಳಿಂದ ಕೂಡಿದ್ದು, ಇಲ್ಲಿ ರಾಸಾಯನಿಕ ಬಳಕೆಯನ್ನು ಸಂಪೂರ್ಣ ನಿಷೇಧಿಸಿದ್ದು, ದೇಶದಲ್ಲೇ ಮೊದಲ ಸಾವಯವ ಕೃಷಿ ತಾಲೂಕನ್ನಾಗಿ ಘೋಷಿಸುವುದಾಗಿ ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ಹೇಳಿದ್ದಾರೆ.
ಕಾಳಿ ಹುಲಿ ಅಭಯಾರಣ್ಯದ ವ್ಯಾಪ್ತಿಯಲ್ಲಿ ಶೇ. 83 ರಷ್ಟು ಅರಣ್ಯ ಪ್ರದೇಶ ಹೊಂದಿರುವ ದೇಶದ ಎರಡನೇ ಹಸಿರು ಪ್ರದೇಶವೆಂದು ಪರಿಗಣಿಸಲಾದ ಜೋಯಿಡಾವು ಉತ್ತರ ಕನ್ನಡ ಜಿಲ್ಲೆಯ ಅತಿ ಕಡಿಮೆ ಜನಸಂಖ್ಯೆ ಹೊಂದಿರುವ ಪ್ರದೇಶ. ಇಲ್ಲಿನ ರೈತರು ಈಗಾಗಲೇ ಶೂನ್ಯ-ರಸ ಗೊಬ್ಬರ ನೀತಿಯನ್ನು ಅಳವಡಿಸಿಕೊಂಡಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel