Advertisement
ಸುದ್ದಿಗಳು

ಹಿರಿಯ ಉಡುಪಿ ಸೀರೆ ನೇಕಾರರಿಗೆ ” ನೇಕಾರ ರತ್ನ ” ಪ್ರಶಸ್ತಿ

Share

ಇಬ್ಬರು ಹಿರಿಯ ಕಾಯಕ ಯೋಗಿಗಳಿಗೆ ಕದಿಕೆ ಟ್ರಸ್ಟ್ ನ ಅತ್ಯುನ್ನತ ” ನೇಕಾರ ರತ್ನ ” ಪ್ರಶಸ್ತಿ ನೀಡಿ ಗೌರವಿಸಲಿದೆ.  ಅಳಿವಿನಂಚಿಗೆ ತಲುಪಿದ್ದ ಉಡುಪಿ ಸೀರೆ ನೇಕಾರಿಕೆ ಈಗ ಕದಿಕೆ ಟ್ರಸ್ಟ್ ನ ಪ್ರಯತ್ನದಿಂದ ಪುನಃಶ್ಚೇತನಗೊಂಡಿದೆ.

ಸಂಜೀವ ಶೆಟ್ಟಿಗಾರ್(74   ವರ್ಷ ) ಅಧ್ಯಕ್ಷರು, ಶಿವಳ್ಳಿ ಪ್ರಾಥಮಿಕ ನೇಕಾರರ ಸೇವಾ ಸಹಕಾರಿ ಸಂಘ ಮತ್ತು ಸೋಮಪ್ಪ ಜತ್ತನ್ನ (89 ವರ್ಷ) ನಿರ್ದೇಶಕರು , ಉಡುಪಿ ಪ್ರಾಥಮಿಕ ನೇಕಾರರ ಸೇವಾ ಸಹಕಾರ ಸಂಘ ಇವರು ತಮ್ಮ ಜೀವಮಾನದ ಸಾಧನೆಗಾಗಿ ಕದಿಕೆ ಟ್ರಸ್ಟ್ , ಕೈಮಗ್ಗ ನೇಕಾರರಿಗೆ ಕೊಡ ಮಾಡುವ, ಪ್ರತಿಷ್ಟಿತ “ನೇಕಾರ ರತ್ನ ” ಪ್ರಶಸ್ತಿಗೆ ಆಯ್ಕೆ ಆಗಿದ್ದಾರೆ. ಇವರಿಬ್ಬರು ಅವಿಭಜಿತ ದ. ಕ. ಜಿಲ್ಲೆಯ ಅತ್ಯಂತ ಹಿರಿಯ ಸಕ್ರಿಯ ನೇಕಾರರು. ಸಂಜೀವ ಶೆಟ್ಟಿಗಾರ್ ಅವರು ಸುಮಾರು 74 ವರ್ಷಗಳಿಂದ ನಿರಂತರ ನೇಯ್ಗೆ ಮಾಡುತ್ತಿರುವುದು ಒಂದು ದಾಖಲೆ ಆಗಿದೆ. ಸೋಮಪ್ಪ ಜತ್ತನ್ನ ಅವರು ಕಳೆದ 66 ವರುಷಗಳಿಂದ ನೇಕಾರಿಕೆಯ ಕಾಯಕದಲ್ಲಿ ನಿರತರಾಗಿದ್ದಾರೆ.

ಸಂಜೀವ ಶೆಟ್ಟಿಗಾರ್ ಈಗ ಅಳಿದು ಹೋದ ಮುತ್ತು ಬಾರ್ಡರ್ ನೇಯ್ಗೆ ಯನ್ನು 2019 ರವರೆಗೆ ನೇಯುತ್ತಿದ್ದರು . ಈಗಲೂ ತಮ್ಮದೇ ವಿನ್ಯಾಸದ ಸೆರಗಿನಲ್ಲಿ ಬುಟ್ಟಾ ಇರುವ 60 ಕೌಂಟ್ ಸೀರೆಗಳನ್ನು ನೇಯುವುದರ ಜೊತೆಗೆ ಅನೇಕ ನೇಕಾರರಿಗೆ ಹಾಸು ಮತ್ತು ವಿನ್ಯಾಸ ಮಾಡುವ ಕೆಲಸ ಮಾಡುತ್ತಾ ಸಕ್ರಿಯರಾಗಿದ್ದಾರೆ. ನೇಕಾರರ ಸಂಘದ ಕಾರ್ಯ ಚಟುವಟಿಗಳನ್ನು ಅತ್ಯಂತ ದಕ್ಷತೆಯಿಂದ ನಿರ್ವಹಣೆ ಮಾಡುತ್ತಿದ್ದಾರೆ.

ಸೋಮಪ್ಪ ಜತ್ತನ್ನ ಅವರು 60 ಕೌಂಟ್ ನ ಸಣ್ಣ ಚೌಕುಳಿ ವಿನ್ಯಾಸದ ಅಪೂರ್ವ ಕಟ್ ಬಾರ್ಡರ್ ಉಡುಪಿ ಸೀರೆಗಳನ್ನು ನೇಯುತ್ತಿದ್ದಾರೆ. ಈ ಹಿರಿಯ ಕಾಯಕ ಯೋಗಿಗಳು ಪರಿಸರ ಸ್ನೇಹಿ ಉಡುಪಿ ಸೀರೆ ನೇಕಾರಿಕೆಗೆ ನೀಡಿದ ಕೊಡುಗೆಗಾಗಿ ಪ್ರಶಸ್ತಿಯನ್ನು ನೀಡಲಾಗುತ್ತದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿ ಯೋಜನೆಯ ಪ್ರಗತಿಯಲ್ಲಿ ತುಮಕೂರಿಗೆ ರಾಜ್ಯದಲ್ಲೇ ಮೊದಲ ಸ್ಥಾನ

ಪ್ರಧಾನಮಂತ್ರಿ ಧನ್-ಧಾನ್ಯ ಕೃಷಿ ಯೋಜನೆಯ ಪ್ರಗತಿ ಮೌಲ್ಯಮಾಪನದಲ್ಲಿ ತುಮಕೂರು ಜಿಲ್ಲೆ ಕರ್ನಾಟಕದಲ್ಲಿ ಮೊದಲ…

9 hours ago

ಬರಗಾಲದಲ್ಲೂ ಬೆಳೆ ಉಳಿಸಿದ ಸಾವಯವ ಕೃಷಿ – ಸಾವಯವ ಕೃಷಿ ಅಬ್ಬರಿಸಿ ಬರುವುದಿಲ್ಲ- ಮುಗ್ಗರಿಸಿ ಬೀಳುವುದಿಲ್ಲ..!

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿಯ ಸಾವಯವ ಕೃಷಿಕ ಕಲ್ಲಪ್ಪ ಪಂಡಿತಪ್ಪ ನೇಗಿನಾಳ…

14 hours ago

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ : ಶಕ್ತಿಪೀಠಗಳಲ್ಲಿ ವಿಶೇಷ ಪೂಜೆ, ಮಂಗಳೂರು–ಮಡಿಕೇರಿ–ಶ್ರೀರಂಗಪಟ್ಟಣದಲ್ಲಿ ದಸರಾ ಸಂಭ್ರಮ

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ ಮನೆಮಾಡಿದ್ದು, ಶೃಂಗೇರಿ, ಹೊರನಾಡು, ಕಟೀಲು ಮತ್ತು ಕೊಲ್ಲೂರು ಸೇರಿದಂತೆ…

1 day ago

ಪಶ್ಚಿಮ ಘಟ್ಟ ಉಳಿಸಿ, ಉತ್ತರ ಕನ್ನಡ ರಕ್ಷಿಸಿ : ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಗೆ ವಿರೋಧ

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಬೃಹತ್ ಧರಣಿಯಲ್ಲಿ ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಯನ್ನು…

1 day ago

ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ

ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…

2 days ago

ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ

ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…

2 days ago