ಅಫ್ಘಾನಿಸ್ತಾನದ ಕಾಬೂಲ್ ವಿಮಾನ ನಿಲ್ದಾಣದ ಹೊರಗೆ ಭೀಕರ 2 ಸ್ಫೋಟ ಸಂಭವಿಸಿದ ಕೆಲ ಹೊತ್ತಿನ ಬಳಿಕ ಕಜಕಿಸ್ತಾನದ ಸೇನಾ ನೆಲೆಯ ಬಳಿಯಲ್ಲೂ ಭಾರೀ ಸ್ಪೋಟ ಸಂಭವಿಸಿದೆ.
ಅಫ್ಘಾನಿಸ್ತಾನದ ಕಾಬೂಲ್ ವಿಮಾನ ನಿಲ್ದಾಣದ ಹೊರಗೆ ಸಂಭವಿಸಿದ ಭೀಕರ ಸ್ಪೋಟದಲ್ಲಿ 13ಕ್ಕೂ ಹೆಚ್ಚು ಜನರು ಸಾವನ್ನಪ್ಪಿರಿವುದು ಪ್ರಾಥಮಿಕ ವರದಿಯಿಂದ ತಿಳಿದು ಬಂದಿದೆ.ಇಲ್ಲಿ ಆತ್ಮಾಹುತಿ ಬಾಂಬರ್ ಗಳು ವಿಮಾನ ನಿಲ್ದಾಣದ ಮೇಲೆ ದಾಳಿ ನಡೆಸುವುದಾಗಿ ಬೆದರಿಕೆ ಹಾಕುತ್ತಿದ್ದಾರೆ ಎಂಬ ಗುಪ್ತಚರ ಮಾಹಿತಿ ಇತ್ತು ಎಂದು ಅಮೆರಿಕ ಮತ್ತು ಮಿತ್ರರಾಷ್ಟ್ರಗಳ ಅಧಿಕಾರಿಗಳು ತಿಳಿಸಿದ್ದಾರೆ. ಅಫ್ಘಾನಿಸ್ತಾನದಿಂದ ಬೃಹತ್ ಸಂಖ್ಯೆಯ ಜನರನ್ನು ಸ್ಥಳಾಂತರಿಸುವ ಪ್ರಯತ್ನದ ನಡುವೆ ಆತ್ಮಹತ್ಯಾ ಬಾಂಬ್ ದಾಳಿ ನಡೆದಿದೆ.
ಈ ಬೆನ್ನಲ್ಲೇ ಕಜಕಿಸ್ತಾನದ ಸೇನಾ ನೆಲೆಯ ಬಳಿ ಭಾರೀ ಸ್ಪೋಟ ಸಂಭವಿಸಿದೆ.ಕಜಕಿಸ್ತಾನದ ತಾರಾಜ್ ನ ಸೇನಾ ನೆಲೆಯ ಬಳಿ ಸ್ಪೋಟ ಉಂಟಾಗಿದ್ದು ಬೆಂಕಿ ಹತ್ತಿಕೊಂಡಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಈ ಸ್ಫೋಟದ ಹೊಣೆಯನ್ನು ಯಾವುದೇ ಸಂಘಟನೆಗಳು ಹೊತ್ತುಕೊಂಡಿಲ್ಲ ಎಂದು ವರದಿಗಳು ತಿಳಿಸಿವೆ.
ಯಾವುದೇ ಬ್ಯಾಂಕು ಅಥವಾ ಸಹಕಾರಿ ಸಂಸ್ಥೆ ರೈತನಿಗೆ ಬೇಕಾಬಿಟ್ಟಿಯಾಗಿ ಅಲ್ಪಾವಧಿ ಬೆಳೆ ಸಾಲ…
ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್…
ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಮಲೆನಾಡಿನ ಗ್ರಾಮೀಣ ಭಾಗಕ್ಕೂ ಶುದ್ಧವಾಗಿರುವ ಕುಡಿಯುವ…
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…
ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…