ಸುದ್ದಿಗಳು

ರಾಷ್ಟ್ರೀಯ ಕಬಡ್ಡಿ ಸಂಭಾವ್ಯ ತಂಡಕ್ಕೆ ಆಯ್ಕೆಯಾಗಿದ್ದ ರಾಜ್ಯದ ಆಟಗಾರನಿಗೆ ತರಬೇತಿಗೆ ಬರಲಿಲ್ಲ ಆಹ್ವಾನ..!

Share
ಬಾರಿಯ ಭಾರತ ಕಬಡ್ಡಿ ತಂಡದ ಸೀನಿಯರ್‌ ವಿಭಾಗದ ಸಂಭಾವ್ಯ ಆಟಗಾರರ ಯಾದಿಯಲ್ಲಿ ಸ್ಥಾನ ಪಡೆದಿದ್ದ ಕರ್ನಾಟಕದ ಏಕೈಕ ಕಬಡ್ಡಿ ಪಟುವಿಗೆ ತರಬೇತಿ ಶಿಬಿರಕ್ಕೆ ಪಾಲ್ಗೊಳ್ಳಲು ಆಹ್ವಾನ ನೀಡದಿರುವ ಸಂಗತಿ ಬೆಳಕಿಗೆ ಬಂದಿದೆ.
ಸುಳ್ಯ ತಾಲೂಕು  ಐವರ್ನಾಡು ಗ್ರಾಮದ ಪಾಲೆಪ್ಪಾಡಿ ನಿವಾಸಿ, ಉಜಿರೆ ಎಸ್‌ಡಿಎಂ ಕಾಲೇಜಿನ ಹಳೆ ವಿದ್ಯಾರ್ಥಿ ಸಚಿನ್‌ ಪ್ರತಾಪ್‌ ಮೊದಲ ಹಂತದ ಆನ್‌ಲೈನ್‌ ತರಬೇತಿಯಲ್ಲಿ ಪಾಲ್ಗೊಳ್ಳಲು ಅವಕಾಶ ಸಿಗದಿರುವ ಕ್ರೀಡಾಪಟು. ನಿಮ್ಮ ಆಯ್ಕೆ ಪ್ರಕ್ರಿಯೆಗೆ ತಡೆ ನೀಡಲಾಗಿದೆ ಎನ್ನುವ ಉತ್ತರ ದೆಹಲಿ ರಾಷ್ಟ್ರೀಯ ಅಮೆಚೂರ್‌ ಅಸೋಸಿಯೇಶನ್‌ನಿಂದ ಬಂದಿದ್ದು ಗ್ರಾಮೀಣ ಪ್ರತಿಭೆಗೆ ಅವಕಾಶ ಕೈ ತಪ್ಪುವ ಆತಂಕ ಕಾಡಿದೆ.
28 ಸಂಭಾವ್ಯ ಆಟಗಾರರು : ಸೀನಿಯರ್‌ ರಾಷ್ಟ್ರೀಯ ಕಬಡ್ಡಿ ಕೂಟದಲ್ಲಿ ತೋರಿದ ಅಮೋಘ ಪ್ರದರ್ಶನದಿಂದಾಗಿ ಸಚಿನ್‌ ಪ್ರತಾಪ್‌ ಅವರು ಆರು ತಿಂಗಳ ಹಿಂದೆ ಭಾರತ ಕಬಡ್ಡಿ ತಂಡದ ಸಂಭಾವ್ಯ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದರು. ದೇಶದ ನಾನಾ ರಾಜ್ಯಗಳಿಂದ ಆಯ್ಕೆಗೊಂಡ 28 ಸ್ಪರ್ಧಿಗಳ ಪೈಕಿ ಕರ್ನಾಟಕದಿಂದ ಆಯ್ಕೆಗೊಂಡ ಏಕೈಕ ಆಟಗಾರ ಎಂಬುದು ಇವರ ಹೆಗ್ಗಳಿಕೆ ಆಗಿತ್ತು. ಈ 28 ಮಂದಿ ತರಬೇತಿ ಶಿಬಿರಕ್ಕೆ ಆಯ್ಕೆಗೊಂಡಿದ್ದರು.
ಕೋವಿಡ್ ಕಾರಣದಿಂದ ಮುಂದೂಡಿದ್ದ ತರಬೇತಿ ಶಿಬಿರದ ಪ್ರಥಮ ಅವಧಿ ಆನ್‌ಲೈನ್‌ ಕ್ಲಾಸ್‌ ತರಗತಿಗಳು ಕೆಲ ದಿನಗಳ ಹಿಂದೆ ಮುಗಿದಿದೆ. ತರಬೇತಿಗೆ ಪಾಲ್ಗೊಳ್ಳಲು ದೆಹಲಿಯಲ್ಲಿರುವ ರಾಷ್ಟ್ರೀಯ ಕಬಡ್ಡಿ ಅಸೋಸಿಯೇಶನ್‌ ಬಿಡುಗಡೆ ಮಾಡಿದ ಪಟ್ಟಿಯಲ್ಲಿ ಪ್ರತಾಪ್‌ ಅವರ ಹೆಸರು ಕೈ ಬಿಡಲಾಗಿತ್ತು. ಉಳಿದ ಎಲ್ಲ ರಾಜ್ಯಗಳಿಂದ ಆಯ್ಕೆಗೊಂಡ 27 ಆಟಗಾರರ ಹೆಸರು ಇದೆ. ಈ ಬಗ್ಗೆ ಅಸೋಶಿಯೇಷನ್‌ ಬಳಿ ವಿಚಾರಿಸಿದರೆ ಆಯ್ಕೆಯನ್ನು ತಾತ್ಕಾಲಿಕವಾಗಿ ತಡೆ ಹಿಡಿಯಲಾಗಿದೆ ಎಂಬ ಉತ್ತರ ಬಂದಿದೆ.
ರಾಷ್ಟ್ರೀಯ ಸಂಭಾವ್ಯ ತಂಡಕ್ಕೆ ಕರ್ನಾಟಕ ಕಬಡ್ಡಿ ಅಸೋಷಿಯನ್‌ ನಡೆಸಿದ ಆಯ್ಕೆ ಪ್ರಕ್ರಿಯೆಯಲ್ಲಿ ರಾಜ್ಯದಿಂದ ಸೀನಿಯರ್‌ ವಿಭಾಗದಲ್ಲಿ ಪ್ರತಾಪ್‌ ಹಾಗೂ ಜೂನಿಯರ್‌ ವಿಭಾಗದಲ್ಲಿ ದ.ಕ.ಜಿಲ್ಲೆಯ ವಿನೋದ್‌ ಅವರು ಆಯ್ಕೆ ಆಗಿದ್ದರು. ಪ್ರತಾಪ್‌ ಮಾತ್ರವಲ್ಲದೆ ವಿನೋದ್‌ ಈ ಇಬ್ಬರಿಗೂ ತರಬೇತಿ ಶಿಬಿರಕ್ಕೆ ಆಹ್ವಾನ ನೀಡಿಲ್ಲ ಎನ್ನಲಾಗಿದೆ. ಬೆಂಗಳೂರಿನಲ್ಲಿ ನಡೆದ ರಾಷ್ಟ್ರೀಯ ಸಂಭ್ಯಾವ ಆಯ್ಕೆ ಪ್ರಕ್ರಿಯೆಲ್ಲಿ ಪ್ರತಾಪ್‌ ಪ್ರಥಮ ಸ್ಥಾನ ಪಡೆದು ರಾಜ್ಯದಿಂದ ಆಯ್ಕೆಗೊಂಡಿದ್ದರು.
ರಾಷ್ಟ್ರೀಯ ಸಂಭ್ಯಾವ ತಂಡದ ಆಯ್ಕೆ ಶಿಬಿರದಲ್ಲಿ ಪಾಲ್ಗೊಳ್ಳಲು ರಾಜ್ಯದಿಂದ ಆಯ್ಕೆಯಾಗಿದ್ದೆ. ಮೊದಲ ಹಂತದಲ್ಲಿ ಆನ್‌ಲೈನ್‌ ಮೂಲಕ ತರಬೇತಿ ಹಾಗೂ ಎರಡನೆ ಹಂತದಲ್ಲಿ ಶಿಬಿರದ ತರಬೇತಿ ನಿಗದಿ ಆಗಿತ್ತು. ಆನ್‌ಲೈನ್‌ ತರಬೇತಿಯು ಮುಗಿದಿದೆ. ಆದರೆ ನನಗೆ ಆಹ್ವಾನ ನೀಡಿಲ್ಲ. ಈ ಬಗ್ಗೆ ವಿಚಾರಿಸಿದರೆ ಆಯ್ಕೆಗೆ ತಾತ್ಕಾಲಿಕ ತಡೆ ನೀಡಲಾಗಿದೆ ಎನ್ನುವ ಉತ್ತರವಷ್ಟೇ ಬಂದಿದೆ ಎನ್ನುತ್ತಾರೆ ಸಚಿನ್‌ ಪ್ರತಾಪ್‌
.
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಂತರಂಗ | ಸ್ವಾರ್ಥರಹಿತ ಬೇಡಿಕೆಗಳಿಗೆ ರಾಜಕೀಯದಲ್ಲಿ ಮಾನ್ಯತೆಯಿಲ್ಲ…!

ರಾಜಕೀಯ ಎನ್ನುವುದು ಕೃಷಿ ಹಾಗೂ ಅಡಿಕೆ ಬೆಳೆಗಾರರ ವಿಚಾರದಲ್ಲಿ ಕೂಡಾ ಹೇಗೆ ಇರುತ್ತದೆ,…

34 minutes ago

ಬದುಕು ಪುರಾಣ | ಎಲ್ಲರೊಳಗೂ ‘ಕುಂಭಕರ್ಣ’ನಿದ್ದಾನೆ!

ಮನುಷ್ಯನಿಗೆ ಆಹಾರ, ನಿದ್ರೆಗಳು ಸಹಜ. ವಯೋವೃದ್ಧರಿಗೆ ಬೋಜನದ ನಂತರದ ನಿದ್ರೆಯಿಂದ ಮೈಮನಗಳಿಗೆ ಸ್ಫೂರ್ತಿ.…

48 minutes ago

ದಾವಣಗೆರೆ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ | ಬಾಡಿಗೆ ಆಧಾರದಲ್ಲಿ ಖಾಸಗಿ ಕೊಳವೆಬಾವಿ

ದಾವಣಗೆರೆ ಜಿಲ್ಲೆಯ 6 ತಾಲೂಕುಗಳಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಬಹುದಾದ 197…

54 minutes ago

ಯಾದಗಿರಿ ಜಿಲ್ಲೆಗೆ ತಾಪಮಾನ ಎಚ್ಚರಿಕೆ | ಮುಂದಿನ ಮೂರು ತಿಂಗಳಿನಲ್ಲಿ ಗರಿಷ್ಠ 45 ಡಿಗ್ರಿ ತಾಪಮಾನ ದಾಖಲಾಗುವ ಸಾಧ್ಯತೆ

ಯಾದಗಿರಿ ಜಿಲ್ಲೆಯಲ್ಲಿ ಮುಂದಿನ ಮೂರು ತಿಂಗಳಿನಲ್ಲಿ ಗರಿಷ್ಠ 45 ಡಿಗ್ರಿ ಸೆಲ್ಸಿಯಸ್ ತಾಪಮಾನ…

1 hour ago

ಏಪ್ರಿಲ್ 30 ರವರೆಗೆ ಜೋಗ ಜಲಪಾತಕ್ಕೆ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧ

ವಿಶ್ವವಿಖ್ಯಾತ ಜೋಗ ಜಲಪಾತ ಪ್ರದೇಶದ ವ್ಯಾಪ್ತಿಯಲ್ಲಿ ಪ್ರವಾಸಿಗರಿಗೆ ಮೂಲಸೌಲಭ್ಯ ಒದಗಿಸಲು ಸಮಗ್ರ ಅಭಿವೃದ್ಧಿ…

1 hour ago

ರೈತರಿಗೆ ಕೃಷಿ ಚಟುವಟಿಕೆ ಜೊತೆಗೆ ಜಾನುವಾರು ಸಾಕಾಣಿಕೆಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕಿದೆ

ಕೃಷಿ, ತೋಟಗಾರಿಕೆ, ರೇಷ್ಮೆ ಚಟುವಟಿಕೆಗಳಲ್ಲಿ ಜಿಲ್ಲೆಯ ಸಾಕಷ್ಟು ರೈತರು ತೊಡಗಿಸಿಕೊಂಡಿದ್ದು ಅಂತಹ ರೈತರಿಗೆ…

1 hour ago