ಕಾಬೂಲ್‌ ವಿಮಾನ ನಿಲ್ದಾಣದ ಬೆನ್ನಲ್ಲೇ ಕಜಕಿಸ್ತಾನದ ಸೇನಾ ನೆಲೆಯ ಬಳಿ ಭಾರೀ ಸ್ಪೋಟ

August 26, 2021
10:42 PM

ಅಫ್ಘಾನಿಸ್ತಾನದ ಕಾಬೂಲ್ ವಿಮಾನ ನಿಲ್ದಾಣದ ಹೊರಗೆ ಭೀಕರ 2 ಸ್ಫೋಟ ಸಂಭವಿಸಿದ ಕೆಲ ಹೊತ್ತಿನ ಬಳಿಕ ಕಜಕಿಸ್ತಾನದ ಸೇನಾ ನೆಲೆಯ ಬಳಿಯಲ್ಲೂ ಭಾರೀ ಸ್ಪೋಟ ಸಂಭವಿಸಿದೆ.

ಅಫ್ಘಾನಿಸ್ತಾನದ ಕಾಬೂಲ್ ವಿಮಾನ ನಿಲ್ದಾಣದ ಹೊರಗೆ ಸಂಭವಿಸಿದ ಭೀಕರ ಸ್ಪೋಟದಲ್ಲಿ 13ಕ್ಕೂ ಹೆಚ್ಚು ಜನರು ಸಾವನ್ನಪ್ಪಿರಿವುದು ಪ್ರಾಥಮಿಕ ವರದಿಯಿಂದ ತಿಳಿದು ಬಂದಿದೆ.ಇಲ್ಲಿ ಆತ್ಮಾಹುತಿ ಬಾಂಬರ್ ಗಳು ವಿಮಾನ ನಿಲ್ದಾಣದ ಮೇಲೆ ದಾಳಿ ನಡೆಸುವುದಾಗಿ ಬೆದರಿಕೆ ಹಾಕುತ್ತಿದ್ದಾರೆ ಎಂಬ ಗುಪ್ತಚರ ಮಾಹಿತಿ ಇತ್ತು ಎಂದು ಅಮೆರಿಕ ಮತ್ತು ಮಿತ್ರರಾಷ್ಟ್ರಗಳ ಅಧಿಕಾರಿಗಳು ತಿಳಿಸಿದ್ದಾರೆ. ಅಫ್ಘಾನಿಸ್ತಾನದಿಂದ ಬೃಹತ್ ಸಂಖ್ಯೆಯ ಜನರನ್ನು ಸ್ಥಳಾಂತರಿಸುವ ಪ್ರಯತ್ನದ ನಡುವೆ ಆತ್ಮಹತ್ಯಾ ಬಾಂಬ್‌ ದಾಳಿ ನಡೆದಿದೆ.

ಈ ಬೆನ್ನಲ್ಲೇ ಕಜಕಿಸ್ತಾನದ ಸೇನಾ ನೆಲೆಯ ಬಳಿ ಭಾರೀ ಸ್ಪೋಟ ಸಂಭವಿಸಿದೆ.ಕಜಕಿಸ್ತಾನದ ತಾರಾಜ್ ನ ಸೇನಾ ನೆಲೆಯ ಬಳಿ ಸ್ಪೋಟ ಉಂಟಾಗಿದ್ದು ಬೆಂಕಿ ಹತ್ತಿಕೊಂಡಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಈ ಸ್ಫೋಟದ ಹೊಣೆಯನ್ನು ಯಾವುದೇ ಸಂಘಟನೆಗಳು ಹೊತ್ತುಕೊಂಡಿಲ್ಲ ಎಂದು ವರದಿಗಳು ತಿಳಿಸಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು
September 16, 2026
11:09 PM
by: ದ ರೂರಲ್ ಮಿರರ್.ಕಾಂ
“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ
September 16, 2026
9:14 PM
by: ದ ರೂರಲ್ ಮಿರರ್.ಕಾಂ
ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ
September 16, 2026
3:41 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ
September 16, 2026
2:18 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror