ಈ ಬಾರಿಯ ಭಾರತ ಕಬಡ್ಡಿ ತಂಡದ ಸೀನಿಯರ್ ವಿಭಾಗದ ಸಂಭಾವ್ಯ ಆಟಗಾರರ ಯಾದಿಯಲ್ಲಿ ಸ್ಥಾನ ಪಡೆದಿದ್ದ ಕರ್ನಾಟಕದ ಏಕೈಕ ಕಬಡ್ಡಿ ಪಟುವಿಗೆ ತರಬೇತಿ ಶಿಬಿರಕ್ಕೆ ಪಾಲ್ಗೊಳ್ಳಲು ಆಹ್ವಾನ ನೀಡದಿರುವ ಸಂಗತಿ ಬೆಳಕಿಗೆ ಬಂದಿದೆ.
ಸುಳ್ಯ ತಾಲೂಕು ಐವರ್ನಾಡು ಗ್ರಾಮದ ಪಾಲೆಪ್ಪಾಡಿ ನಿವಾಸಿ, ಉಜಿರೆ ಎಸ್‌ಡಿಎಂ ಕಾಲೇಜಿನ ಹಳೆ ವಿದ್ಯಾರ್ಥಿ ಸಚಿನ್ ಪ್ರತಾಪ್ ಮೊದಲ ಹಂತದ ಆನ್‌ಲೈನ್ ತರಬೇತಿಯಲ್ಲಿ ಪಾಲ್ಗೊಳ್ಳಲು ಅವಕಾಶ ಸಿಗದಿರುವ ಕ್ರೀಡಾಪಟು. ನಿಮ್ಮ ಆಯ್ಕೆ ಪ್ರಕ್ರಿಯೆಗೆ ತಡೆ ನೀಡಲಾಗಿದೆ ಎನ್ನುವ ಉತ್ತರ ದೆಹಲಿ ರಾಷ್ಟ್ರೀಯ ಅಮೆಚೂರ್ ಅಸೋಸಿಯೇಶನ್‌ನಿಂದ ಬಂದಿದ್ದು ಗ್ರಾಮೀಣ ಪ್ರತಿಭೆಗೆ ಅವಕಾಶ ಕೈ ತಪ್ಪುವ ಆತಂಕ ಕಾಡಿದೆ.
28 ಸಂಭಾವ್ಯ ಆಟಗಾರರು : ಸೀನಿಯರ್ ರಾಷ್ಟ್ರೀಯ ಕಬಡ್ಡಿ ಕೂಟದಲ್ಲಿ ತೋರಿದ ಅಮೋಘ ಪ್ರದರ್ಶನದಿಂದಾಗಿ ಸಚಿನ್ ಪ್ರತಾಪ್ ಅವರು ಆರು ತಿಂಗಳ ಹಿಂದೆ ಭಾರತ ಕಬಡ್ಡಿ ತಂಡದ ಸಂಭಾವ್ಯ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದರು. ದೇಶದ ನಾನಾ ರಾಜ್ಯಗಳಿಂದ ಆಯ್ಕೆಗೊಂಡ 28 ಸ್ಪರ್ಧಿಗಳ ಪೈಕಿ ಕರ್ನಾಟಕದಿಂದ ಆಯ್ಕೆಗೊಂಡ ಏಕೈಕ ಆಟಗಾರ ಎಂಬುದು ಇವರ ಹೆಗ್ಗಳಿಕೆ ಆಗಿತ್ತು. ಈ 28 ಮಂದಿ ತರಬೇತಿ ಶಿಬಿರಕ್ಕೆ ಆಯ್ಕೆಗೊಂಡಿದ್ದರು.
ಕೋವಿಡ್ ಕಾರಣದಿಂದ ಮುಂದೂಡಿದ್ದ ತರಬೇತಿ ಶಿಬಿರದ ಪ್ರಥಮ ಅವಧಿ ಆನ್‌ಲೈನ್ ಕ್ಲಾಸ್ ತರಗತಿಗಳು ಕೆಲ ದಿನಗಳ ಹಿಂದೆ ಮುಗಿದಿದೆ. ತರಬೇತಿಗೆ ಪಾಲ್ಗೊಳ್ಳಲು ದೆಹಲಿಯಲ್ಲಿರುವ ರಾಷ್ಟ್ರೀಯ ಕಬಡ್ಡಿ ಅಸೋಸಿಯೇಶನ್ ಬಿಡುಗಡೆ ಮಾಡಿದ ಪಟ್ಟಿಯಲ್ಲಿ ಪ್ರತಾಪ್ ಅವರ ಹೆಸರು ಕೈ ಬಿಡಲಾಗಿತ್ತು. ಉಳಿದ ಎಲ್ಲ ರಾಜ್ಯಗಳಿಂದ ಆಯ್ಕೆಗೊಂಡ 27 ಆಟಗಾರರ ಹೆಸರು ಇದೆ. ಈ ಬಗ್ಗೆ ಅಸೋಶಿಯೇಷನ್ ಬಳಿ ವಿಚಾರಿಸಿದರೆ ಆಯ್ಕೆಯನ್ನು ತಾತ್ಕಾಲಿಕವಾಗಿ ತಡೆ ಹಿಡಿಯಲಾಗಿದೆ ಎಂಬ ಉತ್ತರ ಬಂದಿದೆ.
ರಾಷ್ಟ್ರೀಯ ಸಂಭಾವ್ಯ ತಂಡಕ್ಕೆ ಕರ್ನಾಟಕ ಕಬಡ್ಡಿ ಅಸೋಷಿಯನ್ ನಡೆಸಿದ ಆಯ್ಕೆ ಪ್ರಕ್ರಿಯೆಯಲ್ಲಿ ರಾಜ್ಯದಿಂದ ಸೀನಿಯರ್ ವಿಭಾಗದಲ್ಲಿ ಪ್ರತಾಪ್ ಹಾಗೂ ಜೂನಿಯರ್ ವಿಭಾಗದಲ್ಲಿ ದ.ಕ.ಜಿಲ್ಲೆಯ ವಿನೋದ್ ಅವರು ಆಯ್ಕೆ ಆಗಿದ್ದರು. ಪ್ರತಾಪ್ ಮಾತ್ರವಲ್ಲದೆ ವಿನೋದ್ ಈ ಇಬ್ಬರಿಗೂ ತರಬೇತಿ ಶಿಬಿರಕ್ಕೆ ಆಹ್ವಾನ ನೀಡಿಲ್ಲ ಎನ್ನಲಾಗಿದೆ. ಬೆಂಗಳೂರಿನಲ್ಲಿ ನಡೆದ ರಾಷ್ಟ್ರೀಯ ಸಂಭ್ಯಾವ ಆಯ್ಕೆ ಪ್ರಕ್ರಿಯೆಲ್ಲಿ ಪ್ರತಾಪ್ ಪ್ರಥಮ ಸ್ಥಾನ ಪಡೆದು ರಾಜ್ಯದಿಂದ ಆಯ್ಕೆಗೊಂಡಿದ್ದರು.
ರಾಷ್ಟ್ರೀಯ ಸಂಭ್ಯಾವ ತಂಡದ ಆಯ್ಕೆ ಶಿಬಿರದಲ್ಲಿ ಪಾಲ್ಗೊಳ್ಳಲು ರಾಜ್ಯದಿಂದ ಆಯ್ಕೆಯಾಗಿದ್ದೆ. ಮೊದಲ ಹಂತದಲ್ಲಿ ಆನ್‌ಲೈನ್ ಮೂಲಕ ತರಬೇತಿ ಹಾಗೂ ಎರಡನೆ ಹಂತದಲ್ಲಿ ಶಿಬಿರದ ತರಬೇತಿ ನಿಗದಿ ಆಗಿತ್ತು. ಆನ್‌ಲೈನ್ ತರಬೇತಿಯು ಮುಗಿದಿದೆ. ಆದರೆ ನನಗೆ ಆಹ್ವಾನ ನೀಡಿಲ್ಲ. ಈ ಬಗ್ಗೆ ವಿಚಾರಿಸಿದರೆ ಆಯ್ಕೆಗೆ ತಾತ್ಕಾಲಿಕ ತಡೆ ನೀಡಲಾಗಿದೆ ಎನ್ನುವ ಉತ್ತರವಷ್ಟೇ ಬಂದಿದೆ ಎನ್ನುತ್ತಾರೆ ಸಚಿನ್ ಪ್ರತಾಪ್
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement